ಚಿತ್ರದುರ್ಗ | ಐದು ಗ್ಯಾರಂಟಿ ಯೋಜನೆಗಳು ಜನಪರವಾಗಿವೆ : ಶಾಸಕ ಟಿ. ರಘುಮೂರ್ತಿ

Date:

ನಮ್ಮ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಇವೆಲ್ಲವೂ ಜನಪರವಾದ ಯೋಜನೆಗಳಾಗಿವೆ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು.

ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಹಯೋಗದಲ್ಲಿ ತುರುವನೂರು ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.

“ಚುನಾವಣಾ ಪೂರ್ವದಲ್ಲಿ ನಾವು ನೀಡಿದ ಭರವಸೆಯಂತೆ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಸೇರಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಜನರಿಗೆ ತಲುಪಿಸಿದ್ದೇವೆ. ಇವು ಜನರಿಗೆ ಆರ್ಥಿಕವಾಗಿ ಸಹಕಾರಿಯಾಗಲಿವೆ” ಎಂದು ತಿಳಿಸಿದರು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮಳೆಯ ಕೊರತೆಯಿಂದ ಪ್ರಸ್ತುತ ಬರ ಪರಿಸ್ಥಿತಿ ಇರುವುದರಿಂದ ಜಾನುವಾರುಗಳನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಇಂದು ಗೋಶಾಲೆಯನ್ನು ಪ್ರಾರಂಭಿಸಿದ್ದೇವೆ, ಇದರ ಸದುಪಯೋಗ ಮಾಡಿಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರ ವಿರೋಧ; ಪ್ರೇಮಿಗಳಿಬ್ಬರು ಆತ್ಮಹತ್ಯೆ

ಈ ಸಂದರ್ಭದಲ್ಲಿ ಚಿತ್ರದುರ್ಗ ತಹಸಿಲ್ದಾರ್ ನಾಗವೇಣಿ, ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಸುಧಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೀಪಾ ಮಹೇಶ್, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಸದಸ್ಯರುಗಳು, ಮುಖಂಡರುಗಳಾದ ಸಂತೋಷ, ಕಾಕಿ ಹನುಮಂತರೆಡ್ಡಿ, ವೀವೇಕಪ್ಪ, ನಾಗರಾಜ್, ಪವನ್ ಕುಮಾರ್,ಡಿಆರ್ ಮಂಜುನಾಥ್, ಮುಖಂಡರು, ಸಾರ್ವಜನಿಕರು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ...