ರಾಯಚೂರು | ಎಲ್‌ಇಡಿ ಬೀದಿ ದೀಪ ಅಳವಡಿಕೆಗೆ ಕ್ರಿಯಾ ಯೋಜನೆ ರೂಪಿಸಿ : ಡಿಸಿ ಚಂದ್ರಶೇಖರ ನಾಯಕ

Date:

ಜಿಲ್ಲೆಯ ಸ್ಥಳಿಯ ಸಂಸ್ಥೆಗಳಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆಗೆ ಅಂದಾಜು ಕ್ರಿಯಾ ಯೋಜನೆಯನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೂಚಿಸಿದರು.

- Advertisement -

ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆ ಕುರಿತು ಹಮ್ಮಿಕೊಂಡ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ತಾಂತ್ರಿಕತೆಯಿಂದ ಕೂಡಿರುವ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆಗೆ ಇ-ಸ್ಮಾರ್ಟ್ ಕಂಪನಿ ಮುಂದೆ ಬಂದಿದೆ. ಈ ಕುರಿತು ಇ-ಸ್ಮಾರ್ಟ್ ಸಂಸ್ಥೆಯು ಈಗಾಗಲೇ ಮೈಸೂರು ಜಿಲ್ಲೆಯಲ್ಲಿ ಎಲ್‌ಇಡಿ ಬೀದಿ ದೀಪಗಳ ಅಳವಡಿಸಿ ಯಶಸ್ವಿಯಾಗಿದೆ. ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆ ಕುರಿತು ಸಂಸ್ಥೆಯು ನಿರ್ವಹಣೆ ಮಾಡಲಿದೆ ಎಂದು ಸಂಸ್ಥೆಯ ಪ್ರತಿನಿಧಿಯು ತಿಳಿಸಿದ್ದು ಡೆಮೋ ಮಾಹಿತಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಎಲ್ಲ ಸ್ಥಳಿಯ ಸಂಸ್ಥೆಗಳು ಅಂದಾಜು ಕ್ರಿಯಾ ಯೋಜನೆ ಸಲ್ಲಿಸಿಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ರಾಯಚೂರು ನಗರಸಭೆಯು 15ನೇ ಹಣಕಾಸು, ಎಸ್‌ಎಫ್‌ಸಿ ಅನುದಾನ ಸೇರಿದಂತೆ ಉಳಿಕೆಯಾದ ಅನುದಾನ ಹಾಗೂ ಎಲ್‌ಇಡಿ ಬೀದಿ ದೀಪಗಳ ಅಳವಡಿಕೆಗೆ ಬೇಕಾಗಿರುವ ಅಂದಾಜಿಗೆ ಅನುಗುಣವಾಗಿ 7 ಕೋಟಿ ರೂ. ನಿಗದಿಪಡಿಸಿದ್ದು, ಕ್ರಿಯಾ ಯೋಜನೆಯು ಸಲ್ಲಿಸಬೇಕು, ಬೀದಿ ದೀಪಗಳ ಅಳವಡಿಕೆ ಕುರಿತು ಜೆಸ್ಕಾಂಗೆ ಸಲ್ಲಿಸಬೇಕು. ಲಿಂಗಸುಗೂರು ಪುರಸಭೆಯಲ್ಲಿ 24 ಕೋಟಿ ರೂ. ಅಂದಾಜಿಸಿದ್ದು ಮತ್ತೊಮ್ಮೆ ಕ್ರಿಯಾ ಯೋಜನೆ ಸಲ್ಲಿಸಬೇಕು, ಸಿಂಧನೂರು ನಗರಸಭೆಯು ಅಂದಾಜಿನ ಹೊಸ ಬಡಾವಣೆಯ ಸೇರಿಸಿ ಸಲ್ಲಿಸಿದ್ದು ಅವಶ್ಯಕತೆ ಇರುವ ಕಡೆ ಮಾತ್ರ ಸೇರಿಸಲು ಸೂಚಿಸಿದರು.

“ದೇವದುರ್ಗ ಪುರಸಭೆಯಲ್ಲಿ 20 ಲಕ್ಷ ರೂ. ನಿಗದಿಪಡಿಸಿದ್ದು, ಹೆಚ್ಚಿನ ಪ್ರಮಾಣದಲ್ಲಿ ಬೇಕಾಗಿರುವುದರಿಂದ ಕ್ರಿಯಾ ಯೋಜನೆ ಸಿದ್ದಪಡಿಸಬೇಕು, ಹಟ್ಟಿ ಪಟ್ಟಣ ಪಂಚಾಯತಿಯಲ್ಲಿ 3 ಕೋಟಿ ಸಲ್ಲಿಸಿದೆ, ಅನುದಾನ ಎಲ್ಲಿಂದ ಸಂಗ್ರಹ ಕುರಿತು ಅಂದಾಜು ಹಾಗೂ ಈ ಯೋಜನೆಗೆ ಬೇಕಾಗಿರುವ ಹಣಕಾಸು ಕುರಿತು ಕ್ರಿಯಾ ಯೋಜನೆ ಸಲ್ಲಸಲು ತಿಳಿಸಿದರು. ಮಸ್ಕಿ ಪಟ್ಟಣ ಪಂಚಾಯತಿಯು 70 ಲಕ್ಷ ರೂ. ಅನುದಾನ ಪಟ್ಟಿ ನಿಗದಿಪಡಿಸದೆ, ಯೋಜನೆಗೆ ಅವಶ್ಯಕತೆ ಇರುವ ಕ್ರಿಯಾ ಯೋಜನೆ ಮಾಡಿ ಸಲ್ಲಿಸಬೇಕು, ಮುದಗಲ್ ಪಟ್ಟಣ ಪಂಚಾಯತಿ 48 ಲಕ್ಷ ರೂ ಪಟ್ಟಿಯಲ್ಲಿ ತಿಳಿಸಿದ್ದು ಅಂದಾಜು ಸಿದ್ದಪಡಿಸಲು” ಹೇಳಿದರು.

“ತುರವಿಹಾಳ, ಬಳಗಾನೂರು, ಪಟ್ಟಣ ಪಂಚಾಯತಿಗಳು ಅವಶ್ಯಕತೆ ಇರುವನ್ನು ಮಾತ್ರ ಕ್ರಿಯಾ ಯೋಜನೆಯಲ್ಲಿ ಸೇರಿಸಿ, ಎಲ್ಲ ಸ್ಥಳೀಯ ಸಂಸ್ಥೆಗಳು ಕ್ರಿಯಾ ಯೋಜನೆ ಸಿದ್ದಪಡಿಸುವಾಗ ಯಾವ ಕಡೆಯಿಂದ ಹಣ ಸಂಗ್ರಹ ಮತ್ತು ಬಾಕಿ ಉಳಿಸಿಕೊಂಡ 14, 15 ನೇ ಹಣಕಾಸು ಕುರಿತು ಮಾಹಿತಿ ಸಲ್ಲಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮುದಗಲ್‌ನ ಹಮಾಲಿ ಕಾರ್ಮಿಕರ ಸಮಸ್ಯೆ ಪರಿಹರಿಸಲು ಕ್ರಮ; ಎಸಿ ಭರವಸೆ

ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಗಂಗಣ್ಣನವರ, ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಇ-ಸ್ಮಾರ್ಟ್ ಕಂಪನಿ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಟಿಜನ್‌ ಜರ್ನಲಿಸ್ಟ್‌, ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ: ನೂರ್ ಶ್ರೀಧರ್ ಆರೋಪ

"ಎಸ್‌ಐಆರ್‌ ಪ್ರಕ್ರಿಯೆ ಪ್ರಜಾಪ್ರಭುತ್ವದ ಬುನಾದಿಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಇದೆ ಎಂದು...

ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ವಸತಿ ಹಾಗೂ ಭೂ ರಹಿತರಿಗೆ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು,...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...