‘ನರಸತ್ತವರು’; ಮಂಡ್ಯ ಜನರ ವಿರುದ್ಧ ನಾಲಿಗೆ ಹರಿಬಿಟ್ಟ ಮಾಜಿ ಸಂಸದ ಶಿವರಾಮೇಗೌಡ

Date:

ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಾಜಿ ಸಂಸದ ಎಲ್‌.ಆರ್ ಶಿವರಾಮೇಗೌಡ ಮಂಡ್ಯ ಜನರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ‘ಮಂಡ್ಯ ಜನರು ನರಸತ್ತವರು. ಮಂಡ್ಯದವರು ಕೈಗೆ ಬಳೆತೊಟ್ಟುಕೊಳ್ಳಬೇಡಿ’ ಎಂದು ಆಕ್ಷೇಪಾರ್ಹ, ಮಹಿಳಾ ನಿಂದನೆಯ ಹೇಳಿಕೆ ನೀಡಿ, ವಿವಾದ ಸೃಷ್ಟಿಸಿದ್ದಾರೆ.

- Advertisement -

ಬಿಜೆಪಿಯಲ್ಲಿರುವ ಶಿವರಾಮೇಗೌಡ ಬಿಜೆಪಿ ತೊರೆದಿದ್ದು, ಮರಳಿ ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ. ತಾವು ಕಾಂಗ್ರೆಸ್‌ ಸೇರುವ ಬಗ್ಗೆ ನಾಗಮಂಗಲದಲ್ಲಿ ಮಾಧ್ಯಮಗೊಳೊಂದಿಗೆ ಮಾತನಾಡಿದ ಅವರು, “ಕುಮಾರಸ್ವಾಮಿಯನ್ನು ರಾಮನಗರದಿಂದ ಓಡಿಸಿದ್ದಾರೆ. ಆದರೆ, ಮಂಡ್ಯದವರು ನರಸತ್ತವರು ಎಂದು ಕುಮಾರಸ್ವಾಮಿ ಇಲ್ಲಿಗೆ ಬಂದಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಮಂಡ್ಯ ಜಿಲ್ಲೆಯ ಮುಖಂಡರು ಎಚ್ಚೆತ್ತುಕೊಳ್ಳಬೇಕು. ಮಂಡ್ಯದಲ್ಲೂ ಗಂಡಸರಿದ್ದಾರೆ. ಗಂಡಸರಾಗ್ರಪ್ಪ, ಕೈಗೆ ಬಳೆ‌ ತೊಟ್ಟುಕೊಳ್ಳಬೇಡಿ” ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

“ಬಿಜೆಪಿಗೆ ರಾಜೀನಾಮೆ ನೀಡಿದ್ದೇನೆ‌. ಕಾಂಗ್ರೆಸ್ ಸೇರಲು ನಿರ್ಧರಿಸಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಬೆಳೆಸಬೇಕೆಂದು ಆ ಪಕ್ಷ ಸೇರಿದ್ದೆ. ಆದರೆ, ಜೆಡಿಎಸ್‌ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಮಂಡ್ಯದಲ್ಲಿ ಜೆಡಿಎಸ್‌ನವರು ಬಿಜೆಪಿಯ ಕತ್ತುಹಿಸುಕಿದ್ದಾರೆ. ಹೊಂದಾಣಿಕೆಯಿಂದ ಬಿಜೆಪಿ ಉಸಿರುಗಟ್ಟುತ್ತಿದೆ” ಎಂದು ಶಿವರಾಮೇಗೌಡ ಹೇಳಿದ್ದಾರೆ.

“ಕುಮಾರಸ್ವಾಮಿ ಎರಡು ಬಾರಿ ಲಾಟರಿಯಲ್ಲಿ ಮುಖ್ಯಮಂತ್ರಿ ಆಗಿದ್ದಾರೆ. ಕುಮಾರಸ್ವಾಮಿಯ ಗಾಡಿ ಮುಳುಗುತ್ತಿದ್ದು, ಅದನ್ನು ಮಂಡ್ಯ ಜನರು ಕೈ ಹಿಡಿದು ಎತ್ತಿದ್ದಾರೆ. ಸಚಿವರಾಗಿದ್ದರೂ ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ? ದೊಡ್ಡ ದೊಡ್ಡ ಕೈಗಾರಿಕಾ ತಂದು ಮಂಡ್ಯ ಜನರ ಋಣ ತೀರಿಸಬೇಕು” ಎಂದಿದ್ದಾರೆ.

2019ರ ಲೋಕಸಭಾ ಚುನಾವಣೆ ವೇಳೆಯೂ ನಾಲಿಗೆ ಹರಿಬಿಟ್ಟಿದ್ದ ಶಿವರಾಮೇಗೌಡ, ಮಾಜಿ ಸಂಸದೆ ಸುಮಲತಾ ಅವರನ್ನು ಮಾಯಾಂಗನೆ ಎಂದಿದ್ದರು. ಜನಾಕ್ರೋಶಕ್ಕೆ ಕಾರಣರಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...