ವಂಚನೆ ಪ್ರಕರಣ | ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್

Date:

Advertisements

2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.

ಮಂಗಳೂರಿನ ಗುರುಪುರದಲ್ಲಿರುವ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯ ಸಮಯದಲ್ಲಿ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ, ವಜ್ರದೇಹಿ ಮಠದ ಸ್ವಾಮೀಜಿ ಹೆಸರನ್ನು ಪ್ರಸ್ತಾಪಿಸಿದ್ದರು.

Advertisements

“ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ನನಗೆ ಕರೆ ಮಾಡಿ, ಉದ್ಯಮಿ ಗೋವಿಂದಬಾಬು ಪೂಜಾರಿ ಅವರು ನಿಮಗೆ ₹1.50 ಕೋಟಿ ನೀಡಿದ್ದಾರಂತೆ, ಆ ಹಣವನ್ನು ವಾಪಸ್ ನೀಡಿ ಎಂದು ಹೇಳಿದ್ದರು. ಚೈತ್ರಾ ಕುಂದಾಪುರ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದರು. ನಾನು ಇದನ್ನು ಖಂಡಿಸಿದ್ದೆ. ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ” ಎಂದು ವಜ್ರದೇಹಿ ಸ್ವಾಮೀಜಿ ಹೇಳಿದ್ದರು.

“ಈ ಪ್ರಕರಣದಲ್ಲಿ ಚೈತ್ರಾ ಮತ್ತು ಹಾಲಶ್ರೀ ಅವರ ಹೆಸರಿದೆ ಎಂದು ಅವರೇ ಕರೆ ಮಾಡಿ ತಿಳಿಸಿದ್ದರು. ಹಾಲಶ್ರೀ ಅವರು ಯುವ ಬ್ರಿಗೇಡ್ ಜತೆಗೆ ಗುರುತಿಸಿಕೊಂಡಿದ್ದರು. ಹಾಗಾಗಿ, ಚಕ್ರವರ್ತಿ ಸೂಲಿಬೆಲೆ ಅವರಿಗೆ ಕರೆ ಮಾಡಿದ್ದೆ. ಗಗನ್ ಕಡೂರು ಅವರ ಹೆಸರು ಕೇಳಿ ಬಂದಾಗ ಸಿ ಟಿ ರವಿ ಅವರಿಗೆ ಕರೆ ಮಾಡಿದ್ದೆ” ಎಂದು ತಿಳಿಸಿದ್ದರು.

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ

ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ₹5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಎಂಟು ಜನರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬಂಧಿಸಿದ್ದರು.

ಚೈತ್ರಾ ಕುಂದಾಪುರ, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್, ಗಗನ್ ಎಂಬುವವರನ್ನು ಉಡುಪಿ ಹಾಗೂ ಚಿಕ್ಕಮಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು. 

ಚೆಫ್ ಟಾಕ್ ಸಂಸ್ಥೆ ಮುಖ್ಯಸ್ಥನಾಗಿರುವ ಗೋವಿಂದ ಬಾಬು ಪೂಜಾರಿ ಎಂಬುವವರು ಬೈಂದೂರು ವಿಧಾನಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಕಳೆದ 2023 ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ಕೊಡಿಸುವುದಾಗಿ ಚೈತ್ರಾ ಕುಂದಾಪುರ ಪೂಜಾರಿ ಅವರಿಗೆ ₹5 ಕೋಟಿ ವಂಚಿಸಿದ್ದರು.

ಟಿಕೆಟ್ ಸಿಗದೆ ವಂಚನೆಗೆ ಒಳಗಾದ ಗೋವಿಂದ ಬಾಬು ಪೂಜಾರಿ ಬೆಂಗಳೂರು ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಚೈತ್ರಾ ಕುಂದಾಪುರ ವಿರುದ್ಧ ದೂರು ದಾಖಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕಾವೇರಿ ವಿಚಾರ । ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ

ಚೈತ್ರಾ ಕುಂದಾಪುರ ಸೇರಿದಂತೆ ಆರು ಮಂದಿಗೆ 14 ದಿನಗಳ ಕಾಲ ಅಂದರೆ, ಸೆ.​23 ರವರೆಗೆ ಸಿಸಿಬಿ ಕಸ್ಟಡಿಗೆ ನೀಡಲು ಬೆಂಗಳೂರಿನ ಎಸಿಎಂಎಂ ಕೋರ್ಟ್ಆದೇಶಿಸಿತ್ತು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X