ಲಂಚದ ಹಣದೊಂದಿಗೆ ಕೇರಳದಲ್ಲಿ ಸಿಕ್ಕಿ ಬಿದ್ದಿದ್ದ ನಾಲ್ವರು ಪೊಲೀಸರು ಅಮಾನತು

Date:

  • ಬೆಂಗಳೂರಿನ ವೈಟ್‌ಫೀಲ್ಡ್‌ ಸೆನ್ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿ ಅಮಾನತು
  • ಅಮಾನತುಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ

ಪ್ರಕರಣವೊಂದರ ತನಿಖೆಗೆ ಕೇರಳಕ್ಕೆ ಹೋಗಿ, ಆರೋಪಿಗಳಿಂದ ಸ್ವೀಕರಿಸಿದ್ದ ಲಂಚದ ಹಣದೊಂದಿಗೆ ಸಿಕ್ಕಿಬಿದ್ದು, ಕೇರಳ ಪೊಲೀಸರ ವಶದಲ್ಲಿದ್ದ ಬೆಂಗಳೂರಿನ ನಾಲ್ವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ವೈಟ್‌ಫೀಲ್ಡ್‌ ಸೆನ್ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಸೇರಿ ನಾಲ್ವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದಾರೆ.

ಇನ್ಸ್​ಪೆಕ್ಟರ್ ಶಿವಪ್ರಕಾಶ್, ಹೆಡ್ ಕಾನ್ಸ್​ಟೇಬಲ್​ಗಳಾದ ಶಿವಾನಿ, ವಿಜಯ್ ಕುಮಾರ್ ಹಾಗೂ ಕಾನ್ಸ್​ಟೇಬಲ್ ಸಂದೇಶ್ ಅಮಾನತು ಸಸ್ಪೆಂಡ್ ಮಾಡಲಾಗಿದೆ. ಘಟನೆ ಕುರಿತು ಎಸಿಪಿ ವರದಿ ಆಧರಿಸಿ ಪ್ರಕರಣದ ತನಿಖೆ ಕಾರ್ಯವಿಧಾನದಲ್ಲಿ ಲೋಪಗೈದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಏನಿದು ಘಟನೆ?

ಉದ್ಯೋಗ ಕೊಡಿಸುವುದಾಗಿ ಹೇಳಿ ಸಾಫ್ಟ್​ವೇರ್ ಇಂಜಿನಿಯರ್​ ಬಳಿ ಆನ್​ಲೈನ್ ಮೂಲಕ 26 ಲಕ್ಷ ರೂ. ಹಣವನ್ನು ಪಡೆದು ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಚಂದಕ್ ಶ್ರೀಕಾಂತ್ ಎಂಬುವವರು ವೈಟ್ ಫೀಲ್ಡ್ ಸೈಬರ್​ ಠಾಣೆಗೆ ದೂರು ಕೊಟ್ಟಿದ್ದರು.

ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಇಎನ್ ಪೊಲೀಸರಿಗೆ ಸಿಕ್ಕ ಸುಳಿವಿನ ಮೇರೆಗೆ ಮಡಿಕೇರಿಯ ಆರೋಪಿ ಐಸಾಕ್ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್​ನಲ್ಲಿ ಎರಡು ಕೋಟಿ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿತ್ತು. ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಹಾಗೂ ಅವರ ತಂಡ ಕೇರಳದ ಕೊಚ್ಚಿ ನಗರದ ಕಳಮಶ್ಶೇರಿಗೆ ಹೋಗಿದ್ದರು. ಅಲ್ಲಿ ಆರೋಪಿಗಳಾದ ನೌಶಾದ್ ಹಾಗೂ ಅಕೀಲ್​ ಎಂಬುವವರಿಂದ ಆನ್ ಲೈನ್ ಫ್ರಾಡ್​ ಆಗಿರುವ ಬಗ್ಗೆ ಸಾಕ್ಷಿ ಸಿಕ್ಕಿತ್ತು. ಈ ಹಿನ್ನೆಲೆ ಅರೆಸ್ಟ್ ಮಾಡಲು ಪೊಲೀಸರು ತೆರಳಿದ್ದರು. ಬಿಡುಬೇಕಾದರೆ 25 ಲಕ್ಷಕ್ಕೆ ಮೊದಲು ಬೇಡಿಕೆ ಇಟ್ಟಿದ್ದ ಆರೋಪ ಕೇಳಿಬಂದಿದೆ. ಆ ಬಳಿಕ ಆರೋಪಿಗಳಿಂದ 3,95,000 ಹಣ ಪಡೆದಿದ್ದರು.

ಇದನ್ನು ಓದಿದ್ದೀರಾ? ಲಂಚದ ಹಣದೊಂದಿಗೆ ಸಿಕ್ಕಿ ಬಿದ್ದ ಕರ್ನಾಟಕ ಪೊಲೀಸರ ಬಿಡುಗಡೆಗೆ ಕೇರಳ ಪೊಲೀಸರ ತೀರ್ಮಾನ!

ಆರೋಪಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ, ಕೇರಳದ ಕಳಮಶ್ಶೇರಿ ಪೊಲೀಸರಿಗೆ ಆರೋಪಿಗಳ ಕುಟುಂಬಸ್ಥರು ದೂರು ನೀಡಿದ್ದರು. ಈ ದೂರಿನನ್ವಯ ಕೊಚ್ಚಿಯ ಕಳಮಶ್ಶೇರಿ ಪೊಲೀಸರು, ಆರೋಪಿಗಳಿಂದ ಹಣ ವಸೂಲಿ ಮಾಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ವೈಟ್‌ಫೀಲ್ಡ್‌ನ ಸೆನ್ ಪೊಲೀಸ್ ಠಾಣೆಯ ಎಸ್ ಐ ಹಾಗೂ ಮೂವರು ಕಾನ್‌ಸ್ಟೆಬಲ್ ಸಹಿತ ನಾಲ್ವರನ್ನು ಬಂಧಿಸಲಾಗಿತ್ತು.

ಕರ್ತವ್ಯದ ವೇಳೆಯಲ್ಲಿರುವಾಗಲೇ ತಪ್ಪು ಮಾಡಿರುವ ಹಿನ್ನೆಲೆಯಲ್ಲಿ ಬಂಧನವಿಲ್ಲದೆ ಬಿಡುಗಡೆ ಮಾಡಬೇಕೆಂಬುದು ಕಾನೂನು ಸಲಹೆ ಎಂಬುದನ್ನು ಗಮನಿಸಿದ ಬಳಿಕ ಅಲ್ಲಿನ ಪೊಲೀಸರು ಬಿಡುಗಡೆಗೊಳಿಸಿದ್ದರು. ಅಲ್ಲದೇ, ತನಿಖಾ ತಂಡ ಕೋರಿದರೆ ಹಾಜರಾಗುವಂತೆ ಸೂಚಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ....

ತುಮಕೂರು | ಕಲೆಯ ಗ್ರಹಿಕೆ ಮೇಲೆ ನಿರ್ಬಂಧ ಹೇರುವುದು ಅಪಾಯಕಾರಿ: ವಿಮರ್ಶಕ ರಾಘವೇಂದ್ರರಾವ್

ಕಲೆಯ ಗ್ರಹಿಕೆ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮಬದ್ಧವಾಗಿದ್ದರೂ ನಿರ್ಬಂಧ...

ಗದಗ | ಪ್ರತಿಯೊಬ್ಬರಿಗೂ ಮುಖ್ಯವಾದ ಸಂಪತ್ತು ಆರೋಗ್ಯ; ಎಂಎಲ್‌ಸಿ ಸಂಕನೂರ

ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾದ ಸಂಪತ್ತಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ...

ತುಮಕೂರಿನಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳ ಒತ್ತಾಯ

ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ಕೊಡುವಂತೆ...