ಕೃಷ್ಣ, ಭೀಮಾ ನದಿ ತೀರದಲ್ಲಿ ಪ್ರವಾಹ ಭೀತಿ; ತೀವ್ರ ರಕ್ಷಣಾ – ಪರಿಹಾರ ಕ್ರಮಕ್ಕೆ ಸಿಎಂ ಸೂಚನೆ

Date:

Advertisements

ಕಲ್ಬುರ್ಗಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಜೊತೆಗೆ, ಮಹಾರಾಷ್ಟ್ರದಲ್ಲಿಯೂ ಹೆಚ್ಚು ಮಳೆಯಾಗುತ್ತಿರುವ ಕಾರಣ, ಉಜನಿ ಮತ್ತು ನೀರ ಜಲಾಶಯಗಳಿಂದ ಕೃಷ್ಣ ಮತ್ತು ಭೀಮಾ ನದಿಗೆ ಹೆಚ್ಚಿನ ನೀರು ಬಿಡಲಾಗುತ್ತಿದೆ. ಪರಿಣಾಮವಾಗಿ, ಕರ್ನಾಟಕದಲ್ಲಿ ಕೃಷ್ಣ ಮತ್ತು ಭೀಮಾ ನದಿ ತೀರದಲ್ಲಿ ಪ್ರವಾಹದ ಭೀತಿ ಆವರಿಸಿದೆ. ಹೀಗಾಗಿ, ಕಲಬುರಗಿ, ಬಿಜಾಪುರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಪರಿಸ್ಥಿತಿಯ ಮೇಲೆ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಕ್ರಮಗಳು ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಪ್ರವಾಹ ಭೀತಿ ಇರುವ ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಸಿಇಒಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಈದಿನ.ಕಾಮ್ ಗ್ರೌಂಡ್‌ ರಿಪೋರ್ಟ್‌ |ತೆವಳುತ್ತಿರುವ ಜಾತಿವಾರು ಸಮೀಕ್ಷೆ- ಸಮಸ್ಯೆಗಳ ಸುರಿಮಳೆ, ಶೇ.2ರಷ್ಟು ಗುರಿ ಮುಟ್ಟಲೂ ವಿಫಲ!

ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು. ಮಾನವ ಮತ್ತು ರಾಸುಗಳ, ಜಾನವಾರುಗಳ ಪ್ರಾಣ ಹಾನಿ ಆಗದಂತೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ‌ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

Download Eedina App Android / iOS

X