ಗದಗ | ನವ ಭಾರತದ ನಿರ್ಮಾತೃ ಅಂಬೇಡ್ಕರ್:‌ ಪ್ರಶಾಂತ್‌ ಜೆ ಸಿ

Date:

ಡಾ. ಬಿ ಆರ್ ಅಂಬೇಡ್ಕರ್ ಅವರು ಮನೋಸ್ವಾತಂತ್ರ್ಯ, ಧಾರ್ಮಿಕ ಸುಧಾರಣೆ, ಸಮಾನತೆ ಮತ್ತು ಸಾಮಾಜಿಕ ಪ್ರಜಾಪ್ರಭುತ್ವಕ್ಕೆ ಹೆಚ್ಚಿನ ಮಹತ್ವ ನೀಡಿದ್ದವರು. ಸಾಮಾಜಿಕ ಪ್ರಜಾಪ್ರಭುತ್ವದ ಹಾದಿಯ ಮೂಲಕ ನವ ಭಾರತವನ್ನು ರೂಪಿಸಿದರು ಎಂದು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಪ್ರಶಾಂತ ಜೆ ಸಿ ಅಭಿಪ್ರಾಯಪಟ್ಟರು.

- Advertisement -

ಭಾರತ ರತ್ನ ಬಾಬಾ ಸಾಹೇಬರ 134ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಅಂಬೇಡ್ಕರ್‌ ಅವರು ಪಾಶ್ಚಾತ್ಯ ಶಿಕ್ಷಣ ಪಡೆದಿದ್ದರೂ ಭಾರತೀಯ ಸಮಾಜದ ಮೂಲಭೂತ ಸಮಸ್ಯೆಗಳತ್ತ ತಮ್ಮ ದೃಷ್ಟಿಯನ್ನು ಕೇಂದ್ರಗೊಳಿಸಿದ್ದರು. ಅಂಬೇಡ್ಕರ್ ಅವರನ್ನು ‘ಆಧುನಿಕ ಬುದ್ಧ’ ಎಂದೂ ಕರೆಯಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವಿವಿ ಕುಲಪತಿ ಪ್ರೊ. ಸುರೇಶ ವಿ ನಾಡಗೌಡರ ಮಾತನಾಡಿ, “ಅಂಬೇಡ್ಕರ್ ಯುಗಪುರುಷರಾಗಿದ್ದು, ಅವರು ನವಯುಗದ ಚಿಂತಕರು. ಅವರು ಕಾನೂನಿನ ಶ್ರೇಷ್ಠತೆಯನ್ನು ಸಾರಿದ ಚೇತನ. ಅಂಬೇಡ್ಕರ್ ಅವರು ವ್ಯಕ್ತಿ ಮಾತ್ರವಲ್ಲ, ಜೀವಂತ ಪ್ರತಿಮೆ. ಅವರು ಭಾರತೀಯ ಜನತೆಗಾಗಿ ಎಡಬಿಡದೆ ಹೋರಾಡಿದ ಸಾರ್ವತ್ರಿಕ ನಾಯಕ. ಅವರನ್ನು ಯಾವುದೇ ಒಂದು ವರ್ಗಕ್ಕೆ ಸೀಮಿತಗೊಳಿಸುವ ಪ್ರಯತ್ನ ಆಗಬಾರದು. ಅವರ ಶ್ರೇಷ್ಠ ಆದರ್ಶಗಳನ್ನು ನಾವು ಪಾಲಿಸಬೇಕು” ಎಂದು ಹೇಳಿದರು.

ಇದನ್ನೂ ಓದಿ: ಗದಗ | ವರ್ಗಾವಣೆಯಾದ ಅಧಿಕಾರಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ

ಕಾರ್ಯಕ್ರಮದಲ್ಲಿ ಡಾ. ಶ್ರೀಧರ ಹಾದಿಮನಿ, ಉಮೇಶ ಬಾರಕೇರ, ಉಪನ್ಯಾಸಕ ಪ್ರಕಾಶ ಮಾಚೇನಹಳ್ಳಿ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...