ಉಡುಪಿ | ಮೀನುಗಾರರಿಗೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Date:

ಸರಕಾರ ಮೀನುಗಾರರ ಅಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ಹೆಚ್ಚು ಫಲಾನುಭವಿಗಳು ಇರುವ ಹಿನ್ನೆಲೆ, ಹೆಚ್ಚುವರಿ ಅನುದಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ ಮತ್ಸö್ಯ ಸಂಪದ ಯೋಜನೆಯ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮಲ್ಪೆಯು ಸರ್ವಋತು ಬಂದರಾಗಿದ್ದು, ಜಿಲ್ಲೆಯಲ್ಲಿ ಎರಡು ಲಕ್ಷಕ್ಕೂ ಅಧಿಕ ಮೀನುಗಾರರು ಮೀನುಗಾರಿಕೆ ಹಾಗೂ ಪೂರಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಅವರುಗಳಿಗೆ ಸರಕಾರದಿಂದ ವಿವಿಧ ಯೋಜನೆಯಡಿ ನೀಡಲಾಗುವ ಆರ್ಥಿಕ ಸೌಲಭ್ಯ, ಸಹಾಯಧನಗಳ ಕುರಿತ ಮಾಹಿತಿಯನ್ನು ತಲುಪಿಸುವುದರೊಂದಿಗೆ ಯೋಜನೆಯ ಫಲಾನುಭವಿಗಳನ್ನಾಗಿ, ಸ್ವಾವಲಂಭಿ ಜೀವನ ನಡೆಸಲು ಅನುವು ಮಾಡಿಕೊಡಬೇಕು. ಪ್ರಸ್ತುತ ನಿಗಧಿಪಡಿಸಿರುವ ಸೌಲಭ್ಯಗಳು ಹೆಚ್ಚಿನ ಜನರಿಗೆ ತಲುಪಿಸಲು ಆಗುತ್ತಿಲ್ಲ. ಈ ಹಿನ್ನೆಲೆ, ಸರಕಾರಕ್ಕೆ ಹೆಚ್ಚುವರಿ ಅನುದಾನ ಹಾಗೂ ಗುರಿ ನೀಡಲು ಪ್ರಸ್ತಾವನೆ ಸಲ್ಲಿಸಬೇಕಿದೆ ಎಂದು ಸೂಚನೆ ನೀಡಿದರು.

1009703138

ಜಿಲ್ಲೆಯಲ್ಲಿ 5598 ಮೋಟಾರೀಕೃತ ನಾಡದೋಣಿಗಳು, 2017 ಯಾಂತ್ರೀಕೃತ ಮೀನುಗಾರಿಕಾ ದೋಣಿಗಳು ಹಾಗೂ 447 ಸಾಂಪ್ರದಾಯಿಕ ನಾಡದೋಣಿಗಳು ಕಾರ್ಯಾಚರಿಸುತ್ತಿವೆ ಎಂದ ಅವರು, ಕಳೆದ ಸಾಲಿನಲ್ಲಿ ಪಿ.ಎಂ.ಎಂ.ಎಸ್.ವೈ ಯೋಜನೆಯಡಿ ಪಚ್ಚಿಲೆ ಕೃಷಿ ಮಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ ಕಾರ್ಯಕ್ರಮಗಳ ಪ್ರತಿಶತಃ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದರು.

ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳ ಸ್ಥಾಪನೆಗೆ ಜಿಲ್ಲೆಯ 6 ಫಲಾನುಭವಿಗಳಿಗೆ ಸುಮಾರು 200 ಲಕ್ಷ ರೂ. ಸಹಾಯಧನ ಸೌಲಭ್ಯ ಒದಗಿಸಲಾಗಿದೆ ಎಂದ ಅವರು, ಕಳೆದ ಸಾಲಿನಲ್ಲಿ ಸಾಂಪ್ರದಾಯಿಕ ಮೀನುಗಾರರಿಗೆ ಆಳ ಸಮುದ್ರ ಮೀನುಗಾರಿಕಾ ಯಾಂತ್ರೀಕೃತ ದೋಣಿ ನಿರ್ಮಿಸಲು ಸಹಾಯ ಯೋಜನೆಯಡಿ ಜಿಲ್ಲೆಗೆ ಸಾಮಾನ್ಯ ವರ್ಗದಡಿ 8 ಗುರಿ ನಿಗಧಿಪಡಿಸಿದ್ದು, 9 ಅರ್ಜಿಗಳು ಸಲ್ಲಿಕೆಯಾಗಿವೆ. ಲಾಟರಿ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದರು.

ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಕುಮಾರಸ್ವಾಮಿ ಬಿ.ವಿ, ಲೀಡ್ ಬ್ಯಾಂಕ್ ಮ್ಯಾನೆಜರ್ ಹರೀಶ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಆಯ್ಕೆ ಸಮಿತಿಯ ಸದಸ್ಯರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...