ಗದಗ | ೨೦, ೨೧ ಗಜೇಂದ್ರಗಡ ಪಟ್ಟಣದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ, ವ್ಯವಸ್ಥಿತವಾಗಿ ಜರುಗಲಿ: ಸಚಿವ ಎಚ್ ಕೆ ಪಾಟೀಲ್

Date:

Advertisements

“ಜನೆವರಿ ೨೦, ೨೧ ರಂದು ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಜರುಗುವ ಜಿಲ್ಲಾ ಸಾಹಿತ್ಯ ಸಮ್ಮೇಳನ ಅತ್ಯಂತ ವ್ಯವಸ್ಥಿತವಾಗಿ ಜರುಗಲಿ. ಕನ್ನಡದ ಕಂಪು ಜಿಲ್ಲೆಯಲ್ಲೇಡೆ ಪಸರಿಸಲಿ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಹೇಳಿದರು.

ಜಿಲ್ಲಾ ಸಾಹಿತ್ಯ ಸಮ್ಮೇಳನದ ಲಾಂಚನವನ್ನು ಗದಗ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ ಪಾಟೀಲ ಬಿಡುಗಡೆ ಮಾಡಿ ಮಾತನಾಡಿದರು.

“ಗದಗ ಜಿಲ್ಲೆಯ ಸಾಹಿತ್ಯ ಸಮ್ಮೇಳನದ ಮೂಲಕ ಜನಸಾಮಾನ್ಯರಿಗೂ ಸಹ ನಾಡಿನ ಜಿಲ್ಲೆಯ ಸಾಹಿತ್ಯ ಸಂಸ್ಕೃತಿಯ ಪರಿಚಯ ಅರಿವು ಆಗಬೇಕು. ಈ ಮೂಲಕ ನಮ್ಮ ಗದಗ ಜಿಲ್ಲೆಯ ಐತಿಹಾಸಿಕ ಪರಂಪರೆಯ ಅರಿವು ಮೂಡಬೇಕು. ಒಟ್ಟಾರೆ ಸಾಹಿತ್ಯ ಸಮ್ಮೇಳನದ ಮೂಲ ಆಶಯ ಇಡೇರಬೇಕು” ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಹೇಳಿದರು.

Advertisements

ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ ಎಸ್ ಪಾಟೀಲ, ಮಾಜಿ ಶಾಸಕ ಡಿಆರ್ ಪಾಟೀಲ, ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿಬಿ ಅಸೋಟಿ, ತಾಲೂಕ ಅಧ್ಯಕ್ಷ ಅಶೋಕ್ ಮಂದಾಲಿ, ಸಿದ್ದು ಪಾಟೀಲ, ಎಸ್ ಎನ್ ಬಳ್ಳಾರಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿವೇಕಾನಂದ ಗೌಡ ಪಾಟೀಲ, ಪರಿಷತ್ತಿನ ಪದಾಧಿಕಾರಿಗಳಾದ ಜಿಲ್ಲಾ ಗೌರವ ಕಾರ್ಯದರ್ಶಿ ಶಿವಾನಂದ ಗಿಡ್ನಂದಿ, ಕಿಶೋರ್ ಬಾಬು ನಾಗರಕಟ್ಟಿ, ಕೋಶಾಧ್ಯಕ್ಷ ಡಿ ಎಸ್ ಬಾಪುರಿ, ದತ್ತ ಪ್ರಸನ್ನ ಪಾಟೀಲ ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸರಿಯಾಗಿ ಓದಲು ಬರುತ್ತಿಲ್ಲ : ಶಾಸಕ ಪ್ರಭು ಚವ್ಹಾಣ

ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ ಬಿ ಸಂಕದ, ಡಿ ವೈ ಎಸ್ ಪಿ ವಿದ್ಯಾನಂದ ನಾಯ್ಕ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್ ಎಸ್ ಬುರಡಿ,ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೊಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಇದ್ದರು.

ಈದಿನ.ಕಾಮ್ ಕೇಳುದಾಣ ಕನ್ನಡ ಪಾಡ್‌ಕಾಸ್ಟ್ Eedina.Com Kannada Podcast
ಈದಿನ.ಕಾಮ್ ಕೇಳುದಾಣ
+ posts

ಬದುಕಿನ ಮೇಲಿನ ಪ್ರೀತಿ ಹೆಚ್ಚಿಸುವ ಆಡಿಯೊ-ಬರಹಗಳ ನಿಲುದಾಣ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X