ಬೀದರ್‌ | ಕಾರಂಜಾ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ

Date:

Advertisements

ಬೀದರ್‌ ಜಿಲ್ಲೆಯ ಜೀವನಾಡಿ ಆಗಿರುವ ಕಾರಂಜಾ ಜಲಾಶಯ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬೆಳಗಾವಿ ಸುವರ್ಣ ಸೌಧದಲ್ಲಿ ಗುರುವಾರ ಕಾರಂಜಾ ಯೋಜನೆ ಸಂತ್ರಸ್ರರ ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ, ಸಂತ್ರಸ್ತರ ಬೇಡಿಕೆ ಅನುಷ್ಠಾನದ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದರು.

ತಮ್ಮನ್ನು ಭೇಟಿ ಮಾಡಿದ ನಿಯೋಗ ಮತ್ತು ಮುಖಂಡರುಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ತಾಂತ್ರಿಕ ಸಮಿತಿಯೊಂದನ್ನು ರಚಿಸಿ, ಸಮಿತಿ ನೀಡುವ ವರದಿಯಾಧರಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

Advertisements
WhatsApp Image 2024 12 19 at 2.19.28 PM

ಕಾರಂಜಾ ಜಲಾಶಯ ನಿರ್ಮಾಣಕ್ಕೆ 1972-73ರಲ್ಲಿ ಭೂಸ್ವಾಧೀನವಾಗಿತ್ತು. ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಎಕರೆಗೆ ರೂ ₹3 ಸಾವಿರದಂತೆ 1981-86ರಲ್ಲಿ ಅಂದಿನ ಮಾರುಕಟ್ಟೆ ಬೆಲೆ ಆಧರಿಸಿ ಪರಿಹಾರ ನೀಡಲಾಗಿತ್ತು. ಆದರೆ ಪರಿಹಾರ ಧನದ ಬಗ್ಗೆ ತಕರಾರು ಎತ್ತಿ ನ್ಯಾಯಾಲಯದ ಮೊರೆ ಹೋದ ಸಂತ್ರಸ್ತರು ಹೆಚ್ಚು ಪರಿಹಾರ ಧನ ಪಡೆದಿದ್ದರು. ನ್ಯಾಯಾಲಯದ ಮೊರೆ ಹೋಗದ ರೈತರು ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸಿ ಕಳೆದ 895 ದಿನಗಳಿಂದ ಬೀದರ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಬ್ಬಬ್ಬಾ! ಏನ್ ಚಳಿ ಅಂತೀರಾ…

ಸಚಿವರಾದ ರಹೀಂ ಖಾನ್, ಕೆಕೆಡಿಬಿ ಅಧ್ಯಕ್ಷ ಅಜಯ ಸಿಂಗ್ ಹಾಗೂ ಜಿಲ್ಲೆಯ ಶಾಸಕರು ಸೇರಿದಂತೆ ಹಿರಿಯ ಅಧಿಕಾರಿಗಳು, ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X