ಮೈಸೂರು | ಗ್ರಾಮ ಪಂಚಾಯತಿ ಸ್ವಚ್ಛತಾಗಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ , ಐಟಿಸಿ ಮತ್ತು ಮೈರಾಡ ಕಾವೇರಿ ಪ್ರಾದೇಶಿಕ ಸಂಸ್ಥೆ, ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ, ಗ್ರಾಮ ಪಂಚಾಯಿತಿ ಸ್ವಚ್ಛತಾಗಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಧರಣೇಶ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಉದ್ಘಾಟಿಸಿದರು.

- Advertisement -

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಮಾತನಾಡಿ ” ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ವಚ್ಛತಾಗಾರರ ಪಾತ್ರವೂ ಬಹಳ ಮುಖ್ಯವಾಗಿರುತ್ತದೆ. ಆದುದರಿಂದ, ಅವರ ಆರೋಗ್ಯವು ಮುಖ್ಯ. ನೀವುಗಳು ಆರೋಗ್ಯವಾಗಿದ್ದರೆ ಗ್ರಾಮ ಸ್ವಚ್ಛವಾಗಿರುತ್ತದೆ. ಆದುದರಿಂದ, ಎಲ್ಲರೂ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಿ ಹಾಗೂ ಚಿಕಿತ್ಸೆಯನ್ನು ಪಡೆಯಿರಿ ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಧರಣೇಶ್ ಮಾತನಾಡಿ ‘ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ವಚ್ಛತಾಗಾರರ ‌ ಕೆಲಸವು ಬಹಳ ಮುಖ್ಯವಾಗಿದೆ. ಒಣ ಕಸ ಮತ್ತು ಹಸಿ ಕಸವನ್ನು ಬೇರ್ಪಡಿಸುವುದರಲ್ಲಿ ಇವರ ಪಾತ್ರ ಮುಖ್ಯವಾಗಿದೆ. ಇವರು ಗ್ರಾಮಗಳನ್ನು ಸ್ವಚ್ಛತೆ ಮಾಡುತ್ತಾರೆ. ಹಾಗೂ ಮನೆ ಮನೆಗೆ ಹೋಗಿ ಕಸವನ್ನು ಸಂಗ್ರಹಿಸುತ್ತಾರೆ, ಆದ್ದರಿಂದ, ಈ ದಿನ ಎಲ್ಲರಿಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಂಡಿದ್ದೇವೆ. ಈ ಕಾರ್ಯಕ್ರಮವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಿ ‘ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಆಗಸ್ಟ್. 3 ರಂದು ಬನವಾಸಿ ತೋಟದಲ್ಲಿ ‘ ಬೆಳಕಿನ ಬೇಸಾಯ ‘ ಕಾರ್ಯಗಾರ

ವೈದ್ಯಾಧಿಕಾರಿ ಮಹಾಲಕ್ಷ್ಮಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಅಶೋಕ, ಅರಳಪ್ಪ, ರವಿರಾಜ್, ಸಮುದಾಯ ಆರೋಗ್ಯ ಅಧಿಕಾರಿ ರೀಣಾ ಲೋಬೋ, ವಿದ್ಯಾ, ಆಶಾ ಚಕ್ರವರ್ತಿ, ತಾಲ್ಲೂಕು ಪಂಚಾಯಿತಿ ಕಚೇರಿಯ, ಪುರುಷೋತ್ತಮ್ ಎನ್ ಆರ್ ಎಲ್ , ಸುಹಾಸ್ , ರವೀಶ್, ಸ್ವಚ್ಛತಗಾರರು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...