ಸಾರ್ವಜನಿಕ ಸಾರಿಗೆಯಲ್ಲಿ ಬರುವ ಪ್ರವಾಸಿಗರಿಗೆ ಬನ್ನೇರುಘಟ್ಟ ಚಿಟ್ಟೆ ಉದ್ಯಾನಕ್ಕೆ ಉಚಿತ ಪ್ರವೇಶ

Date:

ಪರಿಸರ ದಿನಾಚರಣೆಯ ಅಂಗವಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಲವು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಇದರಲ್ಲಿ ಐದು ಸೋಮವಾರಗಳು ಸಾರ್ವಜನಿಕ ಸಾರಿಗೆ ಮೂಲಕ ಬನ್ನೇರುಘಟ್ಟಕ್ಕೆ ಬರುವ ಪ್ರವಾಸಿಗರಿಗೆ ಚಿಟ್ಟೆ ಉದ್ಯಾನ ಭೇಟಿಗೆ ಉಚಿತ ಪ್ರವೇಶ ವ್ಯವಸ್ಥೆ ಮಾಡಲಾಗಿದೆ ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸುನೀಲ್‌ ಪನ್ವಾರ್‌ ತಿಳಿಸಿದ್ದಾರೆ.

“ಮೇ 8ರಿಂದ ಜೂನ್‌ 5ರವರೆಗೆ ಚಿಟ್ಟೆ ಉದ್ಯಾನಕ್ಕೆ ಉಚಿತ ಪ್ರವೇಶದ ವ್ಯವಸ್ಥೆ ಮಾಡಲಾಗಿದೆ. ಮೇ 22, 29 ಮತ್ತು  ಜೂನ್‌ 5ರಂದು ಸಾರ್ವಜನಿಕ ಸಾರಿಗೆಯಲ್ಲಿ ಬರುವ ಪ್ರವಾಸಿಗರಿಗೆ ಉಚಿತ ಪ್ರವೇಶವಿದೆ. ಬಸ್‌ ಟಿಕೆಟ್‌ ಅಥವಾ ಬಸ್‌ ಪಾಸ್‌ ತೋರಿಸಿ ಪ್ರವೇಶ ಪಡೆಯಬಹುದಾಗಿದೆ” ಎಂದು ಹೇಳಿದ್ದಾರೆ.

“ಪ್ರತಿಯೊಂದು ಕುಟುಂಬವು ತಮ್ಮ ಕಾರುಗಳಲ್ಲಿ ಬರುವ ಬದಲಿಗೆ ಸಾರ್ವಜನಿಕ ಸಾರಿಗೆಯಲ್ಲಿ ಬಂದರೆ ಇಂಧನ ಉಳಿತಾಯ, ಪರಿಸರದಲ್ಲಿ ವಾಯು ಮಾಲಿನ್ಯವನ್ನು ತಡೆಯಲು ಸಾಧ್ಯವಾಗುತ್ತದೆ. ಹಾಗಾಗಿ ಪರಿಸರ ದಿನಾಚರಣೆಯ ಅಂಗವಾಗಿ ಉದ್ಯಾನದಲ್ಲಿ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಿಂದಾಗಿ ಸಾರ್ವಜನಿಕ ಸಾರಿಗೆಯನ್ನು ಬೆಂಬಲಿಸಿದಂತಾಗುತ್ತದೆ” ಎಂದಿದ್ದಾರೆ.

ಈ ಸುದೆದಿ ಓದಿದ್ದೀರಾ? ಮಂಡ್ಯ | ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಮಹಿಳೆ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಪ್ರವಾಸಿಗರು ಪರಿಸರ ಸಂರಕ್ಷಣೆಯ ಪ್ರತಿಜ್ಞೆಗೆ ಸಹಿ ಮಾಡಿದರು.

ಪ್ರವಾಸಿಗರಿಂದ ಗಿಡ ನೆಡುವ ಕಾರ್ಯಕ್ರಮವನ್ನು ಪ್ರತಿದಿನ ನಡೆಸಲಾಗುತ್ತಿದೆ. ಜೀವನಶೈಲಿಯಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಳ್ಳುವುದರಿಂದ ಪರಿಸರ ಸಂರಕ್ಷಿಸಲು ಸಾಧ್ಯ. ಹಾಗಾಗಿ ಸ್ವಚ್ಛತೆ, ಕಸ ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಉದ್ಯಾನಕ್ಕೆ ಭೇಟಿ ಮಾಡುವ ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸುವಂತೆ ಪ್ರತಿಜ್ಞೆ ಮಾಡಿ ಸಹಿ ಮಾಡುವ ವ್ಯವಸ್ಥೆಯನ್ನು ಜೈವಿಕ ಉದ್ಯಾನದ ಚಿಟ್ಟೆ ಪಾರ್ಕ್‌ನಲ್ಲಿ ರೂಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು...

ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು,...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ...