ಗದಗ | ಯೋಗದಿಂದ ರೋಗ ಮುಕ್ತ ಜೀವನ ಸಾಧ್ಯ: ಎಂಎಲ್‌ಸಿ ಸಂಕನೂರ

Date:

  • ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
  • ಪ್ರತಿನಿತ್ಯ ಲವಲವಿಕೆ, ಆರೋಗ್ಯದಿಂದಿರಲು ಯೋಗಭ್ಯಾಸ ಸಹಕಾರಿ

ಭಾರತ ದೇಶಕ್ಕೆ ಸೀಮಿತವಾಗಿದ್ದ ಯೋಗವನ್ನು ವಿಶ್ವಕ್ಕೆ ಪರಿಚಯಿಸಿದವರು ಪ್ರಧಾನಿ ನರೇಂದ್ರ ಮೋದಿ, ಯೋಗ ಸ್ವದೇಶೀಯ ವಿದ್ಯೆಯಾಗಿದ್ದು, ವಿಶ್ವ ಶಾಂತಿಗಾಗಿ ಯೋಗ ದಿನ ಆಚರಣೆಗೆ ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ ಹೇಳಿದರು.

ಗದಗ ನಗರದ ಕೆ ಎಚ್ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನಗರಸಭೆ ಗದಗ-ಬೆಟಗೇರಿ ಆಶ್ರ ಯದಲ್ಲಿ ‘ವಸುದೈವ ಕುಟುಂಬಕಂ’ ಹಾಗೂ ‘ಪ್ರತಿ ಮನೆಮನೆ ಅಂಗಳದಲ್ಲಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಜೂನ್ 21ನ್ನು ವಿಶ್ವ ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ. ಇಂದು ಯೋಗದ ಮಹತ್ವ ಮತ್ತು ಅದನ್ನು ದಿನಂಪ್ರತಿ ಜೀವನದಲ್ಲಿ ಅಳವಡಿಸಿಕೊಳ್ಳುವದರಿಂದಾಗುವ ಪ್ರಯೋಜನಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ಜಗತ್ತಿನ 272 ರಾಷ್ಟ್ರಗಳು ಇಂದು ಯೋಗ ದಿನ ಆಚರಣೆ ಮಾಡುತ್ತಿರುವುದು ರಾಷ್ಟ್ರಕ್ಕೆ ಹೆಮ್ಮೆಯ ವಿಷಯ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರೋಗಮುಕ್ತ ಬದುಕಿಗೆ ಯೋಗ ಸಹಕಾರಿ. ಜಿಲ್ಲೆಯಲ್ಲಿ ಸಾಕಷ್ಟು ಜನಯೋಗ ಗುರುಗಳಿದ್ದಾರೆ. ಅವರಿಗೆ ಯೋಗದಿಂದ ಏನೆಲ್ಲ ಅನುಕೂಲತೆಗಳಿವೆ ಎಂದು ಗೊತ್ತಿದ್ದು, ಅದನ್ನು ಯೋಗಾಸಕ್ತರಿಗೆ ದಿನಂಪ್ರತಿ ಕಲಿಸುತ್ತಾರೆ. ನಿತ್ಯ ಪ್ರತಿಯೊಬ್ಬರೂ ಲವಲವಿಕೆಯಿಂದ, ಉತ್ಸಾಹದಿಂದ ಕಾರ್ಯನಿರ್ವಹಿಸಲು ಯೋಗ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಉಷಾ ದಾಸರ,ಉಪಾಧ್ಯಕ್ಷೆ ಸುನಂದಾ ಬಾಕಳೆ, ಅಪರ ಜಿಲ್ಲಾಧಿಕಾರಿ ಮಾರುತಿ ಎಂ ಪಿ, ಉಪವಿಭಾಗಾಧಿಕಾರಿ ಅನ್ನಪೂರ್ಣ ಎಂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕರಿಸಿದ್ಧಪ್ಪ, ಕ್ರೀಡಾಧಿಕಾರಿ ವಿಠ್ಠಲ ಜಾಬಗೌಡ್ರ ಸೇರಿದಂತೆ ಇತರರು ಇದ್ದರು.

ಈ ಸುದ್ದಿ ಓದಿದ್ದೀರಾ? ಶೀಘ್ರದಲ್ಲೇ ಹಾಲಿನ ದರ ಏರಿಕೆ: ಕೆಎಂಎಫ್‌ ನೂತನ ಅಧ್ಯಕ್ಷ ಭೀಮಾ ನಾಯ್ಕ್‌

ವೇದಿಕೆ ಕಾರ್ಯಕ್ರಮದ ನಂತರ ಕೆ.ಎಚ್.ಪಾಟೀಲ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದ ಮುಖ್ಯಸ್ಥ ಸತೀಶ ಅವರು ನೆರೆದ ಯೋಗಾಸಕ್ತರಿಗೆ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಯೋಗಾಭ್ಯಾಸ ಹೇಳಿಕೊಟ್ಟರು. ಜಿಲ್ಲಾ ಆಯುಷ್ ಅಧಿಕಾರಿ ಡಾ. ಮಲ್ಲಿಕಾರ್ಜುನ ಉಪ್ಪಿನ ಸ್ವಾಗತಿಸಿದರು. ಅಶೋಕ ಮತ್ತಿಕಟ್ಟಿ ಯೋಗ ಪ್ರಾರ್ಥನೆ ಮಾಡಿದರು. ಯೋಗಾಭ್ಯಾಸ ಕಾರ್ಯಕ್ರಮದಲ್ಲಿ 2000ಕ್ಕೂ ಅಧಿಕ ಯೋಗಾಸಕ್ತರು ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಅನನ್ಯ: ದುರುಗಣ್ಣ

ಜಗಜ್ಯೋತಿ ಬಸವಣ್ಣನವರ ಸಮಕಾಲೀನರಾದ ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಇಂದಿಗೂ...

ಶಿರೂರು ಗುಡ್ಡ ದುರಂತ | 8 ಮೀಟರ್ ಅಡಿಯಲ್ಲಿ ಲೋಹದ ಸಾಧನ ಪತ್ತೆ; ಲಾರಿಯಾಗಿರುವ ಶಂಕೆ?

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

ಚಿತ್ರದುರ್ಗ | ಅಸಮಾನತೆ ಹೋಗಲಾಡಿಸುವುದೇ ಶೋಷಿತ ಸಮುದಾಯಗಳ ಏಳಿಗೆಗೆ ಪರಿಹಾರ: ಸಿಎಂ ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ದೇವರಿಂದ ಸೃಷ್ಟಿಯಾಗಿದ್ದಲ್ಲ. ಸ್ವಾರ್ಥ ಮನುಷ್ಯನ ಸೃಷ್ಟಿ, ಅಸಮಾನತೆ ಹೋಗಲಾಡಿಸದೆ...

ಉಡುಪಿ | ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳ: ಸುರೇಶ್ ಕಲ್ಲಾಗರ

ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳವಾಗುತ್ತಿದೆ. ಆಟೋರಿಕ್ಷಾ ಚಾಲಕರು ತಮ್ಮ...