ರಾಯಚೂರು | ಮಾಜಿ ಶಾಸಕನ ಸಹೋದರನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ

Date:

  • ಪರಿಸ್ಥಿತಿ ನಿಯಂತ್ರಿಸಲು ಮಸ್ಕಿ ನಗರದಲ್ಲಿ 144 ಸೆಕ್ಷನ್‌ ಜಾರಿ
  • ನಡು ರಸ್ತೆಯಲ್ಲಿಯೇ ಹಲ್ಲೆ ನಡೆಸಿದ ಕಾರ್ಯಕರ್ತರು

ಮಾಜಿ ಶಾಸಕ ಬಸನಗೌಡ ತುರುವಿಹಾಳ ಸಹೋದರ ಸಿದ್ದನಗೌಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಮಸ್ಕಿ ನಗರದ 3ನೇ ವಾರ್ಡಿನಲ್ಲಿ ಬೆಳಿಗ್ಗೆ  ಜನರನ್ನು ಬಿಜೆಪಿಗೆ ಮತ ಹಾಕಿ ಎಂದು ದಾಂದಲೆ ನಡೆಸಿದ್ದಾರೆ  ಎಂದು ಮಾಹಿತಿ ತಿಳಿದು ಬಂದಾಗ ಕಾಂಗ್ರೆಸ್ ಕಾರ್ಯಕರ್ತರು ತಡೆಯಲು ಮುಂದಾದಾಗ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ನಡೆದಿದೆ.

ಬಿಜೆಪಿ ಸೋಲುವ ಭಿತಿಯಲ್ಲಿ ಸಂಜೆ  ಹೊತ್ತು ಬಿಜೆಪಿ ಯುವ ಮುಖಂಡ ರಾಕೇಶ್ ಪಾಟೀಲ ಹಾಗೂ ಕಾರ್ಯಕರ್ತರು ಗುಂಪಾಗಿ ಸೇರಿ ಹಲ್ಲೆ ಮಾಡಿದ್ದಾರೆ ಎಂದು ಸ್ಥಳೀಯ ನಿವಾಸಿ ಆರೋಪಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ  ಘೋಷಣೆ ಕೂಗಿ ಪ್ರತಿಭಟಿಸಿದ್ದಾರೆ. ನಗದರಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬಜರಂಗದಳ – ಭೀಮಾ ಕೋರೆಗಾಂವ್‌ ವಿಜಯೋತ್ಸವ ಸಮಿತಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಕೇಸರಿ ಶಾಲು ಧರಿಸಿರುವ ಗೂಂಡಾಗಳು ನಡು ರಸ್ತೆಯಲ್ಲಿಯೇ ಸಾರ್ವಜನಿಕವಾಗಿ ಕಾಂಗ್ರೆಸ್‌ ಮುಖಂಡ ಸಿದ್ದನಗೌಡರ ಮೇಲೆ ಮಾರಣಾಂತಿಕ ಹಲ್ಲೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಸಿದ್ದನಗೌಡರ ತಲೆ ಮತ್ತು ಕೈಗೆ ಪೆಟ್ಟು ಬಿದ್ದಿದೆ.

ಬಿಜೆಪಿ ಕಾರ್ಯುಕರ್ತ ರಾಕೇಶ್‌ ಪಾಟಿಲ್‌ ನೇತೃತ್ವದಲ್ಲಿ ಹಲ್ಲೆ ಮಾಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕಾಂಗ್ರೆಸ್‌ ಮುಖಂಡರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಕಾಂಗ್ರೆಸ್‌ ಸೇರಿದ ಆಶ್ರಯ ಲಿಂಗತ್ವ ಅಲ್ಪಸಂಖ್ಯಾತರ ತಂಡ

ಮಂಗಳೂರಿನಲ್ಲಿ ಮಂಗಳಮುಖಿಯರ ಸಮುದಾಯದ ಸದಸ್ಯರು ಸೋಮವಾರ (ಏ.22) ಕಾಂಗ್ರೆಸ್ ಸೇರ್ಪಡೆಯಾದರು. ಮಂಗಳೂರಿನ...

ಬೀದರ್‌ ಲೋಕಸಭಾ ಕ್ಷೇತ್ರ | ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು

ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಂತಿಮವಾಗಿ 18 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ...

ಯಾವ ಉಚ್ಚಾಟನೆಗೂ ಹೆದರಲ್ಲ: ಈಶ್ವರಪ್ಪ

ಬಿಜೆಪಿಯಲ್ಲಿ ಬಂಡಾಯ ಎದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ...