ಮಂಗಳೂರು | ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ ನಾಪತ್ತೆ: ಸೇತುವೆ ಮೇಲೆ ಕಾರು ಪತ್ತೆ

Date:

ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಕೂಳೂರು ಸೇತುವೆಯ ಬಳಿ ನಾಪತ್ತೆಯಾಗಿದ್ದಾರೆ.

- Advertisement -

ಇಂದು ಮುಂಜಾನೆ 6 ಗಂಟೆಗೆ ಕದ್ರಿ ಅಗ್ನಿಶಾಮಕ ಠಾಣೆಗೆ ಕರೆ ಬಂದಿದ್ದು, ಮುಮ್ತಾಜ್ ಅಲಿ ಅವರ ಬಿಎಂಡಬ್ಲ್ಯೂ ಕಾರು ಸೇತುವೆಯ ಬಳಿ ಪಾರ್ಕ್ ಮಾಡಿರುವುದು ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅವರ ನಾಪತ್ತೆಯ ಹಿನ್ನೆಲೆಯಲ್ಲಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದ್ದು, ಕದ್ರಿ ಮತ್ತು ಪಾಂಡೇಶ್ವರ ಅಗ್ನಿಶಾಮಕ ಠಾಣೆಗಳ ಸಿಬ್ಬಂದಿ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಬಂದು 2 ಬೋಟ್‌ಗಳೊಂದಿಗೆ ಕೂಳೂರಿನ ಫಲ್ಗುಣಿ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈವರೆಗೆ ಮುಮ್ತಾಜ್ ಅಲಿ ಪತ್ತೆಯಾಗಿಲ್ಲ, ಮತ್ತು ಶೋಧ ಮುಂದುವರಿದಿರುವುದಾಗಿ ತಿಳಿದು ಬಂದಿದೆ. ವಿಷಯ ಹರಿದಾಡುತ್ತಿದ್ದಂತೆಯೇ ನೂರಾರು ಮಂದಿ ಕೂಳೂರು ಸೇತುವೆಯ ಬಳಿ ಜಮಾಯಿಸಿದ್ದಾರೆ.

1001931414

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಸೇರಿದಂತೆ ಹಲವು ಮಂದಿ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಘಟನಾ ಸ್ಥಳದಲ್ಲಿ ಸುದ್ದಿಸಂಸ್ಥೆ ಎಎನ್‌ಐ ಪ್ರತಿನಿಧಿಯೊಂದಿಗೆ ಮಾತನಾಡಿರುವ ಪೊಲೀಸ್ ಕಮಿಷನರ್, “ಇಂದು ಮುಂಜಾನೆ ಕೂಳೂರು ಸೇತುವೆಯ ಬಳಿ ಉದ್ಯಮಿ ಮುಮ್ತಾಜ್ ಅಲಿ ಅವರ ವಾಹನ ಪತ್ತೆಯಾಗಿದೆ ಎಂಬ ಮಾಹಿತಿ ನಮಗೆ ಬಂತು. ಅವರು ಸೇತುವೆಯಿಂದ ಜಿಗಿದಿರಬಹುದು ಎಂಬ ಅನುಮಾನ ಇದೆ” ಎಂದು ತಿಳಿಸಿದ್ದಾರೆ.

“ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬೆಳಗ್ಗೆ ಮೂರು ಗಂಟೆ ಸುಮಾರಿಗೆ ತನ್ನ ಕಾರಿನಲ್ಲಿ ಮನೆಯಿಂದ ಹೊರಟು ನಗರದೆಲ್ಲೆಡೆ ಸುತ್ತಾಡಿದ್ದು, 5 ಗಂಟೆ ಸುಮಾರಿಗೆ ಕೂಳೂರು ಸೇತುವೆ ಬಳಿ ಕಾರನ್ನು ನಿಲ್ಲಿಸಿದ್ದಾರೆ‌. ನಂತರ ಅವರ ಮಗಳು ಅಪಘಾತವಾಗಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಸ್‌ಡಿಆರ್‌ಎಫ್ ಮತ್ತು ಕೋಸ್ಟ್ ಗಾರ್ಡ್ ತಂಡಗಳು ನದಿಯಲ್ಲಿ ಹುಡುಕಾಟ ನಡೆಸುತ್ತಿವೆ ಮತ್ತು ಅವರು ನದಿಗೆ ಹಾರಿದ್ದಾರೆಯೇ ಎಂದು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಕಮಿಷನರ್ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

1001931730 1
1001931414 1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...