ಉಡುಪಿ | ಪಿಎಂಇಜಿಪಿ ಸಾಲ ಕೊಡಿಸುವ ಹೆಸರಿನಲ್ಲಿ ಕೋಟ್ಯಾಂತರ ವಂಚನೆ — ಆರೋಪಿ ಮಹಿಳೆ ಬಂಧನ

Date:

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್‌ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣದಲ್ಲಿ ಆರೋಪಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರದ ಕೌಶಲ್ಯ ಬಂಧಿತ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಈಕೆ 2023ರ ನವೆಂಬರ್ ನಲ್ಲಿ ಬಾರಕೂರು ಹೇರಾಡಿಯ ಸರಿತಾ ಲೂವಿಸ್‌ ಎಂಬವರಿಗೆ ಪಿಎಂಇಜಿಪಿ ಅಡಿಯಲ್ಲಿ ಸಬ್ಸಡಿ ಲೋನ್‌ ಮಾಡಿಸಿಕೊಡುವುದಾಗಿ ಹೇಳಿದ್ದು ನಂತರದ ದಿನಗಳಲ್ಲಿ ಸಬ್ಸಡಿ ಲೋನ್‌ ಬಗ್ಗೆ ಹಲವಾರು ಕಾರಣಗಳನ್ನು ತಿಳಿಸಿ ಹಣ ಪಾವತಿಸುವಂತೆ ತಿಳಿಸಿದ್ದಳು. ಅದರಂತೆ ಸರಿತಾ ಲೂವಿಸ್‌ ಹಂತ ಹಂತವಾಗಿ ಕೌಶಲ್ಯಳ ಖಾತೆಗೆ ಹಾಗೂ ಆಕೆಯ ತಿಳಿಸಿದ ವ್ಯಕ್ತಿಗಳಾದ ಆಕೆಯ ಗಂಡ ಸಂದೇಶ ಮತ್ತು ಪ್ರಕಾಶ, ಆಶೀಶ ಶೆಟ್ಟಿ, ರಾಜೇಂದ್ರ ಬೈಂದೂರು, ಗೀತ, ಹರಿಣಿ, ನವ್ಯ, ಕುಮಾರ್‌, ಮಾಲತಿ, ಪ್ರವೀಣ್‌, ಹರಿಪ್ರಸಾದ್‌, ನಾಗರಾಜ ಮತ್ತು ಭಾರತಿ ಸಿಂಗ್‌ ಎಂಬವರಿಗೆ ಒಟ್ಟು 80,72,000ರೂ. ಹಣ ನೀಡಿದ್ದರು ಎಂದು ದೂರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಅದೇ ರೀತಿ ಕೌಶಲ್ಯ, ಅಂಜಲಿನ್‌ ಡಿಸಿಲ್ವಾ ಎಂಬವರಿಗೂ ಪಿಎಂಇಜಿಪಿ ಅಡಿಯಲ್ಲಿ ಸಬ್ಸಡಿ ಲೋನ್‌ ಮಾಡಿಸಿಕೊಡುವುದಾಗಿ ಹೇಳಿ ಹಂತ ಹಂತವಾಗಿ ಸರಿತಾ ಲೂವಿಸ್ ಗೆ ತಿಳಿಸಿದ ವ್ಯಕ್ತಿಗಳ ಖಾತೆಗಳಿಗೆ 65,00,000ರೂ. ನಗದು ಹಣವನ್ನು ಪಾವತಿಸಿದ್ದರು. ಕೌಶಲ್ಯ ಇವರಿಬ್ಬರಿಗೆ ಒಟ್ಟು 4 ಕೋಟಿ ಸಬ್ಸಿಡಿ ಲೋನ್‌ ಮಾಡಿಸಿಕೊಡುವುದಾಗಿ ನಂಬಿಸಿ ಹಾಗೂ ಬ್ಯಾಂಕ್‌ ನೌಕರ ಎಂದು ಪೋನ್‌ನಲ್ಲಿ ಮಾತನಾಡಿ ನಂಬಿಸಿ ಒಟ್ಟು 1,45,72,000ರೂ. ಹಣ ಪಡೆದು ಮೋಸ ಮಾಡಿರುವುದಾಗಿ ದೂರಲಾಗಿದೆ. ಅದರಂತೆ ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...