ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿರುವ ಶ್ರೀ ಸತ್ಯ ಸಾಯಿ ಸರಳಾ ಆಸ್ಪತ್ರೆಯಲ್ಲಿ ಫೆ.15ರಂದು ಶನಿವಾರ ಬೆಳಗ್ಗೆ 8ಗಂಟೆಯಿಂದ ಸಂಜೆ 4.30ರವರೆಗೆ ಉಚಿತ ಹೃದಯ ಸಂಬಂಧಿ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಸದರಿ ಶಿಬಿರದಲ್ಲಿ ನುರಿತ ಹೃದ್ರೋಗ ತಜ್ಞರು ಮತ್ತು ಹೃದಯ ಶಸ್ತ್ರಚಿಕಿತ್ಸಕರು ಭಾಗವಹಿಸಲಿದ್ದು, ಹೃದಯ ಸಂಬಂಧಿ ಕಾಯಿಲೆಗಳಾದ ಆಂಜಿಯೋಪ್ಲಾಸ್ಟಿ, ಆಂಜಿಯೋಗ್ರಾಮ್, ಮಕ್ಕಳ ಹೃದಯ ಶಸ್ತ್ರಚಿಕಿತ್ಸೆಗಳು ಮುಂತಾದ ಸೂಕ್ಷ್ಮ ಶಸ್ತ್ರಚಿಕಿತ್ಸೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಲಾಗುವುದು. ಜತೆಗೆ ಸಮಾಲೋಚನೆ, ತಪಾಸಣೆ, ಚಿಕಿತ್ಸೆ, ಔಷದೋಪಚಾರವೂ ಉಚಿತವಾಗಿರಲಿದೆ.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮುದಾಸೀರ್ ದಾವೂದ್ ಆಯ್ಕೆ
ಆಸಕ್ತರು ಬೆಳಗ್ಗೆ 9ರಿಂದ ಸಂಜೆ 4ಗಂಟೆವರೆಗೆ ದೂ.ಸಂ:08516275801ಗೆ ಮತ್ತು ಸಂಜೆ 4ರ ನಂತರ ದೂ.ಸಂ:7483124299ಗೆ ಕರೆ ಮಾಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.