ಕೆ ಎಸ್ ಆರ್ ಟಿ ಸಿ ಬಸ್ ವಿದ್ಯಾರ್ಥಿ ತಲೆ ಮೇಲೆ ಹರಿದು ಸ್ಥಳದಲ್ಲಿಯೇ ವಿದ್ಯಾರ್ಥಿ ಮೃತಪಟ್ಟ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ.
ರಾಘವೇಂದ್ರ ಮಣಿಕಟ್ಟಿ (20) ಮೃತ ವಿದ್ಯಾರ್ಥಿ. ನರಗುಂದ ಪಟ್ಟಣದ ಸರಕಾರಿ ಸಿದ್ದೇಶ್ವರ ಪದವಿ ಕಾಲೇಜಿನಲ್ಲಿ ಬಿ ಎ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿದ್ದ.
ಬಸ್ ಪೂರ್ತಿ ಪ್ರಯಾಣಿಕರು ತುಂಬಿದ್ದರು. ರಾಘವೇಂದ್ರ ಬಸ್ಸಿನ ಮುಂದಿನ ಬಾಗಿಲಲ್ಲಿ ನಿಂತಿದ್ದ. ಬಸ್ ಕೊಣ್ಣೂರ ನಿಲ್ದಾಣದಿಂದ ಹೊರಡುವ ವೇಳೆ ತಿರುವಿನಲ್ಲಿ ಆಯತಪ್ಪಿ ವಿದ್ಯಾರ್ಥಿ ಕೆಳಗೆ ಬಿದ್ದಿದ್ದಾನೆ. ಬಸ್ಸಿನ ಹಿಂದಿನ ಚಕ್ರಗಳಿಗೆ ವಿದ್ಯಾರ್ಥಿ ಸಿಲುಕಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇದನ್ನು ಓದಿದ್ದೀರಾ? ಮರಕುಂಬಿ ಪ್ರಕರಣ | ಜೀವಾವಧಿ ಶಿಕ್ಷೆಗೊಳಗಾಗಿದ್ದ 98 ಅಪರಾಧಿಗಳ ಪೈಕಿ 97 ಜನರಿಗೆ ಹೈಕೋರ್ಟ್ ಜಾಮೀನು
ಬೆಳಗಾವಿ ಜಿಲ್ಲೆಯ ರಾಮದುರ್ಗದಿಂದ ಕೊಣ್ಣೂರ, ನರಗುಂದ, ಗದಗ ಮಾರ್ಗವಾಗಿ ಹೊಸಪೇಟೆಗೆ ಹೊರಟಿದ್ದ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ.