ಗದಗ | ಮನರೇಗಾ ಸಿಬ್ಬಂದಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಅಭಿನಂದನಾ ಕಾರ್ಯಕ್ರಮ

Date:

ಪ್ರತಿಯೊಬ್ಬರು ತಮ್ಮ ಕರ್ತವ್ಯಗಳನ್ನು ಅರ್ಥ ಮಾಡಿಕೊಂಡು ಉತ್ತಮ ಕೆಲಸ ಮಾಡುವ ಮೂಲಕ ತಾಲೂಕಿನ ಪ್ರಗತಿ ಹಾಗೂ ಕೀರ್ತಿಗೆ ನಿಮ್ಮದೇ ಆದ ಕೊಡುಗೆಯನ್ನು ನೀಡಿ ಎಂದು ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ರವಿ.ಎ.ಎನ್ ಹೇಳಿದರು.

- Advertisement -

ರೋಣ ಪಟ್ಟಣದ ಗುರು ಭವನದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಹಾಗೂ ಮನರೇಗಾ ಸಿಬ್ಬಂದಿಗಳಿಗಾಗಿ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ವಿವಿಧ ಸಿಬ್ಬಂದಿಗಳಿಗೆ ಅಭಿನಂದಿಸಿ ಸನ್ಮಾನಿಸಿ ಅವರು ಮಾತನಾಡಿದರು. ರೋಣ ತಾಲೂಕಿನ ಪ್ರಗತಿ ಉತ್ತಮಗೊಳಿಸಲು ನಿಮ್ಮದೆ ಆದ ಕೊಡುಗೆಯನ್ನು ನೀಡುವ ಮೂಲಕ ತಾಲೂಕನ್ನು ಉನ್ನತ ಸ್ಥಾನದಲ್ಲಿ ಇರಿಸಿದ್ದಿರಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಿಮ್ಮೆಲ್ಲರ ಶ್ರಮ ಮತ್ತು ದುಡಿಮೆಯಿಂದ ನಮ್ಮ ತಾಲೂಕು ಮೇಲ್ಮಟ್ಟದಲ್ಲಿ ಇದೆ. ಹಾಗಾಗಿ ನಿಮ್ಮನ್ನು ಗೌರವಿಸುವದು ನಮ್ಮ ಕರ್ತವ್ಯ ಎಂದರು. ಇನ್ನೊಂದು ದೃಷ್ಟಿಯಿಂದ ನೋಡಿದಾಗ ಈ ರೀತಿಯ ಸಮಾಗಮದಿಂದ ಸಂಬಂಧಗಳು ಗಟ್ಟಿ ಆಗುವುದರ ಜೊತೆಗೆ ನಂಬಿಕೆ, ಪ್ರೀತಿ, ವಿಶ್ವಾಸ ಹೆಚ್ಚಾಗಿ ಕೆಲಸ ವೃದ್ದಿಯಾಗುತ್ತದೆ ನಿಮ್ಮೆಲ್ಲರ ಒಗ್ಗಟ್ಟಿನಿಂದ ಈ ಕಾರ್ಯಕ್ರಮ ಯಶಸ್ವಿ ಆಯಿತು. ಪ್ರತೀ ವರ್ಷವೂ ಇಂತಹ  ಕಾರ್ಯಕ್ರಮವನ್ನು ಮಾಡೋಣ ಉತ್ತಮ ಕೆಲಸ ಮಾಡಿದವರ ಕಾರ್ಯವನ್ನು ಮೆಚ್ಚಿ ಶಬಾಶ್ ಅಂದಾಗ ಆಗುವ ತೃಪ್ತಿಯೇ ಬೇರೆ ಅದರಿಂದ ಹುಮ್ಮಸ್ಸು ಮೂಡಿ ಇನ್ನು ಹತ್ತಾರು ಕೆಲಸವನ್ನು ಮಾಡಲಿಕ್ಕೆ ಪ್ರೇರಣೆ ಬರುತ್ತದೆ ಎಂದರು.

ಗ್ರಾಮ ಮಟ್ಟದಲ್ಲಿ ಕೆಲಸ ಮಾಡುವವರಿಗೆ ಒತ್ತಡ ಇರುತ್ತದೆ, ಎಷ್ಟೇ ಒತ್ತಡ ಇದ್ದರು ಸಹ ಅದನ್ನು ಬದಿಗೊತ್ತಿ ಒಗ್ಗಟ್ಟಾಗಿ ಕೆಲಸ ಮಾಡಿ ಜಿಲ್ಲೆಯ ಹಿತ ದೃಷ್ಟಿಯಿಂದ ತಾಲೂಕಿನ ಹಿತ ದೃಷ್ಟಿಯಿಂದ ಹೊಸ ಆರ್ಥಿಕ ವರ್ಷದಲ್ಲಿ ತಮ್ಮ ಸೇವೆ ಹಾಗೂ ಕಾರ್ಯ ಅವಶ್ಯ ಎಂದರು.

ರೋಣ ತಹಸೀಲ್ದಾರ ನಾಗರಜ್.ಕೆ ಮಾತನಾಡಿ, ಇಲಾಖೆಯ ಆಧಿನದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ವಾರ್ಷಿಕವಾಗಿ ವಿಶೇಷವಾಗಿ ಕಾರ್ಯ ನಿರ್ವಹಿಸಿದವರನ್ನು ಗರುತಿಸಿ ಅವರಿಗೆ ಶಬಾಷ್ ಅನ್ನುವುದು ಒಂದು ಉತ್ತಮ ಕಾರ್ಯ. ಇದನ್ನು ತಾಲೂಕ ಪಂಚಾಯತ ಅಧಿಕಾರಿಗಳು ಮಾಡಿದ್ದಾರೆ. ಇದನ್ನು ಮಾಡುವುದರಿಂದ ಮುಂದಿನ ದಿನಗಳಲ್ಲಿ ಉಳಿದ ಸಿಬ್ಬಂದಿಗಳಿಗೆ ಪ್ರೇರಣೆ ಬರುವ ಹಾಗೆ ಮಾಡಿದ್ದಾರೆ. ಇದು ನಿಜವಾಗಿಯೂ ಒಳ್ಳೆಯ ನಡೆ. ಆಡಳಿತಾತ್ಮಕ ದೃಷ್ಟಿಯಿಂದ ಇದು ಸ್ಪೂರ್ತಿ ನೀಡುತ್ತದೆ ಎಂದರು.

ಅಭಿನಂದನಾ ಪತ್ರ: ನರೇಗಾ ಯೋಜನೆ ಹಾಗೂ ಪಂಚಾಯತ ರಾಜ್ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿದ ಪಿಡಿಒ, ಟಿಎಇ, ಡಿಇಒ, ಬಿಎಫ್‌ಟಿ, ಜೆಕೆಎಂ, ಸಿಪಾಯಿ, ಬಿಲ್ ಕಲೆಕ್ಟರ್, ವಾಟರಮನ್‌ಗಳಿಗೆ ಇಬ್ಬರಂತೆ ಹಾಗೂ ತಾಲೂಕ ಪಂಚಾಯತಿಯ ನಾಲ್ಕು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಪ್ರಾಸ್ತಾವಿಕವಾಗಿ ಸಹಾಯಕ ನಿರ್ಧೇಶಕರಾದ ರಿಯಾಜ ಖತೀಬ್ ( ಗ್ರಾಮೀಣ ಉದ್ಯೋಗ) ಮಾತನಾಡಿದರು. ಸಹಾಯಕ ನಿರ್ದೇಶಕರಾದ (ಪಂಚಾಯತ ರಾಜ್) ಶಿವಯೋಗಿ ರಿತ್ತಿ ಸ್ವಾಗತಿಸಿದರು. ಪಿಡಿಒ ಶಿವನಗೌಡ ಮೆಣಸಗಿ ಹಾಗೂ ಕಾವೇರಿ ಅಸೂಟಿ ಅನಿಸಿಕೆ ವ್ಯಕ್ತಪಡಿಸಿದರು. ಮೇಘರಾಜ ಸಿಂಗ್ರಿ ನಿರೂಪಿಸಿ ವಂದಿಸಿದರು.

ಈ ಸಂದರ್ಭದಲ್ಲಿ ತಾಲೂಕ ಯೋಜನಾಧಿಕಾರಿ ಸಿ.ಎಸ್. ನಿಲಗುಂದ, ತಾಲೂಕ ಪಂಚಾಯತಿ ವ್ಯವಸ್ಥಾಪಕರಾದ ದೇವರಾಜ ಸಜ್ಜನಶೆಟ್ಟರ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಗೀತಾ, ಪಿಡಿಒ ಸಂಘದ ತಾಲೂಕ ಅಧ್ಯಕ್ಷರಾದ ಲೋಹಿತ ಪೂಜಾರ ಸೇರಿದಂತೆ ಪಿಡಿಒಗಳು, ತಾಂತ್ರಿಕ ಸಹಾಯಕರು, ಡಿಇಒಗಳು, ಬಿಎಫ್‌ಟಿ, ಗ್ರಾಮ ಕಾಯಕ ಮಿತ್ರರು, ಗ್ರಾಮ ಪಂಚಾಯತಿ ಸಿಬ್ಬಂದಿ, ತಾಲೂಕ ಪಂಚಾಯತ ಸಿಬ್ಬಂದಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...