ವಿಧಾನಪರಿಷತ್ ಮಾಜಿ ಸದಸ್ಯ, ರಾಷ್ಟ್ರ ಏಕೀಕರಣ ಹೋರಾಟಗಾರ ಮಾರುತಿರಾವ್ ಡಿ. ಮಾಲೆ ಅವರು ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಬೀದರ್ ಜಿಲ್ಲೆಯ ಘಾಟಬೊರಾಳ್ ಗ್ರಾಮದರಾಗಿದ ಮಾಲೆ ಅವರು ಕಲಬುರಗಿ ಜಿಲ್ಲೆಯ ಹಾರುತಿ ಹಡಗಿಲ್ ಗ್ರಾಮದಲ್ಲಿ ವಾಸಿಸುತ್ತಿದ್ದರು. ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ.
ರಾಷ್ಟ್ರ ಏಕೀಕರಣ ಸಂದರ್ಭದಲ್ಲಿ ಹೈದರಾಬಾದ್ ನಿಜಾಮರ ವಿರುದ್ಧ ನಡೆದ ಹೋರಾಟದಲ್ಲಿ ಮಾಲೆ ಅವರು ಮುಂಚೂಣಿಯಲ್ಲಿದ್ದರು. ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿಯನ್ನು ಆರಂಭಿಸಿದ್ದ ಅವರು ಹಲವಾರು ಶಾಲೆಗಳನ್ನು ತೆರೆದಿದ್ದರು. ಅಲ್ಲದೆ, ಶಿಕ್ಷಣ ಕ್ಷೇತ್ರದಲ್ಲಿಯೂ ಅವರು ಅಪಾರ ಸೇವೆ ಸಲ್ಲಿಸಿದ್ದಾರೆ.
ಕಾಂಗ್ರೆಸ್‌ನಲ್ಲಿ ತೊಡಗಿಸಿಕೊಂಡಿದ್ದ ಮಾಲೆ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿಯೂ ಗುರುತಿಸಿಕೊಂಡಿದ್ದರು.