ಗದಗ | ತೋಟಗಾರಿಕೆ ಇಲಾಖೆ ವತಿಯಿಂದ ಮೂರು ದಿನಗಳ ಫಲ-ಪುಷ್ಪ ಪ್ರದರ್ಶನ

Date:

ಗದಗ ಜನ ಸಾಮಾನ್ಯರ ಆಸಕ್ತಿ ಹಾಗೂ ಅಭಿರುಚಿಗೆ ಅನುಗುಣವಾಗಿ ಫಲ-ಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಫಲ-ಪುಷ್ಪ ಪ್ರದರ್ಶನ ನಗರದ ಆರೋಗ್ಯವನ್ನು ಎತ್ತಿ ತೋರಿಸುವಂತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ್ ಹೇಳಿದರು.

- Advertisement -

ನಗರದ ಎಪಿಎಂಸಿ ಆವರಣದಲ್ಲಿರುವ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಫಲ-ಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಫಲ-ಪುಷ್ಪ ಪ್ರದರ್ಶನ ಎನ್ನುವುದಕ್ಕಿಂತ ಕಲಾ ಪುಷ್ಪ ಪ್ರದರ್ಶನ ಎನ್ನುವಂತಿದೆ. ಇದೊಂದು ಶ್ರೇಷ್ಠ ಪ್ರದರ್ಶನವಾಗಿದೆ. ಸಾರ್ವಜನಿಕರಿಗೆ ವೀಕ್ಷಣೆಗೆ ಉಚಿತ ಅವಕಾಶವನ್ನು ಇಲಾಖೆಯಿಂದ ಮಾಡಲಾಗಿದ್ದು ಜನಸಾಮಾನ್ಯರು ಈ ಫಲಪುಷ್ಪ ಪ್ರದರ್ಶನಕ್ಕೆ ಆಗಮಿಸಿ ಆಸ್ವಾದಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ, ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರುಗಳಾದ ಶೈಲೇಂದ್ರ ಬಿರಾದಾರ, ಗೀರಿಶ ಹೊಸೂರ, ಗಣ್ಯರಾದ ಬಿ.ಬಿ.ಅಸೂಟಿ, ಅಶೋಕ ಮಂದಾಲಿ. ಎಸ್.ಎನ್.ಬಳ್ಳಾರಿ ಸೇರಿದಂತೆ ಇತರರು ಇದ್ದರು.

ಪ್ರದರ್ಶನದ ಆಕರ್ಷಣೆಗಳು

ಗುಲಾಬಿ ಹೂವುಗಳಿಂದ ಅಲಂಕೃತಗೊಂಡ ವೀರನಾರಾಯಣ ದೇವಸ್ಥಾನ, ಸಿರಿಧಾನ್ಯಗಳಲ್ಲಿ ಅರಳಿದ ಕನ್ನಡಾಂಬೆ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ, ಮರಳಿನಲ್ಲಿ ಸಾಂಸ್ಕೃತಿಕ ರಾಯಭಾರಿ ಬಸವಣ್ಣನ ಮೂರ್ತಿ, ಏಲಕ್ಕಿಯಲ್ಲಿ ಗಣೇಶನ ಮೂರ್ತಿ, ಹೂವುಗಳಲ್ಲಿ ಅಲಂಕೃತಗೊಂಡಿರುವ ಸೆಲ್ಫಿ ಪಾಯಿಂಟ್‍ಗಳು, ತಬಲಾ, ಪಿಯಾನೋ, ಕಲ್ಲಂಗಡಿ ಹಣ್ಣಿನಲ್ಲಿ ಕೆತ್ತನೆಗೊಂಡ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳು ನೋಡುಗರ ಗಮನ ಸೆಳೆದವು.

ಮತ್ತೊಂದೆಡೆ ಗದಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬೆಳೆದಿರುವ ತಾಳೆ, ಸೇವಂತಿಗೆ, ಚೆಂಡು ಹೂವು, ಲಿಂಬೆ, ಹೂಕೋಸು, ಟೊಮ್ಯಾಟೊ, ಹುಣಸೆ, ಪಪ್ಪಾಯಿ, ಕಪ್ಪು ದ್ರಾಕ್ಷಿ, ದ್ರಾಕ್ಷಿ, ಪೇರಲ, ಚಿಕ್ಕು, ಮಾವು, ನುಗ್ಗೆಕಾಯಿ, ಹೀರೇಕಾಯಿ, ಬಾಳೆ, ಯಾಲಕ್ಕಿ ಬಾಳೆ, ಈರುಳ್ಳಿ, ಚಕ್ಕೋತಾ, ಗೋಡಂಬಿ, ವಿಳ್ಯೆದೆಲೆ  ಸೇರಿ ವಿವಿಧ ತರಕಾರಿ, ಹಣ್ಣುಗಳು, ಹೂವುಗಳು ಸಾರ್ವಜನಿಕರನ್ನು ಆಕರ್ಷಿಸಿದವು. ಅದರಲ್ಲೂ ನೋಡಲು ಹಾಗೂ ತಿಣ್ಣಲು ಅಪರೂಪವಾದ ರಾಮ ಫಲ, ಸೀತಾ ಫಲ, ಸ್ಟಾರ್ ಫ್ರುಟ್ಸ್ ಗಮನ ಸೆಳೆದವು.

ಫಲ-ಪುಷ್ಪ ಪ್ರದರ್ಶನದಲ್ಲಿ ಮೀನುಗಾರಿಕೆ ಇಲಾಖೆಯು ಕೂಡ ವಿವಿಧ ಬಗೆಯ ಮೀನುಗಳನ್ನು ಸಾರ್ವಜನಿಕರಿಗೆ ಪರಿಚಯಿಸಿದವು. ಆಸ್ಕರ್ ಫಿಶ್, ಟೈಗರ್ ಬರ್ಬ್, ಕಲರ್ ವಿಡೋವ್ ಟೆಟ್ರಾ, ಬ್ಲಾಕ್ ಮೋರ್ ಫಿಶ್, ಗಪ್ಪಿ ಫಿಶ್, ಬ್ಲಾಕ್ ಘೋಸ್ಟ್ ಫಿಶ್, ಗೋಲ್ಡ್ ಫಿಶ್, ಟೈಗರ್ ಶಾರ್ಕ್, ಅಂಜೆಲ್, ಫ್ಲಾವರ್ ಹಾರ್ನ್ ಫಿಶ್ ಗಳನ್ನು ನೋಡಿ ಕಣ್ತುಂಬಿಕೊಂಡರು.

ಪ್ರದರ್ಶನದಲ್ಲಿ ರಂಗೋಲಿಯಲ್ಲಿ ಗಾನಯೋಗಿ ಪುಟ್ಟರಾಜ ಗವಾಯಿಗಳು, ತೋಂಟದ ಸಿದ್ದಲಿಂಗ ಶ್ರೀಗಳು ಹಾಗೂ ಜ್ಞಾನಯೋಗಿ ಸಿದ್ದೇಶ್ವರ ಶ್ರೀ ಗಳ ಚಿತ್ತಾರಗಳು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾದವು. ವಿಶ್ವನಾಥ ಎಸ್. ಯಲಬುರ್ಗಿಯವರು ಸಂಗ್ರಹಿಸಿ ಪೋಷಣೆ ಮಾಡಿ ಬೆಳೆಸಿದ ಬೊನ್ಸಾಯಿ ಮರಗಳ ಪ್ರದರ್ಶನ, ಪ್ರಸನ್ನ ಮೇವುಂಡಿ ಅವರ ವಿಶೇಷ ಅಲಂಕಾರಿಕ ಗಿಡಗಳು ಸಹ ಪ್ರದರ್ಶನಗೊಂಡವು.

ಸಹಕಾರಿ ಧುರೀಣ ಕೆ.ಎಚ್.ಪಾಟೀಲ: ಫಲ-ಪುಷ್ಪ ಪ್ರದರ್ಶನದಲ್ಲಿ ವಿವಿಧ ಹಣ್ಣುಗಳಿಂದ ಮಹನೀಯರ ಕಲಾಕೃತಿಗಳನ್ನು ರಚಿಸಲಾಗಿದೆ. ಅದರಲ್ಲಿ ಪ್ರಮುಖವಾಗಿ ಸಹಕಾರಿ ಧುರೀಣ, ರಾಜಕೀಯ ಮುತ್ಸದ್ಧಿ ದಿ. ಕೆ.ಎಚ್.ಪಾಟೀಲ ಅವರ ಕಲಾಕೃತಿಯನ್ನು ಕಲ್ಲಂಗಡಿ ಹಣ್ಣಿನಲ್ಲಿ ರಚಿಸಿದ್ದು ಜನಸಾಮಾನ್ಯರ ಆಕರ್ಷಣೆಗೆ ಭಾಜನವಾಯಿತು.

ಇದರೊಟ್ಟಿಗೆ ಕರ್ನಾಟಕ ನಕ್ಷೆ, ಪುನೀತ್ ರಾಜಕುಮಾರ, ಪಂ. ಜವಹರಲಾಲ್ ನೆಹರೂ, ಸಿದ್ಧನಗೌಡ ಪಾಟೀಲ, ಅಂದಾನೆಪ್ಪ ದೊಡ್ಡಮೇಟಿ, ಹುಯಿಲಗೋಳ ನಾರಾಯಣರಾಯರು, ರವೀಂದ್ರನಾಥ ಟ್ಯಾಗೋರ ಅವರ ಕಲಾತ್ಮಕ ಚಿತ್ತಾರ ಆಕರ್ಷಣೀಯ ಎನಿಸಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...