ಪಂಚರ್ ಶಾಪ್ ಒಂದರಲ್ಲಿ ಟೈರಿಗೆ ಗಾಳಿ ತುಂಬುವ ಸಂದರ್ಭ ಟೈರ್ ಸ್ಪೋಟಗೊಂಡು ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಬಳಿ ನಡೆದಿದೆ.
ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ಯುವಕ ಅಬ್ದುಲ್ ರಜೀದ್ (19) ಎಂದು ಗುರುತಿಸಲಾಗಿದೆ.
ಖಾಸಗಿ ಶಾಲೆ ಬಸ್ಸೊಂದರ ಟೈರ್ ಪ್ಯಾಚ್‌ಗೆಂದು ಬಂದಿದ್ದು, ಟಯರನ್ನು ಕೆಳಗಿಳಿಸಿ ಗಾಳಿ ತುಂಬುವಾಗ ಗಾಳಿ ತುಂಬಿದ ಕೆಲವೇ ನಿಮಿಷಗಳಲ್ಲಿ ಟೈರ್ ಸಿಡಿದು ಸ್ಪೋಟಗೊಂಡಿದೆ. ಈ ಸಂದರ್ಭ ಗಾಳಿ ತುಂಬಿಸುತ್ತಿದ್ದ ಯುವಕ ಎದ್ದು ನಿಲ್ಲುವಷ್ಟರಲ್ಲಿ ಸ್ಪೋಟಗೊಂಡ ಟೈಯರ್‌ನ ಸಿಡಿತಕ್ಕೆ ಗಾಳಿಯಲ್ಲಿ ಮೇಲಕ್ಕೆ ಎಸೆಯಲ್ಪಟ್ಟಿದ್ದಾನೆ.
ಪಂಚರ್ ಶಾಪ್ ಒಂದರಲ್ಲಿ ಟೈರಿಗೆ ಗಾಳಿ ತುಂಬುವ ಸಂದರ್ಭ ಟೈರ್ ಸಿಡಿದು ಸ್ಪೋಟಗೊಂಡು ಯುವಕ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಬಳಿ ನಡೆದಿದೆ. ಕೋಟೇಶ್ವರದಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ಯುವಕ ಅಬ್ದುಲ್ ರಜೀದ್ (19) ಎಂದು ಗುರುತಿಸಲಾಗಿದೆ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. @VisitUdupi @UdupiPolice pic.twitter.com/Zf10Ubwt1g
— eedina.com ಈ ದಿನ.ಕಾಮ್ (@eedinanews) December 23, 2024
ಟೈರ್ ಸ್ಫೋಟಗೊಂಡ ಬಳಿಕ ಟೈಯರ್ ಡ್ರಮ್ ಬಸ್ಸಿನ ಮೇಲ್ಚಾವಣಿಯ ಮೇಲೆ ಬಿದ್ದು ನೆಲಕ್ಕುರುಳಿದೆ. ಘಟನೆಯ ಎಲ್ಲಾ ದೃಶ್ಯಾವಳಿಗಳು ಪಕ್ಕದಲ್ಲೇ ಇರುವ ಅಂಗಡಿಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸದ್ಯ ಗಂಭೀರ ಗಾಯಗೊಂಡಿರುವ ಯುವಕ ಅಬ್ದುಲ್ ರಜೀದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.
