ಎಎಸ್‌ಐ ಮೇಲೆ ಹಲ್ಲೆ ಪ್ರಕರಣ: ಮಾಜಿ ಶಾಸಕ ವಿ.ಎಸ್‌ ಪಾಟೀಲ್ ಪುತ್ರ ಬಂಧನ

Date:

12 ವರ್ಷಗಳ ಹಿಂದೆ ಎಎಸ್‌ಐ ಬಾಲಕೃಷ್ಣ ಪಾಲೇಕರ್ ಮೇಲೆ ಹಲ್ಲೆ ಹಾಗೂ ಎರಡು ಚೆಕ್‌ಬೌನ್ಸ್‌ ಪ್ರಕರಣಗಳಲ್ಲಿ ಮಾಜಿ ಶಾಸಕ ವಿ.ಎಸ್‌ ಪಾಟೀಲ್ ಅವರ ಪುತ್ರ ಬಾಪು ಗೌಡ ಪಾಟೀಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಉಪ ಕಾರಾಗೃಹದಲ್ಲಿ ಇರಿಸಲಾಗಿದೆ.

2011ರಲ್ಲಿ ಬಾಪುಗೌಡಗೆ ಸೇರಿದ ವಾಹನವನ್ನು ಪೊಲೀಸರು ಹಿಡಿದಿದ್ದರು. ಪ್ರಕರಣ ಸಂಬಂಧ ಮುಂಡಗೋಡದ ಅರಣ್ಯ ಇಲಾಖೆಯ ಐಬಿಯಲ್ಲಿ ಆಧಿಕಾರ ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ವೇಳೆ, ಎಎಸ್‌ಐ ಬಾಲಕೃಷ್ಣ ಅವರ ಮೇಲೆ ಬಾಪುಗೌಡ ಮತ್ತು ಆತನ 15 ಮಂದಿ ಸಹಚರರು ಕುಡಿತ ಅಮಲಿನಲ್ಲಿ ಹಲ್ಲೆ ನಡೆಸಿದ್ದರು. ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಆರೋಪಿಗಳ ವಿರುದ್ಧ ಎಐಎಸ್‌ ಬಾಲಕೃಷ್ಣ ಅವರು ನ್ಯಾಯಾಲಯದಲ್ಲಿ ಬಾಪುಗೌಡ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಮತ್ತು ಹಲ್ಲೆ ಪ್ರಕರಣ ದಾಖಲಿಸಿದ್ದರು. ಅಲ್ಲದೆ, ಬಾಪುಗೌಡ ವಿರುದ್ಧ ಇಬ್ಬರು ಖಾಸಗಿ ವ್ಯಕ್ತಿಗಳು ಚೆಕ್‌ ಬೌನ್ಸ್‌ ಪ್ರಕರಣವನ್ನೂ ದಾಖಲಿಸಿದ್ದರು. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 353, 141, 143, 147, 323, 353, 504, 506, 149ಅಡಿ ಪ್ರಕರಣ ದಾಖಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಎಲ್ಲ ಪ್ರಕರಣಗಳಲ್ಲೂ ಮುಂಡಗೋಡ ಜೆಎಂಎಫ್‌ಸಿ ನ್ಯಾಯಾಲಯ ವಾರೆಂಟ್‌ ಹೊರಡಿಸಿತ್ತು. ಆದರೆ, ಆತ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಆತನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಬಾಪುಗೌಡನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದು, ಶಿರಸಿ ಠಾಣೆಗೆ ಕಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಬಿಸಿಲಿನ ತಾಪ ಹೆಚ್ಚಳ; ಮೃಗಾಲಯ ತಂಪಾಗಿಡಲು ವಿಶೇಷ ವ್ಯವಸ್ಥೆ

ಪ್ರಸ್ತುತ ವರ್ಷ ಮೈಸೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿರುವುದರಿಂದ ಮೃಗಾಲಯದ ಪ್ರಾಣಿಗಳು...

ತುಮಕೂರು | ಹಾಲಪ್ಪ ಯಾರು? ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ: ಸಚಿವ ರಾಜಣ್ಣ

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದು,...

ಬೆಂಗಳೂರು | ಕನ್ನಡ ನಾಮಫಲಕ ಕಡ್ಡಾಯ; ತಪ್ಪಿದಲ್ಲಿ ‘ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ ಎಚ್ಚರಿಕೆ

ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ...

ತುಮಕೂರು | ಲೋಕಸಭಾ ಚುನಾವಣೆಗೆ ಜೆಡಿಎಸ್‌ ಟಿಕೆಟ್‌ ಬೇಡಿಕೆಯಿಟ್ಟ ಕೆ.ಟಿ ಶಾಂತಕುಮಾರ್

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್...