ಬೀದರ್ | ಪ್ರತಿಭಾವಂತ ನೂರು ಮಕ್ಕಳಿಗೆ ಪಿಯು ಶಿಕ್ಷಣ ಉಚಿತ : ಬಸವಲಿಂಗ ಪಟ್ಟದ್ದೇವರು

Date:

2025ನೆಯ ಸಾಲಿನಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಬಡ ಮತ್ತು ಪ್ರತಿಭಾವಂತ ನೂರು ಮಕ್ಕಳಿಗೆ ಮುಂದಿನ ಎರಡು ವರ್ಷ ಪಿಯು ಶಿಕ್ಷಣ ಉಚಿತವಾಗಿ ನೀಡಲಾಗುತ್ತಿದೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.

- Advertisement -

ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ʼಕಳೆದ ಎಂಟು ವರ್ಷಗಳಿಂದ ಗೋಲ್ಡನ್ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆ ಏರ್ಪಡಿಸಲಾಗುತ್ತಿದ್ದು, ಇದರಿಂದ ಈ ಭಾಗದಿಂದ 800 ಮಕ್ಕಳು ಉಚಿತ ಶಿಕ್ಷಣ, ಸ್ಪರ್ಧಾತ್ಮಕ ತರಬೇತಿ ಪಡೆದುಕೊಂಡು ತಮ್ಮ ಭವಿಷ್ಯ ಉತ್ತಮವಾಗಿ ರೂಪಿಸಿಕೊಂಡಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ʼಗೋಲ್ಡನ್ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆಯಲ್ಲಿ ಮೊದಲ 25 ರ‍್ಯಾಂಕ್ ಪಡೆಯುವ ವಿದ್ಯಾರ್ಥಿಗಳು ಎರಡು ವರ್ಷ ಪಿಯುಸಿ ಉಚಿತ ಶಿಕ್ಷಣದ ಜತೆಗೆ ವಸತಿ ಮತ್ತು ಸ್ಪರ್ಧಾತ್ಮಕ ತರಬೇತಿ ಸೌಲಭ್ಯ ಪಡೆಯಲಿದ್ದಾರೆ. ನಂತರ ಕ್ರಮವಾಗಿ 75 ವಿದ್ಯಾರ್ಥಿಗಳು ಉಚಿತ ಶಿಕ್ಷಣ ಮತ್ತು ಸ್ಪರ್ಧಾತ್ಮಕ ತರಬೇತಿ ಸೌಲಭ್ಯ ಪಡೆಯಲಿದ್ದಾರೆʼ ಎಂದು ತಿಳಿಸಿದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ʼಹಿಂದುಳಿದ ಭಾಗದ ಪ್ರಗತಿಗಾಗಿ ಡಾ.ಬಸವಲಿಂಗ ಪಟ್ಟದ್ದೇವರು ವಿದ್ಯಾ ದೇಗುಲ ತೆರೆದು ಈ ಭಾಗದ ವಿದ್ಯಾರ್ಥಿಗಳ ಬಾಳು ಬೆಳಗಿಸುತ್ತಿದ್ದಾರೆ. ಸ್ಕಾಲರ್ ಪ್ರವೇಶ ಪರೀಕ್ಷೆ ಏರ್ಪಡಿಸಿ ಬಡ, ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ, ತರಬೇತಿ ನೀಡಿ ಪ್ರೋತ್ಸಾಹ ತುಂಬಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಹಾಜರಾಗಿ ಸದುಪಯೋಗ ಪಡೆದುಕೊಳ್ಳಬೇಕುʼ ಎಂದು ತಿಳಿಸಿದರು.

ಪ್ರಾಚಾರ್ಯ ಬಸವರಾಜ ಮೊಳಕೀರೆ ಮಾತನಾಡಿ, ʼಗೋಲ್ಡನ್ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆ ಜ.5, 12, 19 ಮತ್ತು 25 ರಂದು ಏರ್ಪಡಿಸಲಾಗಿದೆ. ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದ್ದು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಂದ ಇದುವರೆಗೂ ಸುಮಾರು 7 ಸಾವಿರ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಈ ಪ್ರವೇಶ ಪರೀಕ್ಷೆ ಬರೆಯಬಹುದಾಗಿದೆʼ ಎಂದರು.

ಆಡಳಿತಾಧಿಕಾರಿ ಮೋಹನ ರೆಡ್ಡಿ ಮಾತನಾಡಿ, ʼಡಾ.ಬಸವಲಿಂಗ ಪಟ್ಟದ್ದೇವರ ಶೈಕ್ಷಣಿಕ ಕಾಳಜಿ, ದೂರದೃಷ್ಟಿ ಮೆಚ್ಚುವಂತಾಗಿದೆ. ಗುಣಮಟ್ಟದ ಶಿಕ್ಷಣ, ತರಬೇತಿ ಪರಿಣಾಮ ಗುರುಕುಲ ನೀಟ್, ಐಐಟಿ ಸಾಧಕರ ಕೇಂದ್ರವಾಗಿ ಪರಿವರ್ತನೆ ಆಗಿದೆ. ನೀಟ್ ಮತ್ತು ಐಐಟಿಯಲ್ಲಿ ಗಡಿ ಜಿಲ್ಲೆ ಬೀದರ್ ರಾಜ್ಯದಲ್ಲಿ ಮೂರನೇ ಸ್ಥಾನಕ್ಕೇರಿದೆ. ಇದರ ಹಿಂದೆ ಪೂಜ್ಯರ ಬಹುದೊಡ್ಡ ಪರಿಶ್ರಮವಿದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ‌ಗುತ್ತಿಗೆದಾರ ಸಚಿನ್ ಆತ್ಮಹತ್ಯೆ : ಸಿಬಿಐ ತನಿಖೆಗೆ ಒಪ್ಪಿಸಲು ಬಿ.ವೈ.ವಿಜಯೇಂದ್ರ ಆಗ್ರಹ

ಸುದ್ದಿಗೋಷ್ಠಿಯಲ್ಲಿ ಮಹಾರಾಷ್ಟ್ರದ ಶಾಸಕ ಹರೀಶರಾವ ಪಿಂಪಳೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...