ಬೀದರ್‌ | ಮಾಜಿ ಸಚಿವ ಎಚ್.ಆಂಜನೇಯ ಅವರನ್ನು ಎಮ್‌ಎಲ್‌ಸಿ ಮಾಡುವಂತೆ ಒತ್ತಾಯ

Date:

Advertisements

ದಲಿತ, ಶೋಷಿತ ಸಮುದಾಯಗಳ ನಾಯಕ ಮಾಜಿ ಸಚಿವ ಎಚ್.ಆಂಜನೇಯ ಅವರನ್ನು ಕಾಂಗ್ರೆಸ್‌ ಸರ್ಕಾರ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ಎಚ್.ಆಂಜನೇಯ ಅಭಿಮಾನಿ ಬಳಗದ ಕಮಲಾಕರ ಎಲ್.ಹೆಗಡೆ ಆಗ್ರಹಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಅಖಿಲ ಕರ್ನಾಟಕ ಎಚ್. ಆಂಜನೇಯ ಅಭಿಮಾನಿ ಬಳಗದ ರಾಜ್ಯಧ್ಯಕ್ಷ ದೇವದಾಸ ಎಮ್. ಚಿಂತಲಗೇರಾ ಅವರ ಆದೇಶದ ಮೇರೆಗೆ ಕರೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಗುತ್ತಿಗೆದಾರರ ಮೀಸಲಾತಿ ಜಾರಿಗೆ ತಂದು ಗುತ್ತೆಗೆದಾರರ ಪಾಲಿನ ಅನ್ನದಾತರಾಗಿದ್ದಾರೆ. ಆಂಜನೇಯ ಅವರು ರಾಜ್ಯದಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಾಂಗ್ರೆಸ್‌ ಸರ್ಕಾರದಲ್ಲಿ ಎಚ್.ಆಂಜನೇಯ ಅವರನ್ನು ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಒತ್ತಾಯಿಸಿದರು.

Advertisements

ಸುಮಾರು ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಪಕ್ಷದ ಏಳಿಗಾಗಿ ಶ್ರಮಿಸಿದ್ದಾರೆ. ನಗರಸಭೆ ಸದಸ್ಯ ಸ್ಥಾನದಿಂದ ಸಮಾಜ ಕಲ್ಯಾಣ ಇಲಾಖೆ ಸಚಿವರಾಗುವವರೆಗೆ ನಿರಂತರವಾಗಿ ಪಕ್ಷ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ. ಆದರೆ ಕಳೆದ ಬಾರಿ ವಿಧಾನ ಸಭೆ ಚುನಾವಣೆಯಲ್ಲಿ ರಾಜಕೀಯ ಪಿತೂರಿಯಿಂದ ಅಲ್ಪ ಮತಗಳ ಅಂತರದಿಂದ ಸೋಲಬೇಕಾಯಿತು. ಇಂತಹ ಪಕ್ಷನಿಷ್ಠೆ ಹಾಗೂ ಸರ್ವ ಸಮುದಾಯವನ್ನು ಸಮಾನವಾಗಿ ತೆಗೆದುಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು.

ರಾಜ್ಯದಾದ್ಯಂತ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ವಸತಿ ನಿಲಯಗಳು, ಅಂಬೇಡ್ಕರ್ ಭವನ, ಸೇವಾಲಾಲ ಭವನ, ಜಗಜೀವನರಾಂ ಭವನ, ಕನಕ ಭವನ, ವಾಲ್ಮೀಕಿ ಭವನ ನಿರ್ಮಿಸಿದ್ದಲ್ಲದೆ, ಒಳಮೀಸಲಾತಿ ಜಾರಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಆದ್ದರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಅವರು ಆಂಜನೇಯ ಅವರಿಗೆ ಎಂಎಲ್‌ಸಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ರಾಜಕಾರಣಿಗಳು ಹೇಳಿದಂತೆ ಮಠಾಧೀಶರು ಕೇಳುವ ಸ್ಥಿತಿಯಿದೆ : ಸಾಣೇಹಳ್ಳಿ ಶ್ರೀ

ಅಖಿಲ ಕರ್ನಾಟಕ ಹೆಚ್.ಆಂಜನೇಯ ಅಭಿಮಾನಿಗಳ ಬಳಗದ ಜಿಲ್ಲಾಧ್ಯಕ್ಷ ಅಶೋಕ ಕಾರಪೆಂಟರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಪಿವನರಾಜ ನೀಲನೊರ, ತಾಲೂಕಾ ಅಧ್ಯಕ್ಷ ವಿನೋದ ನಾಗನಕೇರಾ, ಕಾಂಗ್ರೆಸ ಮುಖಂಡ ಹರೀಶ ಗಾಯಕವಾಡ, ಸಮಾಜದ ಮುಖಂಡರಾದ ರಾಜಕುಮಾರ ಶಾಪುರಕರ, ಸಾಲೋಮನ ಭಂಗೆ, ಸಾಗರ ಅಲೀಪುರ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X