ಶಿರಸಿಯ ಮಾಜಿ ಉಪವಿಭಾಗಾಧಿಕಾರಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ

Date:

ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆಯಲ್ಲಿ ಶಿರಸಿ ಉಪವಿಭಾಗದ ಈ ಹಿಂದಿನ ಉಪವಿಭಾಗಾಧಿಕಾರಿ ಆಗಿದ್ದ ಹಾಗೂ ಪ್ರಸ್ತುತ ಹುಣಸೂರು ಉಪವಿಭಾಗಾಧಿಕಾರಿ ಆಗಿರುವ ಕಾವ್ಯಾರಾಣಿ ಹಾಗೂ ಅವರ ಆಪ್ತ ಸಹಾಯಕ ಶಿವಕುಮಾರ್ ಅವರನ್ನು ಸೋಮವಾರ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

- Advertisement -

ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದ ದೂರಿನ ಆಧಾರದ ಮೇಲೆ ಈ ದಾಳಿ ನಡೆದಿದ್ದು, ಭೂ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ. ಮಾಹಿತಿಯ ಪ್ರಕಾರ, ಎಚ್.ಡಿ.ಕೋಟೆ ತಾಲ್ಲೂಕಿನ ಸರ್ವೆ ನಂ. 17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದ ಪ್ರಕರಣವು ಕಳೆದ ಒಂದು ವರ್ಷದಿಂದ ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ಸುದ್ದಿ ಓದಿದ್ದೀರಾ? ಬನವಾಸಿ | ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶಕ್ಕೆ; ಮಹೇಂದ್ರ ಸುಪ್ರೊ ವಾಹನ ಜಪ್ತಿ

ಈ ಪ್ರಕರಣದ ಅನುಕೂಲಕರ ತೀರ್ಪಿಗಾಗಿ ಬೆಂಗಳೂರಿನ ನಿವಾಸಿ ಡಾ. ರೂಪಾ ಅವರ ಬಳಿ ಒಟ್ಟು ₹10.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಪೈಕಿ ಮೊದಲ ಹಂತದಲ್ಲಿ ₹5 ಲಕ್ಷ ಪಡೆದಿದ್ದರೆನ್ನಲಾಗಿದ್ದು, ಉಳಿದ ₹5.50 ಲಕ್ಷವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉಪವಿಭಾಗಾಧಿಕಾರಿಯ ನಿವಾಸದಲ್ಲೇ ಹಣ ಪಡೆಯುತ್ತಿದ್ದ ವೇಳೆ ಕಾವ್ಯಾರಾಣಿ ಸಿಕ್ಕಿಬಿದ್ದಿದ್ದು, ಅವರನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಈ ಕಾರ್ಯಾಚರಣೆಯಲ್ಲಿ ತನಿಖಾಧಿಕಾರಿ ರವಿಕುಮಾರ್, ಮಡಿಕೇರಿ ಲೋಕಾಯುಕ್ತ ಡಿವೈಎಸ್‌ಪಿ ದಿನಕರ ಶೆಟ್ಟಿ, ಇನ್‌ಸ್ಪೆಕ್ಟರ್ ವೀಣಾ ನಾಯಕ್ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...