ಗದಗ | ಜಾತಿ ದೌರ್ಜನ್ಯ, ಅಸ್ಪೃಶ್ಯತೆ ಆಚರಣೆ ವಿರುದ್ಧ ಕ್ರಮ ಕೈಗೊಳ್ಳಬೇಕು: ಬಸವರಾಜ್ ಹಿರೇಮನಿ

Date:

ಅಕ್ರಮವಾಗಿ ಸಾರಾಯಿ ಮಾರಾಟ ಹಾಗೂ ಜಾತಿ ದೌರ್ಜನ್ಯ, ಅಸ್ಪೃಶ್ಯತೆ ಆಚರಣೆ ನಡೆಸುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಎಸ್‌ಸಿ/ಎಸ್‌ಟಿ ಪ್ರಕರಣ ಬಂದಾಗ ರಾಜಕೀಯ ಹಾಗೂ ರಾಜಕಾರಣಿಗಳ ಒತ್ತಡಕ್ಕೆ ಮಣಿಯದೆ ತ್ವರಿತವಾಗಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ಶೋಷಿತರ ಮೇಲಾಗುವ ಅನ್ಯಾಯವನ್ನು ತಡೆಗಟ್ಟಬೇಕು ಎಂದು ಬಸವರಾಜ್ ಹಿರೇಮನಿ ಹೇಳಿದರು.

- Advertisement -

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಎಸ್‌ಸಿ/ಎಸ್‌ಟಿ ಕುಂದು ಕೊರತೆ ಸಭೆಯನ್ನು ಪ್ರಥಮ ಬಾರಿಗೆ ಪೊಲೀಸ್ ಠಾಣೆಯಲ್ಲಿ ಆಯೋಜಿಸಲಾಗಿತ್ತು. ಜತೆಗೆ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಶಾಂತಿಸಭೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ವೇಳೆ ನಾಗರಾಜ ದೊಡ್ಡಮನಿ ಮಾತನಾಡಿ, “ಗೋವಿನಾಳ ಗ್ರಾಮದಲ್ಲಿ ಎಸ್‌ಸಿ ಸಮುದಾಯದವರಿಗೆ ದೇವಸ್ಥಾನಗಳಿಗೆ ಮತ್ತು ಕಟ್ಟಿಂಗ್‌ ಶಾಪ್‌ಗಳಿಗೆ ಹೋಗಲು ಇವತ್ತಿಗೂ ಅವಕಾಶ ಕೊಡುತ್ತಿಲ್ಲ. ಇದರ ಕುರಿತು ದಲಿತರೇ ಪ್ರಕರಣ ದಾಖಲಿಸುವ ಪೂರ್ವದಲ್ಲಿ ಪೊಲೀಸ್ ಇಲಾಖೆಯವರೇ ಖುದ್ದು ಪರಿಶೀಲಿಸಿ ದಲಿತರಿಗೆ ನ್ಯಾಯ ದೊರೆಕಿಸಿಕೊಡಲು ಮುಂದಾಗಬೇಕು” ಎಂದರು.

ಫಕಿರೇಶ ಭಜಂತ್ರಿ ಮಾತನಾಡಿ, “ದಲಿತ ಸಮುದಾಯಗಳಿಗೆ ಕಾನೂನಿನ ಅರಿವಿನ ಅಗತ್ಯವಿದೆ. ಆ ನಿಟ್ಟಿನಲ್ಲಿ ಶೋಷಿತ ಸಮುದಾಯಗಳಿಗೆ ಕಾನೂನು ಜಾಗೃತಿ ಸಭೆಗಳಾಗಬೇಕು” ಎಂದರು.

ರಾಘವೇಂದ್ರ ಪೂಜಾರ ಮಾತನಾಡಿ, “ಸಾರಿಗೆ ವಾಹನದಲ್ಲಿ ಅಲೆಮಾರಿ/ಅರೆಅಲೆಮಾರಿ ಜನರು ವ್ಯಾಪಾರಕ್ಕೆಂದು ಹೋಗುವಾಗ ಸಾರಿಗೆ ನಿರ್ವಾಹಕರು ಮತ್ತು ಚಾಲಕರು ಅವರ ಲಗೇಜ್ ಎತ್ತಿ ಹೊರಗೆ ಎಸೆಯುತ್ತಿದ್ದಾರೆ. ಇಂತಹ ಜಾತಿ ನಿಂದನೆ ವರ್ತನೆಗಳನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ನಿಲ್ಲಿಸಿ: ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹ

ಲಕ್ಷ್ಮೇಶ್ವರ ಪಿಎಸ್‌ಐ ಈರಣ್ಣ ರಿತ್ತಿ ಮಾತನಾಡಿ, “ಲಕ್ಷ್ಮೇಶ್ವರ ಪಟ್ಟಣದ ಮುನ್ಸಿಪಲ್ ಕಾಲೇಜ್ ಹಿಂಬಾಗದಲ್ಲಿ ಗುಡಿಸಲಲ್ಲಿ ವಾಸಿಸುವ ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯಗಳ ಗುಡಿಸಲುಗಳಲ್ಲಿ ಬೆಳಕಿಲ್ಲದೆ ಕತ್ತಲಲ್ಲಿ ವಾಸವಿದ್ದಾರೆ. ಈ ಸಮಸ್ಯೆ ಕುರಿತು ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದು ಲೈಟ್ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ಸಭೆಯಲ್ಲಿ ಅನೇಕ ಸಮಸ್ಯೆಗಳ ಕುರಿತು ಚರ್ಚೆಯಾಗಿವೆ. ಅವೆಲ್ಲವುಗಳನ್ನು ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದು ಬಗೆಹರಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

ವರದಿ : ಕೇಶವ ಕಟ್ಟಿಮನಿ ಲಕ್ಷ್ಮೇಶ್ವರ ಸಿಟಿಜನ್ ಜರ್ನಲಿಸ್ಟ್

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...