ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ , ಐಟಿಸಿ ಮತ್ತು ಮೈರಾಡ ಕಾವೇರಿ ಪ್ರಾದೇಶಿಕ ಸಂಸ್ಥೆ, ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ, ಗ್ರಾಮ ಪಂಚಾಯಿತಿ ಸ್ವಚ್ಛತಾಗಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಧರಣೇಶ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಉದ್ಘಾಟಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಮಾತನಾಡಿ ” ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ವಚ್ಛತಾಗಾರರ ಪಾತ್ರವೂ ಬಹಳ ಮುಖ್ಯವಾಗಿರುತ್ತದೆ. ಆದುದರಿಂದ, ಅವರ ಆರೋಗ್ಯವು ಮುಖ್ಯ. ನೀವುಗಳು ಆರೋಗ್ಯವಾಗಿದ್ದರೆ ಗ್ರಾಮ ಸ್ವಚ್ಛವಾಗಿರುತ್ತದೆ. ಆದುದರಿಂದ, ಎಲ್ಲರೂ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಿ ಹಾಗೂ ಚಿಕಿತ್ಸೆಯನ್ನು ಪಡೆಯಿರಿ ” ಎಂದು ತಿಳಿಸಿದರು.

ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಧರಣೇಶ್ ಮಾತನಾಡಿ ‘ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ವಚ್ಛತಾಗಾರರ ಕೆಲಸವು ಬಹಳ ಮುಖ್ಯವಾಗಿದೆ. ಒಣ ಕಸ ಮತ್ತು ಹಸಿ ಕಸವನ್ನು ಬೇರ್ಪಡಿಸುವುದರಲ್ಲಿ ಇವರ ಪಾತ್ರ ಮುಖ್ಯವಾಗಿದೆ. ಇವರು ಗ್ರಾಮಗಳನ್ನು ಸ್ವಚ್ಛತೆ ಮಾಡುತ್ತಾರೆ. ಹಾಗೂ ಮನೆ ಮನೆಗೆ ಹೋಗಿ ಕಸವನ್ನು ಸಂಗ್ರಹಿಸುತ್ತಾರೆ, ಆದ್ದರಿಂದ, ಈ ದಿನ ಎಲ್ಲರಿಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಂಡಿದ್ದೇವೆ. ಈ ಕಾರ್ಯಕ್ರಮವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಿ ‘ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಆಗಸ್ಟ್. 3 ರಂದು ಬನವಾಸಿ ತೋಟದಲ್ಲಿ ‘ ಬೆಳಕಿನ ಬೇಸಾಯ ‘ ಕಾರ್ಯಗಾರ

ವೈದ್ಯಾಧಿಕಾರಿ ಮಹಾಲಕ್ಷ್ಮಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಅಶೋಕ, ಅರಳಪ್ಪ, ರವಿರಾಜ್, ಸಮುದಾಯ ಆರೋಗ್ಯ ಅಧಿಕಾರಿ ರೀಣಾ ಲೋಬೋ, ವಿದ್ಯಾ, ಆಶಾ ಚಕ್ರವರ್ತಿ, ತಾಲ್ಲೂಕು ಪಂಚಾಯಿತಿ ಕಚೇರಿಯ, ಪುರುಷೋತ್ತಮ್ ಎನ್ ಆರ್ ಎಲ್ , ಸುಹಾಸ್ , ರವೀಶ್, ಸ್ವಚ್ಛತಗಾರರು ಸೇರಿದಂತೆ ಇನ್ನಿತರರು ಇದ್ದರು.