ವಂಚನೆ ಪ್ರಕರಣ | ಕೋಮು ದ್ವೇಷ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ

Date:

ಕೋಮು ಪ್ರಚೋದನೆ ಮತ್ತು ದ್ವೇಷ ಭಾಷಣದಿಂದಲೇ ಕರಾವಳಿಯಲ್ಲಿ ಕುಖ್ಯಾತಿ ಪಡೆದಿರುವ ಚೈತ್ರಾ ಕುಂದಾಪುರ ಅವರನ್ನು ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

- Advertisement -

ಕಳದ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬಾತನಿಗೆ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ ಹಣ ಪಡೆದು, ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆ ಪ್ರಕರಣದಲ್ಲಿ ಆಕೆಯನ್ನೂ, ಆಕೆಯ ಮೂವರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ತನಗೆ ಚೈತ್ರಾ ಕುಂದಾಪುರ ಮತ್ತು ಸಹಚರರು ನಾಲ್ಕು ಕೋಟಿ ರೂ. ವಂಚಿಸಿದ್ದಾರೆ ಎಂದು ಗೋವಿಂದ ಬಾಬು ಬರೆದಿದ್ದ ಪತ್ರವೊಂದು ಕಳೆದ ಕೆಲವು ತಿಂಗಳಿಂದ ವೈರಲ್ ಆಗಿತ್ತು. ಅಲ್ಲದೆ, ಚೈತ್ರಾ ಅವರು ವಿಶ್ವಾನಾಥ್‌ ಜೀ ಎಂಬಾತನ ಬಗ್ಗೆ ಮಾತನಾಡಿರುವ ಫೋನ್‌ ರೆಕಾರ್ಡಿಂಗ್‌ ಕೂಡ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಉದ್ಯಮಿಯಿಂದ ಒಟ್ಟು 7 ಕೋಟಿ ರೂ.ಗಳನ್ನು ಮೂರು ಹಂತದಲ್ಲಿ ಚೈತ್ರಾ ಮತ್ತು ಆಕೆಯ ಟೀಮ್ ಪಡೆದುಕೊಂಡಿದೆ ಎಂದು ಆರೋಪಿಸಲಾಗಿದೆ.

ಇದೀಗ, ಆಕೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಪ್ರಮುಖ ಆರೋಪಿಯಾಗಿದ್ದು, ಗಗನ್ ಕಡೂರು, ಶ್ರೀಕಾಂತ ನಾಯಕ್, ಪ್ರಸಾದ್‌ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿದ್ದಾರೆ.

ಕಳೆದ ಕೆಲ ದಿನಗಳಿಂದ ಚೈತ್ರಾ ಕುಂದಾಪುರ ತಲೆಮರೆಸಿಕೊಂಡಿದ್ದರು. ಮಂಗಳವಾರ, ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....

ಕಾರವಾರ | ಚಿತ್ತಾಕುಲದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸುರಕ್ಷಿತವಾಗಿ ಸೆರೆ

ಕಾರವಾರ: ಗೋಪಶಿಟ್ಟಾ ವಲಯದ ಚಿತ್ತಾಕುಲ ಶಹರ ಶಾಖೆಯ ಹಳೇಭಾಗ ಗ್ರಾಮದಲ್ಲಿ ಕಳೆದ...

ಧಾರವಾಡ | ಸಂಶೋಧಕನಿಗೆ ತಾಳ್ಮೆ, ಅಧ್ಯಯನ, ಕ್ಷೇತ್ರ ಕಾರ್ಯ ಮುಖ್ಯ: ಶಿವಕುಮಾರ ಮಹಾಸ್ವಾಮಿಗಳು

"ಸಂಶೋಧನೆ ಎಂಬುದು ಒಂದು ತಪಸ್ಸು ಇದ್ದಂತೆ. ಅನೇಕ ಸಮಸ್ಯೆ, ಅನಾನುಕೂಲತೆಗಳನ್ನು ಎದುರಿಸಿ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...