ಯಾದಗಿರಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (70) ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಹಲವು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿದ್ದ ಮುದ್ನಾಳ ಮೊದಲ ಬಾರಿಗೆ 2018ರಲ್ಲಿ ಬಿಜೆಪಿಯಿಂದ ಯಾದಗಿರಿ ಮತಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು.
ಕಳೆದ 2023ರ ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿ ಚನ್ನಾರಡ್ಡಿ ಪಾಟೀಲ್ ವಿರುದ್ಧ ಸ್ಫರ್ಧಿಸಿ ಪರಾಭವಗೊಂಡಿದ್ದರು. ಕಲ್ಯಾಣ ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರ ದಿ.ವಿಶ್ವನಾಥರಡ್ಡಿ ಮುದ್ನಾಳ ಅವರ ಪುತ್ರರಾಗಿದ್ದ ವೆಂಕಟರಡ್ಡಿ ಮುದ್ನಾಳ ಕಲ್ಯಾಣ ಕರ್ನಾಟಕ ಉತ್ಸವ ದಿನದಂದೇ ನಿಧನರಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ʼಈ ದಿನʼದ ತನಿಖಾ ವರದಿಗೆ ವ್ಯಾಪಕ ಪ್ರಶಂಸೆ; ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯ
ವೆಂಕಟರೆಡ್ಡಿ ಮುದ್ನಾಳ ಅವರ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಯಾದಗಿರಿ ನಗರಕ್ಕೆ ಕರೆತರಲಾಗುತ್ತಿದ್ದು, ಬುಧವಾರ ಸಂಜೆ ಅವರ ಸ್ವಗ್ರಾಮ ಮುದ್ನಾಳ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.