“ಡಾ. ಬಿ ಆರ್. ಅಂಬೇಡ್ಕರ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ, 2025-26ನೇ ಸಾಲಿನ ಎಸ್ಎಸ್ ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ, ಗದಗ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಂದ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ” ಎಂದು ಎಡಿಎಸ್ಎಸ್ಜಿಲ್ಲಾಧ್ಯಕ್ಷರು ಶಿವಾನಂದ ತಮ್ಮಣ್ಣವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗದಗ ಪಟ್ಟಣದಲ್ಲಿಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, “ಪ್ರತಿಭಾ ಪುರಸ್ಕಾಕ್ಕೆ ಸಲ್ಲಿಸುವ ವಿದ್ಯಾರ್ಥಿಗಳು ಅರ್ಜಿಯ ಜೊತೆಗೆ ಜಾತಿ ಪ್ರಮಾಣಪತ್ರ, ಅಂಕಪಟ್ಟಿ ಹಾಗೂ ಎರಡು ಪಾಸ್ ಪೋರ್ಟ್ ಅಳತೆಯ ಪೋಟೋಗಳನ್ನು ದಿನಾಂಕ ಮೇ18ರ ಒಳಗಾಗಿ ಸಂಘದ ಕಾರ್ಯಾಲಯ ಗಾನಯೋಗಿ ಪಂಡಿತ ಪುಟ್ಟರಾಜ ಬಸ್ ನಿಲ್ದಾಣ ಗದಗ, ಮಳಿಗೆ ಸಂಖ್ಯೆ 5ರಲ್ಲಿ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಸಮಾನತೆ ಪ್ರತಿಪಾದಿಸಿದ ಬುದ್ಧ, ಬಸವ, ಅಂಬೇಡ್ಕರ್ : ವಿಠ್ಠಲದಾಸ ಪ್ಯಾಗೆ
“ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮದ ದಿನಾಂಕ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಲಾಗುವುದು. ಮಾಹಿತಿಗಾಗಿ 8073909262, 7619454583, 8951537019, 8746014115 ಸಂಪರ್ಕಿಸುವಂತೆ” ಜಿಲ್ಲಾಧ್ಯಕ್ಷ ಶಿವಾನಂದ ತಮ್ಮಣ್ಣವರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
