ಸ್ವಾತಂತ್ರ್ಯ ಹೋರಾಟಗಾರ, ಮಾಜಿ ವಿಧಾನ ಪರಿಷತ್ ಸದಸ್ಯ ಕೇಶವರಾವ್ ನಿಟ್ಟೂರಕರ್ (102) ಗುರುವಾರ ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತಃ ಭಾಲ್ಕಿ ತಾಲ್ಲೂಕಿನ ನಿಟ್ಟೂರ್(ಬಿ) ಗ್ರಾಮದವರಾದ ಕೇಶವರಾವ್ ನಿಟ್ಟೂರಕರ್ ಐದು ದಶಕ ವಕೀಲ್ ವೃತ್ತಿ ಮಾಡಿದ್ದರು. ವಿಧಾನ ಪರಿಷತ್ ಸದಸ್ಯರಾಗಿ, ವಿಧಾನ ಪರಿಷತ್ ಉಪಸಭಾಪತಿಗಳು ಕಾರ್ಯ ನಿರ್ವಹಿಸಿದ್ದರು.
ಮಾಜಿ ಸಚಿವ ಭೀಮಣ್ಣ ಖಂಡ್ರೆ ಒಡನಾಡಿಯಾಗಿದ್ದ ಅವರು ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾಗಿದ್ದರು.
ಮೃತರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರಿದ್ದಾರೆ.