ಚಿಕ್ಕಬಳ್ಳಾಪುರ | ರೈತರ ಆತ್ಮಹತ್ಯೆ ತಡೆಗೆ ಸರ್ಕಾರ ವಿಶೇಷ ಯೋಜನೆ ರೂಪಿಸಲಿ : ಕುರುಬೂರು ಶಾಂತಕುಮಾರ್

Date:

ರಾಜ್ಯದಲ್ಲಿ 1200ಕ್ಕೂ ಹೆಚ್ಚಿನ ರೈತರು ಸಾಲಬಾಧೆ, ಬರಗಾಲದಿಂದ ಕಂಗೆಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂತಹ ರೈತರಿಗೆ ಸರ್ಕಾರ ವಿಶೇಷ ಯೋಜನೆ ರೂಪಿಸಬೇಕು. ಬರಗಾಲದ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.

- Advertisement -

ಚಿಕ್ಕಬಳ್ಳಾಪುರ ನಗರದಲ್ಲಿ ಭಾನುವಾರ ರೈತ ಹುತಾತ್ಮರ ದಿನಾಚರಣೆ ಅಂಗವಾಗಿ ರೈತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ʼಕೃಷಿ ಸಾಲ ಮತ್ತು ಬೆಳೆ ವಿಮೆ ನೀತಿಗಳಲ್ಲಿ ಬದಲಾವಣೆ ತರಬೇಕಿದೆ. ಜಮೀನು ಮೌಲ್ಯದ ಶೇ.75ರಷ್ಟು ಸಾಲ ನೀಡಬೇಕು. ಎಲ್ಲಾ ಬೆಳೆಗಳಿಗೂ ಬೆಳೆ ವಿಮೆ ಜಾರಿಗೊಳಿಸಬೇಕು. ರಾಜ್ಯದಲ್ಲಿ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರದ್ದಾಗಬೇಕು. ಕೃಷಿ ಭೂಮಿ ಕಾರ್ಪೊರೇಟ್ ಕಂಪನಿಗಳು ಮತ್ತು ಬಂಡವಾಳಶಾಹಿಗಳು ವಶಕ್ಕೆ ಪಡೆಯುವುದು ತಪ್ಪಬೇಕುʼ ಎಂದು ಆಗ್ರಹಿಸಿದರು.

ಕೃಷಿ ಪಂಪ್ ಸೆಟ್‌ಗಳಿಗೆ ಆಧಾರ್ ಜೋಡಣೆ ಬೇಡ. ಇದಕ್ಕೂ ಮೊದಲು ಸಮರ್ಪಕ ವಿದ್ಯುತ್ ಪೂರೈಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ 34 ಲಕ್ಷ ಹೈನುಗಾರರಿಗೆ ಸುಮಾರು 800 ಕೋಟಿ ಹಾಲಿನ ಪ್ರೋತ್ಸಾಹ ಧನ ಬಾಕಿಯಿದೆ. ಇದನ್ನು ಸರ್ಕಾರ ಕೂಡಲೇ ಬಿಡುಗಡೆಗೊಳಿಸಬೇಕು. ರಾಜ್ಯಾದ್ಯಂತ ಜಲಾಶಯಗಳಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ಕಡಿಮೆಯಾಗಿದೆ. ಅಂತರ್ಜಲಮಟ್ಟ ಕುಸಿಯುತ್ತಿದೆ. ಜಲಾಶಯಗಳಲ್ಲಿನ ಹೂಳೆತ್ತಲು ವಿಶೇಷ ಯೋಜನೆ ರೂಪಿಸಲು ಸರ್ಕಾರಕ್ಕೆ ಒತ್ತಾಯಿಸಿದರು.

WhatsApp Image 2024 07 21 at 6.16.25 PM

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೈತ ಸಂಘ ಜಿಲ್ಲಾಧ್ಯಕ್ಷ ಗೋವಿಂದ ರೆಡ್ಡಿ ಮಾತನಾಡಿ, ʼಜಿಲ್ಲೆಯಲ್ಲಿ ರೈತರು ಬರಗಾಲದಿಂದ ಸಂಕಷ್ಟಲ್ಲಿದ್ದು, ತರಕಾರಿ ಬೆಳೆದು ಜೀವನ ಸಾಗಿಸುತ್ತಿದ್ದಾರೆ. ಸರ್ಕಾರಗಳ ನಿರ್ಲಕ್ಷ್ಯ ನೀತಿ ರೈತರ ಸಮಸ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಅದಕ್ಕಾಗಿ ಸಂಘಟನೆ ಬಲಪಡಿಸುವುದು ಅವಶ್ಯಕತೆʼ ಎಂದು ಕರೆ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ನೂರಾರು ರೈತರು ಘೋಷಣೆಗಳ ಮೂಲಕ ತೆರಳಿ ಅಂಬೇಡ್ಕರ್ ಭವನಕ್ಕೆ ತಲುಪಿದರು. ಬಳಿಕ ಜರುಗಿದ ವೇದಿಕೆ ಸಮಾರಂಭದಲ್ಲಿ ನರಗುಂದ ಬಂಡಾಯ ಚಳುವಳಿ, ದೆಹಲಿ ರೈತ ಹೋರಾಟದಲ್ಲಿ ಮಡಿದ ಹುತಾತ್ಮ ರೈತರಿಗೆ ಮೇಣದ ಬತ್ತಿಯನ್ನು ಹಚ್ಚಿ, ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು.

ಶಿವಮೊಗ್ಗ ಜಿಲ್ಲೆಯ ಕರಿಬಸಪ್ಪಗೌಡ ಹಾಗೂ ಇತರೆ ರೈತ ಸಂಘ ಮುಖಂಡರು ಮಾತನಾಡಿದರು. ಇದೇ ಸಂದರ್ಭದಲ್ಲಿ ವಿವಿಧ ಪ್ರಗತಿಪರ ರೈತರನ್ನು ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮುಡಾ ಹಗರಣ; ಸಿಎಂ ಕುಟುಂಬದ ವಿರುದ್ಧ ಆರೋಪ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ಕಾರ್ಯಕ್ರಮದಲ್ಲಿ ರಾಜ್ಯ ರೈತ ಸಂಘದ ಪ್ರಮುಖರಾದ ಅಂದಪ್ಪ ಹುರುಳಿ, ಶಿವಕುಮಾರ್, ಹತ್ತಳ್ಳಿ ದೇವರಾಜ್, ಶ್ರೀಕಾಂತ್ ರೆಡ್ಡಿ, ವೆಂಕಟಾಶಿವರೆಡ್ಡಿ, ರಾಮಲಕ್ಷ್ಮಮ್ಮ, ಕಾಂತಮ್ಮ ಸೇರಿದಂತೆ 400 ಕ್ಕೂ ಅಧಿಕ ರೈತರು ಭಾಗವಹಿಸಿದ್ದರು. ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸಂಚಾಲಕ ಲೋಕೇಶ್ ಗೌಡ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...