ಉಡುಪಿ | ಮೀನು ಮಾರಾಟ ಫೆಡರೇಷನ್‌ಗೆ ನೀಡಿದ 9 ಎಕರೆ ಜಾಗವನ್ನು ಕೂಡಲೇ ರದ್ದುಪಡಿಸಿ : ಧನಂಜಯ ಕಾಂಚನ್

Date:

ಮೀನು ಮಾರಾಟ ಫೆಡರೇಶನ್‌ಗೆ ಗುತ್ತಿಗೆ ಆಧಾರದಲ್ಲಿ ನೀಡಿರುವ ಬಂದರು ಇಲಾಖೆಯ ಮಲ್ಪೆಯ 9 ಎಕರೆ ಜಾಗವನ್ನು ಕೂಡಲೇ ವಾಪಸು ಪಡೆಯಬೇಕೆಂದು ಮಲ್ಪೆ ಹನುಮಾನ್ ನಗರದ ಶ್ರೀ ಹನುಮಾನ್ ವಿಠೋಬಾ ಭಜನಾ ಮಂದಿರದ ಸದಸ್ಯರು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಹೋರಾಟಕ್ಕೂ ಮುಂದಾಗುವುದಾಗಿ ಅವರು ಎಚ್ಚರಿಸಿದ್ದಾರೆ.

- Advertisement -

ಈ ಬಗ್ಗೆ ಇಂದು ಮಲ್ಪೆಯ ಶ್ರೀ ಹನುಮಾನ್ ವಿಠೋಬಾ ಭಜನಾ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂದಿರದ ಪ್ರಮುಖರದಾದ ಧನಂಜಯ ಕಾಂಚನ್, ಮಲ್ಪೆ ಸೀವಾಕ್ ಜಟ್ಟಿಯಿಂದ ಬಾಲಕರ ಶ್ರೀರಾಮ ಭಜನಾ ಮಂದಿರವರೆಗೆ ಹರಡಿರುವ 9 ಎಕರೆ ಜಾಗವನ್ನು ಫೆಡರೇಶನ್‌ಗೆ ಗುತ್ತಿಗೆ ಆಧಾರದಲ್ಲಿ ನೀಡಲಾಗಿದೆ. ಆದರೆ ಫೆಡರೇಶನ್ ತಮ್ಮ ಆಡಳಿತ ಮಂಡಳಿಯೊಡನೆ ಯಾವುದೇ ಚರ್ಚೆ ನಡೆಸದೆ, ಕೇವಲ ಶಾಸಕ ಯಶ್ಪಾಲ್ ಸುವರ್ಣ ಅವರ ಸ್ವಹಿತಾಸಕ್ತಿಯಿಂದ ಈ ಜಾಗವನ್ನು ಪಡೆದಿದ್ದಾರೆ. ಜಾಗವನ್ನು ಮೀನುಗಾರಿಕೆ ಚಟುವಟಿಕೆಯ ಹೆಸರಿನಲ್ಲಿ ಪಡೆದುಕೊಂಡರೂ, ವಾಸ್ತವದಲ್ಲಿ ಇಲ್ಲಿ ಜಲಕ್ರೀಡೆ, ಹೋಮ್ ಸ್ಟೇ ಮುಂತಾದ ವಾಣಿಜ್ಯ ಚಟುವಟಿಕೆ ನಡೆಸುವ ಪ್ಲಾನ್ ಹಾಕಿಕೊಂಡಿರುವುದಾಗಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
WhatsApp Image 2025 11 18 at 10.25.39 PM 1

ಈ ಕುರಿತು ಐದು ಭಜನಾ ಮಂದಿರಗಳ ಸದಸ್ಯರು ಸಹ ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಶಾಸಕರನ್ನು ಸಂಪರ್ಕಿಸಿದಾಗ, ಮಂದಿರಕ್ಕೆ ತೊಂದರೆ ಆಗುವುದರಿಂದ ಯೋಜನೆಯನ್ನು ಕೈಬಿಡಲು ಸಿದ್ಧ ಎಂದು ಅವರು ಹೇಳಿಕೆ ನೀಡಿದ್ದರು. ಆದರೆ ಇತ್ತೀಚೆಗೆ ಅವರು ಹನುಮಾನ್ ವಿಠೋಬಾ ಮಂದಿರದ ಎದುರಿನ ಜಾಗವನ್ನು ಮಾತ್ರ ಬಿಟ್ಟು ಉಳಿದ ಪ್ರದೇಶವನ್ನು ಪಡೆಯುವ ಬಗ್ಗೆ ಹೊಸ ಹೇಳಿಕೆ ನೀಡಿದ್ದಾರೆ. ನಮ್ಮ ಆಗ್ರಹ ಕೇವಲ ಎದುರಿನ ಜಾಗಕ್ಕೆ ಮಾತ್ರ ಸೀಮಿತವಲ್ಲ. ಸಂಪೂರ್ಣ 9 ಎಕರೆ ಜಾಗದ ಗುತ್ತಿಗೆ ಆದೇಶವನ್ನು ರದ್ದುಪಡಿಸಲೇಬೇಕು ಎಂದು ಅವರು ಸ್ಪಷ್ಟಪಡಿಸಿದರು.

ಮಂದಿರದ ಸದಸ್ಯರು ಬೇಡಿಕೆಯನ್ನು ತಕ್ಷಣ ಅಂಗೀಕರಿಸುವಂತೆ ಸಂಬಂಧಿತ ಇಲಾಖೆ ಹಾಗೂ ಸರ್ಕಾರಕ್ಕೆ ಮನವಿ ಮಾಡಿದ್ದು, ನಿರಾಕರಿಸಿದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲು ಸಿದ್ದ ಎಂದು ಎಚ್ಚರಿಸಿದ್ದರು.

ಪತ್ರಿಕಾಗೋಷ್ಟಿಯಲ್ಲಿ ಮಂದಿರದ ಅಧ್ಯಕ್ಷರಾದ ಸತೀಶ್‌ ಬಂಗೇರ, ಪ್ರಮುಖರಾದ ಸುರೇಶ್‌ ಸಾಲ್ಯಾನ್‌, ಶೇಖರ್‌ ಪುತ್ರನ್‌, ವಿಜಯ ಸುವರ್ಣ, ಸುಂದರ್‌ ಸಾಲ್ಯಾನ್‌, ತುಕರಾಂ ಮೈಂದನ್‌ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಕಾಂಚನ್‌ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...