ಬೀದರ್‌ | ಸೌಹಾರ್ದ ಪರಂಪರೆ ಅಭಿಯಾನ | ಬಹುತ್ವದ ನೆಲದಲ್ಲಿ ಕೋಮುವಾದ ಹಬ್ಬಿಸಲು ಬಿಡುವುದಿಲ್ಲ

Date:

ಬಹುತ್ವ ಭಾರತದ ನೆಲದಲ್ಲಿ ಜಾತಿ-ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕಿ ಕೋಮುವಾದ ಹಬ್ಬಿಸಲು ಬಿಡುವುದಿಲ್ಲ. ಸೌಹಾರ್ದ ಪರಂಪರೆ ಉಳಿವಿಗಾಗಿ ನಾವು ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಸೌಹಾರ್ದ ಪರಂಪರೆ ಅಭಿಯಾನದ ಅಂಬುಬಾಯಿ ಮಾಳಗೆ ಹೇಳಿದರು.

ಸೌಹಾರ್ದ ಸಂಘಟನೆಗಳು, ವಿವಿಧ ಪ್ರಗತಿಪರ, ಜನಪರ ಸಂಘಟನೆಗಳು, ಸಮಾನ ಮನಸ್ಕರು ವತಿಯಿಂದ ಮಹಾತ್ಮ ಗಾಂಧಿ ಹುತಾತ್ಮ ದಿನ ಅಂಗವಾಗಿ ಆಯೋಜಿಸಿದ್ದ ಸೌಹಾರ್ದ ಪರಂಪರೆಯ ಅಭಿಯಾನವನ್ನು ಬೀದರ್ ನಗರದ ‌ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಸೌಹಾರ್ದತಾ ಮಾನವ ಸರಪಳಿ‌ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸೌಹಾರ್ದತಾ ಭಾರತ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳು ಘೋಷಣೆ ಕೂಗಿದರು.

“ಸೌಹಾರ್ದ ಎಂದರೆ ಪಕ್ಷಪಾತವಲ್ಲ, ಪೂರ್ವಾಗ್ರಹವಲ್ಲ. ಇದು ಎಲ್ಲಾ ವಲಯದ ಅವಿವೇಕಗಳನ್ನು ಮೀರಿದ ವಿವೇಕದ ಹಾದಿ. ಶಾಂತಿ, ಸಮಾಧಾನ ಮತ್ತು ಸಮಾನ ಮನಸ್ಥಿತಿಯ ಸಾಮಾಜಿಕ ಮೌಲ್ಯಪರ ಮತ್ತು ವಿರೋಧಿ ನೆಲೆಗಳಲ್ಲಿರುವ ವೈರುಧ್ಯಗಳನ್ನು ಒಂದಾಗಿಸುವ ಪ್ರಕ್ರಿಯೆಯ ಪ್ರತೀಕವೇ ಸೌಹಾರ್ದ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಅಭಿಯಾನದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.

ಜನವಾದಿ ಮಹಿಳಾ ಸಂಘಟನೆಯ ಮುಖ್ಯಸ್ಥೆ ಸಾವಿತ್ರಾಬಾಯಿ ಚಿಕ್ಕಮಠ ಮಾತನಾಡಿ, “ದೇಶದಲ್ಲಿ ಸೌಹಾರ್ದತೆಯ ಗಟ್ಟಿ ಪರಂಪರೆಯಿದೆ. ಪ್ರಾಚೀನ ಕಾಲದಿಂದ ಆಧುನಿಕ ಕಾಲದವರೆಗೂ ಈ ಸೌಹಾರ್ದ ಪರಂಪರೆಯು ಸಂಕುಚಿತ ಸವಾಲುಗಳನ್ನು ಮೆಟ್ಟಿ ಮುಂದುವರೆಯುತ್ತ ಬಂದಿದೆ. ಈ ಸೌಹಾರ್ದ ಸಂವೇದನೆಗೆ ಧಕ್ಕೆ ತರಲು ಯಾವುದೇ ಧರ್ಮ ಮೂಲದವರು ಪ್ರಯತ್ನಿಸಿದರೂ ಅದನ್ನು ತೀವ್ರವಾಗಿ ಖಂಡಿಸುತ್ತೇವೆ. ಕೆಲವು ಹಿತಾಸಕ್ತಿಗಳು ಧರ್ಮದ ಹೆಸರಿನಲ್ಲಿ ಜನಸಮುದಾಯದ ನಡುವೆ ಕಂದಕ ಮೂಡಿಸುತ್ತ ಕಲುಷಿತ ವಾತಾವರಣಕ್ಕೆ ಕಾರಣವಾಗುತ್ತಿರುವಾಗ, ಜನಸಮುದಾಯಕ್ಕೆ ಸತ್ಯವನ್ನು ಮನವರಿಕೆ ಮಾಡಿಕೊಡುವುದು ನಮ್ಮ ನೈತಿಕ ಜವಾಬ್ದಾರಿಯಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಆಯಾ ಕುಮಾರ್, ಗಯಾ ಕುಮಾರ್’- ಅವರೇ ನಿತೀಶ್ ಕುಮಾರ್

ಅಭಿಯಾನದಲ್ಲಿ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು, ಕೂಲಿಕಾರರ ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ ವಿವಿಧ ಜನಪರ ಸಂಘಟನೆಗಳ ಪ್ರಮುಖರಾದ ಪ್ರಭು ಸಂತೋಷ್ಕರ್, ಇಸಾಮೋದ್ದಿನ್ ಮೀರಾಸಾಬ್ ಲಖನ ಮಹಾಜನ್, ರೇಷ್ಮಾ ಹಂಸರಾಜ, ಗೌಸುದ್ದಿನ್, ಶಶಿಕಾಂತ ಡಾಂಗೆ, ರಾಜು,  ಶ್ರೀದೇವಿ ಚಿವಡೆ, ಮಹೇಶ್, ಕಾಟೆ, ಸಚಿನ್ ಗುಂಡೆ ಜಯಶ್ರೀ  ಆರತಿ ಹಳಿಖೇಡ, ರಾಜು ಪಂಡರಗೆರಾ, ಪದ್ಮಾವತಿ ಸ್ವಾಮಿ , ಉಷಾ ಗುತ್ತೆದಾರ, ರೇಖಾ, ಪ್ರಭು ಸಂತೋಷ, ಓಂಪ್ರಕಾಶ್ ರೊಟ್ಟೆ, ಜಗದೀಶ್ವರ ಬಿರಾದಾರ ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....

ತುಮಕೂರು | ಕೇಂದ್ರದಲ್ಲಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ: ಗೃಹ ಸಚಿವ ಪರಮೇಶ್ವರ್

ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...