ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಬೀದರ್ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಡಾ. ದಿನಕರ್ ಮೋರೆ ಹಾಗೂ ವಕೀಲರಾದ ಜೈರಾಜ ಬುಕ್ಕಾ ಸೇರಿದಂತೆ ಐವರನ್ನು ಬಿಜೆಪಿಯಿಂದ ಆರು ವರ್ಷ ಉಚ್ಚಾಟನೆ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ತಿಳಿಸಿದ್ದಾರೆ.
ಡಾ.ದಿನಕರ ಮೋರೆ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿರುವ ಭಾಲ್ಕಿ ಮಂಡಲ ಮಾಜಿ ಅಧ್ಯಕ್ಷ ರಾವಸಾಬ್ ಬಿರಾದಾರ, ಜನಾರ್ದನ ಬಿರಾದಾರ ಹಾಗೂ ಶರಣಪ್ಪ ಕಡಗಂಚಿ ಅವರು ಪಕ್ಷಕ್ಕೆ ಮುಜುಗರ ಮಾಡುತ್ತಿರುವುದನ್ನು ಪಕ್ಷದ ಶಿಸ್ತು ಉಲ್ಲಂಘನೆ ಎಂದು ಪರಿಗಣಿಸಿ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಉಚ್ಚಾಟಿಸಲಾಗಿದೆ ಎಂದು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ
ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷ ಪದ್ಮಾಕರ ಪಾಟೀಲ ಅವರು ಕೂಡ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಶಿಸ್ತು ಸಮಿತಿಗೆ ಶಿಫಾರಸು ಮಾಡಲಾಗಿದೆ ತಿಳಿಸಿದ್ಧಾರೆ.