ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಮೈಸೂರು ಜಿಲ್ಲೆ, ಸರಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ 100 ದಿನಗಳ ಹ್ಯಾಂಡ್‌ಹೆಲ್ಡ್ ಎಕ್ಸ್-ರೇ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಉದ್ಘಾಟಿಸಿ ಮಾತನಾಡಿ, ಕ್ಷಯರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು. ಪ್ರಸ್ತುತ ಕ್ಷಯರೋಗ ಚಿಕಿತ್ಸೆಯನ್ನು ಪಡೆಯುತ್ತಿರುವ ರೋಗಿಗಳ ಸಂಪರ್ಕದಲ್ಲಿರುವವರು ಹಾಗೂ ರೋಗದ ಅಪಾಯ ಹೆಚ್ಚಿರುವ ಪ್ರದೇಶಗಳ ಜನರಿಗೆ ಉಚಿತವಾಗಿ ಹ್ಯಾಂಡ್‌ಹೆಲ್ಡ್ ಎಕ್ಸ್-ರೇ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.
ಸರಗೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಈ ಸೌಲಭ್ಯದ ಪ್ರಯೋಜನ ಪಡೆದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ?ಗುಂಡ್ಲುಪೇಟೆ | ಜಾತಿನಿಂದನೆ ಹಾಗೂ ಹಲ್ಲೆ ಆರೋಪ: ನಾಲ್ವರು ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು
ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞೆ ಡಾ. ಜಯಮಾಲಾ, ಕ್ಷ-ಕಿರಣ ತಂತ್ರಜ್ಞರಾದ ಮಹದೇವಸ್ವಾಮಿ ಮತ್ತು ಲಾವಣ್ಯ, ಕ್ಷಯರೋಗ ಮೇಲ್ವಿಚಾರಕರಾದ ನಾಗರಾಜು ಹಾಗೂ ಉಮೇಶ್, ಸಿಬ್ಬಂದಿಗಳಾದ ರವಿರಾಜ್ ಮತ್ತು ಶರಣಪ್ಪ, ಆಸ್ಪತ್ರೆಯ ಅಧೀಕ್ಷಕ ವಿಜಯರಾಘವ, ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಜಗದೀಶ್, ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಇದ್ದರು.





