ಗದಗ | ತಲೆ ಮೇಲೆ ಹರಿದ ಬಸ್ ; ಸ್ಥಳದಲ್ಲಿಯೇ ವಿದ್ಯಾರ್ಥಿ ಸಾವು

Date:

ಕೆ ಎಸ್ ಆರ್ ಟಿ ಸಿ ಬಸ್ ವಿದ್ಯಾರ್ಥಿ ತಲೆ ಮೇಲೆ ಹರಿದು ಸ್ಥಳದಲ್ಲಿಯೇ ವಿದ್ಯಾರ್ಥಿ ಮೃತಪಟ್ಟ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ.

- Advertisement -

ರಾಘವೇಂದ್ರ ಮಣಿಕಟ್ಟಿ (20) ಮೃತ ವಿದ್ಯಾರ್ಥಿ. ನರಗುಂದ ಪಟ್ಟಣದ ಸರಕಾರಿ ಸಿದ್ದೇಶ್ವರ ಪದವಿ ಕಾಲೇಜಿನಲ್ಲಿ ಬಿ ಎ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಸ್ ಪೂರ್ತಿ ಪ್ರಯಾಣಿಕರು ತುಂಬಿದ್ದರು. ರಾಘವೇಂದ್ರ ಬಸ್ಸಿನ ಮುಂದಿನ ಬಾಗಿಲಲ್ಲಿ ನಿಂತಿದ್ದ. ಬಸ್ ಕೊಣ್ಣೂರ ನಿಲ್ದಾಣದಿಂದ ಹೊರಡುವ ವೇಳೆ ತಿರುವಿನಲ್ಲಿ ಆಯತಪ್ಪಿ ವಿದ್ಯಾರ್ಥಿ ಕೆಳಗೆ ಬಿದ್ದಿದ್ದಾನೆ. ಬಸ್ಸಿನ ಹಿಂದಿನ ಚಕ್ರಗಳಿಗೆ ವಿದ್ಯಾರ್ಥಿ ಸಿಲುಕಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇದನ್ನು ಓದಿದ್ದೀರಾ? ಮರಕುಂಬಿ ಪ್ರಕರಣ | ಜೀವಾವಧಿ ಶಿಕ್ಷೆಗೊಳಗಾಗಿದ್ದ 98 ಅಪರಾಧಿಗಳ ಪೈಕಿ 97 ಜನರಿಗೆ ಹೈಕೋರ್ಟ್‌ ಜಾಮೀನು

ಬೆಳಗಾವಿ ಜಿಲ್ಲೆಯ ರಾಮದುರ್ಗದಿಂದ ಕೊಣ್ಣೂರ, ನರಗುಂದ, ಗದಗ ಮಾರ್ಗವಾಗಿ ಹೊಸಪೇಟೆಗೆ ಹೊರಟಿದ್ದ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...