ಬೀದರ ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿ ಹಾಗೂ ಮಾಂಜ್ರಾ ನದಿ ಮತ್ತು ಕಾರಂಜಾ ಜಲಾಶಯದಿಂದ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿ ಅವಲೋಕನ ನಡೆಸಿದರು.
ಇದಕ್ಕೂ ಮುನ್ನ ಕಲಬುರಗಿ ಜಿಲ್ಲೆಯ ಪ್ರವಾಹ ಪರಿಸ್ಥಿತಿಯನ್ನು ವೈಮಾನಿಕ ಸಮೀಕ್ಷೆ ನಡೆಸಿದರು. ಬಳಿಕ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್ ಅವರು ಸಿಎಂ ಅವರೊಂದಿಗೆ ವೈಮಾನಿಕ ಸಮೀಕ್ಷೆ ನಡೆಸಿದರು.
ಪ್ರವಾಹದಿಂದ ಜಿಲ್ಲೆಯಲ್ಲಿ ಕೃಷಿಭೂಮಿ, ಮನೆಗಳು ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಉಂಟಾದ ಭಾರಿ ಹಾನಿ ಬಗ್ಗೆ ಸಚಿವದ್ವಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿದರು.
ಇದನ್ನೂ ಓದಿ : ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು