ಗದಗ | ಲಕ್ಕುಂಡಿ ಉತ್ಖನನ ಬೆನ್ನಲೇ ಮತ್ತೆ 8 ತಾಣಗಳು ಸಂರಕ್ಷಿತ ಸ್ಮಾರಕಗಳ ಘೋಷಣೆ

Date:

ಐತಿಹಾಸಿಕ ಲಕ್ಕುಂಡಿ ಗ್ರಾಮದ 16 ತಾಣಗಳನ್ನು ಈಗಾಗಲೇ ರಾಜ್ಯ ಸಂರಕ್ಷಿತ ಸ್ಮಾರಕಗಳನ್ನು ಘೋಷಣೆ ಮಾಡಲಾಗಿದೆ. ಅದರ ಜೊತೆಗೆ ಇನ್ನು 8 ದೇವಸ್ಥಾನ ಭಾವಿಗಳನ್ನು ಫೆಬ್ರವರಿ ಅಂತ್ಯದೊಳಗೆ ಸಂರಕ್ಷಿತ ಸ್ಮಾರಕಗಳಾಗಿ ರಾಜ್ಯ ಸರ್ಕಾರದಿಂದ ಘೋಷಣೆ ಮಾಡಲಾಗುವುದು” ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

- Advertisement -

ಗದಗ ಪಟ್ಟಣದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಉನ್ನತ ಮಟ್ಟದ ಸಲಹಾ ಸಮಿತಿಯ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಇದಲ್ಲದೇ, ಲಕ್ಕುಂಡಿಯ ಇನ್ನು 20 ದೇವಸ್ಥಾನ, ಬಾವಿಗಳನ್ನು ರಾಜ್ಯ ಸಂರಕ್ಷಿತ ಸ್ಮಾರಕಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ಸಂಬಂಧ ಒಂದು ತಿಂಗಳ ಒಳಗಾಗಿ ಸಮಗ್ರ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಲಾಗಿದೆ. ಇದರಿಂದಾಗಿ ಲಕ್ಕುಂಡಿಯ ಒಟ್ಟು 44 ತಾಣಗಳು ಸರ್ಕಾರದ ನೇರ ಉಸ್ತುವಾರಿಗೆ ಒಳಪಡಲಿದ್ದು, ಇವುಗಳ ಅಭಿವೃದ್ಧಿ ಮತ್ತು ರಕ್ಷಣೆಗೆ ಹೆಚ್ಚಿನ ಅನುದಾನ ಲಭ್ಯವಾಗಲಿದೆ” ಎಂದರು.

10 ಕೋಟಿ ಬಿಡುಗಡೆ : ಲಕ್ಕುಂಡಿಯ ಆಯ್ದ 5 ದೇವಸ್ಥಾನಗಳು ಮತ್ತು 1 ಪ್ರಾಚೀನ ಬಾವಿಯ ಸಮಗ್ರ ಅಭಿವೃದ್ಧಿಗಾಗಿ ಈಗಾಗಲೇ 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಫೆಬ್ರವರಿ ತಿಂಗಳಲ್ಲಿ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿ ಕೆಲಸ ಆರಂಭಿಸಲಾಗುವುದು” ಎಂದರು.

“ಮಣ್ಣಿನಡಿಯಲ್ಲಿ ಸ್ಪಷ್ಟವಾಗಿ ಕಾಣದ ದೇವಸ್ಥಾನಗಳನ್ನು ಗುರುತಿಸಿ ಮಾರ್ಚ್ ಒಳಗೆ ಮರುಜೀವ ನೀಡಲು ವಿಶೇಷ ಉತ್ಖನನ ನಡೆಸಲಾಗುವುದು. ಅದಕ್ಕೆ ಜನರ ಸಹಕಾರ ಅಗತ್ಯವಿದ್ದು, ಕೆಲವರಿಗೆ ಪರಿಹಾರ ಕೊಟ್ಟು, ಇಲ್ಲವೇ ಮನವೊಲಿಸಿ ಐತಿಹಾಸಿಕ ತಾಣಗಳನ್ನು ಸರಕಾರಕ್ಕೆ ಕೊಡಬೇಕು ಎಂದು ಜನರಲ್ಲಿ ವಿನಂತಿ ಮಾಡಿಕೊಳ್ಳುವೆ ಎಂದರು.

165 ಲಕ್ಷ ರೂ. ಬಿಡುಗಡೆ : ಲಕ್ಕುಂಡಿಯ ಕಲಾ ವೈಭವವನ್ನು ಅಧ್ಯಯನ ಮಾಡಲು ಬಯಲು ವಸ್ತು ಸಂಗ್ರಹಾಲಯ ನಿರ್ಮಾಣಕ್ಕೆ 165 ಲಕ್ಷ ರೂ. ಬಿಡುಗಡೆಯಾಗಿದೆ. ಗಣರಾಜ್ಯೋತ್ಸವದ ಒಳಗೆ ಜಮೀನು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ, ಟೆಂಡರ್ ಕರೆಯಲು ಸೂಚಿಸಲಾಗಿದೆ ಎಂದು  ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಸಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಹೇಳಿದರು.

ಈ ವೇಳೆ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಸಲಹಾ ಸಮಿತಿಯ ಸದಸ್ಯ ಸಿದ್ದು ಪಾಟೀಲ, ಅ ದ ಕಟ್ಟಿಮನಿ, ಜಿಲ್ಲಾಧಿಕಾರಿ ಸಿ ಎನ್   ಶ್ರೀಧರ, ಪುರಾತತ್ವ ಇಲಾಖೆ ಆಯುಕ್ತ ದೇವರಾಜ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್   ಕೆ ಆರ್, ಡಾ. ಶರಣು‌ ಗೊಗೇರಿ, ಲಕ್ಕುಂಡಿ ಗ್ರಾ ಪಂ ಅಧ್ಯಕ್ಷ ಕೆಂಚಪ್ಪ ಪೂಜಾರ, ಅಧಿಕಾರಿಗಳಾದ ಗಂಗಪ್ಪ ಎಂ, ವಸಂತ ಮಡ್ಲೂರ, ಕೊಟ್ರೇಶ್ ವಿಭೂತಿ, ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ತೇಜಶ್ವರ, ಮಲ್ಲಯ್ಯ ಕೆ,  ಅಮೀರ್ ನಾಯ್ಕ, ಸೇರಿದಂತೆ ಇತರರು ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...