ಧಾರವಾಡ ಲೋಕಸಭಾ ಕ್ಷೇತ್ರ | ಪ್ರಲ್ಹಾದ್‌ ಜೋಶಿ ಬದಲು ಹೊಸ ಮುಖಕ್ಕೆ ಮನ್ನಣೆ ನೀಡಲು ಲಿಂಗಾಯತರ ಒತ್ತಾಯ

Date:

2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ 13 ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್‌ ನಿರಾಕರಿಸಲಾಗುತ್ತಿದೆ ಎಂಬ ವಿಚಾರ ಈಗ ಸದ್ದು ಮಾಡುತ್ತಿದೆ. ಈ ಕುರಿತು ಮಾಧ್ಯಮಗಳಲ್ಲೂ ಸುದ್ದಿಗಳು ಪ್ರಕಟವಾಗುತ್ತಿವೆ.

ಈ ನಡುವೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಹೊಸ ಮುಖಕ್ಕೆ ಬಿಜೆಪಿ ಮನ್ನಣೆ ನೀಡಬೇಕು ಎಂಬ ಕೂಗು ಕೇಳಿಬಂದಿದೆ. ಈ ಕುರಿತು ವೀರಶೈವ ಲಿಂಗಾಯತ ಅಫೀಷಿಯಲ್‌ ಟಿಟ್ಟರ್‌ ಖಾತೆ ಮೂಲಕ ಟ್ವೀಟ್‌ ಮಾಡಲಾಗಿದೆ.

“ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಹೊಸ ಮುಖದ ಅವಶ್ಯಕತೆ ಇದೆ. ಪ್ರಲ್ಹಾದ್‌ ಜೋಶಿ ಅವರು 2004 ರಿಂದ 2023ವರಗೆ ಧಾರವಾಡ ಕ್ಷೇತ್ರವನ್ನು ಆಳಿದ್ದಾರೆ. ಆದ್ದರಿಂದ ಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಹೊಸಬರಿಗೆ ಅವಕಾಶ ಮಾಡಿಕೊಡಬೇಕು” ಎಂದು ವೀರಶೈವ ಲಿಂಗಾಯತ ಸಭಾ ಆಗ್ರಹಿಸಿದೆ.

ವೀರಶೈವ ಲಿಂಗಾಯತ ಮಾಡಿರುವ ಈ ಟ್ವೀಟ್‌ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಈ ಮೂಲಕ ಲಿಂಗಾಯತ ಸಮುದಾಯ ಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಲ್ಹಾದ್‌ ಜೋಶಿ ಅವರನ್ನು ಕೈ ಬಿಡುವ ಸೂಚನೆಯನ್ನು ಈಗಲೇ ನೀಡಿದಂತೆ ಕಾಣುತ್ತಿದೆ.‌

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ...

ಕಾವೇರಿ ವಿವಾದ | ಬೆಂಗಳೂರು ಬಂದ್‌ಗೆ ಎಫ್‌ಐಟಿಯು ಬೆಂಬಲ: ಅಬ್ದುಲ್ ರಹಿಮಾನ್

ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಗೆ ತಿದ್ದುಪಡಿ: ಮಲ್ಲಿಕಾರ್ಜುನ ಖರ್ಗೆ

2024ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರುವುದಾಗಿ...

ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌...