ಕೆ ಆರ್ ಪೇಟೆ | ಗವಿಮಠ ವಸತಿ ಶಾಲೆಗೆ ಸೇರಿದ ಆಹಾರ ದಾಸ್ತಾನು ರೈಸ್ ಮಿಲ್ ನಲ್ಲಿ ಪತ್ತೆ; ದೂರು ನೀಡಿದ ರೈತಸಂಘ

Date:

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರ ದಾಸ್ತಾನು, ಪಟ್ಟಣದ ವಿಜಯಲಕ್ಷ್ಮಿ ರೈಸ್ ಮಿಲ್ ನಲ್ಲಿ ಇಳಿಸುವುದನ್ನು ಕರ್ನಾಟಕ ರಾಜ್ಯ ರೈತ ಸಂಘದ ಕರೋಟಿ ತಮ್ಮೆಗೌಡ ಅವರು ಪತ್ತೆ ಮಾಡಿ ಲಾರಿ ಸಮೇತ ಪೊಲೀಸರ ಸುಪರ್ದಿಗೆ ಒಪ್ಪಿಸಿದ್ದಾರೆ.

- Advertisement -

ದಿನಾಂಕ-17-03-2026ರಂದು ಸಂಜೆ 4ರ ಸುಮಾರಿನಲ್ಲಿ ರೈತ ಮುಖಂಡ ತಮ್ಮೆಗೌಡರವರು ಜಾನುವಾರುಗಳಿಗೆ ರೈಸ್ ಮಿಲ್ ನಿಂದ ತೌಡು ತರಳು ತೆರಳಿದ್ದ ಸಮಯದಲ್ಲಿ, KA54-2631 ನಂಬರಿನ ಲಾರಿಯಿಂದ ವಸತಿ ಶಾಲೆಗೆ ಸೇರಿದ ಅಕ್ಕಿ ಮತ್ತು ಗೋದಿ ಇಳಿಸುತ್ತಿರುವುದನ್ನು ಕಂಡು ವಿಚಾರಿಸಿದಾಗ ಭ್ರಷ್ಟಾಚಾರ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ತಕ್ಷಣವೇ ರೈತ ಮುಖಂಡರಾದ ಕರೋಟಿ ತಮ್ಮೆಗೌಡ ಹಾಗು ಮರುವಿನಹಳ್ಳಿ ಶಂಕರ್ ಜಿಲ್ಲಾಧಿಕಾರಿ ಡಾ. ಕುಮಾರ ಅವರಿಗೆ ಕರೆ ಮಾಡಿ ಈ ಬಗ್ಗೆ ತಿಳಿಸಿದಾಗ, ಪರಿಶೀಲನೆ ನಡೆಸಿ, ಸೂಕ್ತಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅದರಂತೆ, ಸ್ಥಳಕ್ಕೆ ಭೇಟಿ ನೀಡಿದ ಶಿರಸ್ತೆದಾರ್ ಈ ಬಗ್ಗೆ ವಿಚಾರಣೆ ನಡೆಸಿದಾಗ ಗವಿಮಠ ವಸತಿ ಶಾಲೆಗೆ ಸೇರಿದ ಆಹಾರ ದಾಸ್ತಾನು ಎಂಬುದು ಖಚಿತವಾಗಿದೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಸಾಹಿತಿಗಳು ಮನರಂಜನೆಗಾಗಿ ಬರಹ ಸೀಮಿತಗೊಳಿಸದೆ ಸಮಾಜದ ಮಾರ್ಗದರ್ಶಕರಾಗಬೇಕು: ಸಿ ಕೆ ಕಾವೇರಿ

ವಸತಿ ಶಾಲೆಗೆ ತೆರಳಬೇಕಿದ್ದ ಆಹಾರ ದಾಸ್ತಾನು ರೈಸ್ ಮಿಲ್ ಗೆ ಬಂದುದರ ವಿಚಾರವಾಗಿ ನೀಡಿರುವ ದೂರಿನ ಅನುಸಾರ 210 ಚೀಲ ಅಕ್ಕಿ-ಗೋದಿ, ಲಾರಿ ಹಾಗು ಸಂಬಂಧಪಟ್ಟವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...