ದಕ್ಷಿಣ ಕನ್ನಡ | ಈಜಲು ನದಿಗೆ ಇಳಿದಿದ್ದ ನಾಲ್ವರು ವಿದ್ಯಾರ್ಥಿಗಳ ದುರ್ಮರಣ

Date:

ನದಿಯಲ್ಲಿ ಈಜಲು ತೆರಳಿದ್ದ ಸುರತ್ಕಲ್‌ನ ಶಾಲೆಯೊಂದರ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಂಗಳವಾರ ಸಂಜೆ ಘಟನೆ ನಡೆದಿದೆ.

- Advertisement -

ಶಾಲೆಯಲ್ಲಿ ಪರೀಕ್ಷೆ ಮುಗಿಸಿದ ಬಳಿಕ ವಿದ್ಯಾರ್ಥಿಗಳು ಮನೆಗೆ ತೆರಳದೆ, ಪೋಷಕರಿಗೆ ಮಾಹಿತಿಯನ್ನೂ ನೀಡದೆ, ಹಳೆಯಂಗಡಿಯ ಕೊಪ್ಪಳ ರೈಲ್ವೇ ಸೇತುವೆಯ ಬಳಿ ನದಿಗೆ ಈಜಲು ಹೋಗಿದ್ದರು. ಈ ವೇಳೆ ನಾಲ್ವರೂ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ ಪುತ್ರ ಯಶ್ಚಿತ್ (15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಎಂಬವರ ಪುತ್ರ ರಾಘವೇಂದ್ರ (15), ಸುರತ್ಕಲ್ ಗುಡ್ಡೆಕೊಪ್ಲ ನಿವಾಸಿ ವಿಶ್ವನಾಥ ಎಂಬವರ ಪುತ್ರ ನಿರೂಪ್ (15), ಚಿತ್ರಾಪುರ ನಿವಾಸಿ ದೇವದಾಸ್ ಎಂಬವರ ಪುತ್ರ ಅನ್ವಿತ್ (15) ಮೃತಪಟ್ಟ ವಿದ್ಯಾರ್ಥಿಗಳು.

ನಾಲ್ವರೂ ಎಸ್‌ಎಸ್‌ಎಲ್‌ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮಂಗಳವಾರ ನಡೆದ ಇಂಗ್ಲಿಷ್ ಪೂರ್ವ ಸಿದ್ದತಾ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಮನೆಗೆ ಹಿಂದಿರುಗಿರಲಿಲ್ಲ. ಮಕ್ಕಳು ಬಾರದ್ದರಿಂದ ಪೋಷಕರು ಮಂಗಳವಾರ ರಾತ್ರಿ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸಿದ ಪೊಲೀಸರು ವಿವಿಧೆಡೆ ಸಿಸಿ ಟಿವಿ ಪರಿಶೀಲಿಸಿದ್ದಾರೆ. ಈ ವೇಳೆ, ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿಯಲ್ಲಿ ಇಳಿದು ಮುಂದಕ್ಕೆ ತೆರಳಿದ್ದಾರೆ ಎಂಬುದು ಗೊತ್ತಾಗಿದೆ. ಬಳಿಕ, ವಿದ್ಯಾರ್ಥಿಯೋರ್ವನ ಬಳಿಯಿದ್ದ ಮೊಬೈಲ್ ನ ಟವರ್ ಲೊಕೇಷನ್ ಆಧಾರದಲ್ಲಿ ಅವರು ನದಿ ತೀರಕ್ಕೆ ಹೋಗಿದ್ದಾರೆಂದು ಪೊಲೀಸರು ಕಂಡುಕೊಂಡಿದ್ದಾರೆ.

ನದಿ ಬಳಿ ಪರಿಶೀಲನೆ ನಡೆಸಿದಾಗ, ವಿದ್ಯಾರ್ಥಿಗಳ ಬ್ಯಾಗ್‌, ಚಪ್ಪಲಿಗಳು ಪತ್ತೆಯಾಗಿವೆ. ನಂತರ, ನದಿಯಲ್ಲಿ ಶೋಧ ನಡೆಸಿದ್ದು, ವಿದ್ಯಾರ್ಥಿಗಳ ಮೃತದೇಹಗಳು ಪತ್ತೆಯಾಗಿವೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...