ತುರುವೇಕೆರೆ | ಗಂಧದ ಮರ ಕಡಿದ ನಾಲ್ವರ ಬಂಧನ

Date:

ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಬಡಗರಹಳ್ಳಿ ಗ್ರಾಮದ ತೋಟ ಸಾಲುಗಳಲ್ಲಿದ್ದ ಗಂಧದ ಮರಗಳನ್ನು ಕಡಿದು ಮಾರಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಮಂಗಳವಾರ ಯಶಸ್ವಿಯಾಗಿದ್ದಾರೆ.

- Advertisement -

  ತಾಲ್ಲೂಕಿನ ಎ.ಹೊಸಹಳ್ಳಿ ಗ್ರಾಮದ ನಿವಾಸಿ ಹನುಮಯ್ಯ (58), ಹೇಮಂತ್ (38) ಎಡೆಯೂರು ಹೋಬಳಿಯ ಚಾಕೇನಹಳ್ಳಿಯ ಮಂಜುನಾಥ್ (45) ಶಿರಾದ ಚಾದ್ರಿರೊಹುಲ್ಲಾ (58) ಬಂಧಿತ ಆರೋಪಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತಾಲ್ಲೂಕಿನ ಬಡಗರಹಳ್ಳಿಯ ರವಿಕುಮಾರ್ ಅವರಿಗೆ ಸೇರಿದ ಸರ್ವೇ ನಂಬರ್ 51 ರಲ್ಲಿ ಇದ್ದ ದೊಡ್ಡ ಗಂಧದ ಮರವನ್ನು ಗರಗಸದಿಂದ ಆರೋಪಿಗಳು ಕುಯ್ದು ಅದರ ಮಧ್ಯಭಾಗದಲ್ಲಿನ ಸುಮಾರು ಎರಡೂವರೆ ಕೆ.ಜಿಯಷ್ಟು ಚೆಕ್ಕೆಯನ್ನು ತೆಗೆದುಕೊಂಡು ಹೋಗಿದ್ದರು. ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಗೆ ಡಿ 14 ರಂದು ದೂರು ನೀಡಲಾಗಿತ್ತು.

ಪ್ರಕರಣದ ಬೆನ್ನತ್ತಿದ ಪೊಲೀಸರಿಗೆ ಆರೋಪಿಗಳು ಸೆರೆ ಸಿಕ್ಕಿದ್ದಾರೆ. ಮೂವರು ಆರೋಪಿಗಳು ಗಂಧದ ತುಂಡುಗಳನ್ನು ಶಿರಾ ಪಟ್ಟಣದ ರುಹುಲ್ಲಾನಿಗೆ ಮಾರುತ್ತಿದ್ದರೆಂದು ವಿಚಾರಣೆ ವೇಳೆ ಗೊತ್ತಾಗಿದೆ. ಮರ ಕಡಿದ ಮೂವರು ಮತ್ತು ಅಕ್ರಮವಾಗಿ ಗಂಧವನ್ನು ಖರೀದಿಸಿದ ಓರ್ವನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ ವೇಳೆ ನ್ಯಾಯಾಲಯ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 

ಕಾರ್ಯಚರಣೆಯಲ್ಲಿ ಸಿಪಿಐ ಲೋಹಿತ್, ಪಿಎಸ್.ಐ ಗಳಾದ ಕೆ.ವಿ.ಮೂರ್ತಿ ಮತ್ತು ಡಿ.ಮೂರ್ತಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...