ಗದಗ | ಅಂಬೇಡ್ಕರ್ ಜಯಂತಿ ಅರ್ಥಪೂರ್ಣ, ವ್ಯವಸ್ಥಿತವಾಗಿ ಆಚರಿಸುವಂತೆ ಸೂಚನೆ

Date:

Advertisements

ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಕೆ ಪಾಟೀಲ ತಿಳಿಸಿದರು.

ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ 118ನೇ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯ ಪ್ರಯುಕ್ತ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಕುರಿತು ನಿಗಾ ವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಅಚ್ಚುಕಟ್ಟಾಗಿ ಜಯಂತಿ ಕಾರ್ಯಕ್ರಮ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಸೂಚಿಸಿದರು.

Advertisements

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಹಸಿರುಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ ರಾಮ್ ಜಯಂತಿಯ ವೇದಿಕೆ ಕಾರ್ಯಕ್ರಮವನ್ನು ಏಪ್ರಿಲ್ 14ರ ಬೆಳಿಗ್ಗೆ 11ಕ್ಕೆ ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಜರುಗಿಸಲಾಗುವುದು. ಜಯಂತಿ ನಿಮಿತ್ತ ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತು ಕವನ ಸಂಕಲನ ಬಿಡುಗಡೆ ಮಾಡಲಾಗುವುದೆಂದು ಹೇಳಿದರು.

ವೇದಿಕೆ ಕಾರ್ಯಕ್ರಮಕ್ಕೂ ಜಯಂತಿ ನಿಮಿತ್ತ ಮೆರವಣಿಗೆಯು ಗದಗ ಬೆಟಗೇರಿ ನಗರಸಭೆ ಆವರಣದಿಂದ ವಿವಿಧ ಕಲಾ ತಂಡಗಳೊAದಿಗೆ ಸಂಘಟನೆಗಳೊಂದಿಗೆ ನಗರದ ವಿವಿಧೆಡೆ ಸಂಚರಿಸಿ ಕಾರ್ಯಕ್ರಮದ ಸ್ಥಳಕ್ಕೆ ಬಂದು ಸೇರುವುದು.

ಜಯಂತಿ ಕುರಿತು ವಿವಿಧೆಡೆ ಬ್ಯಾನರ್ ಅಳವಡಿಕೆಗೆ ಕ್ರಮ ವಹಿಸಲಾಗಿದೆ. ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ಉಪನ್ಯಾಸಕರ ಆಯ್ಕೆ ಸೇರಿದಂತೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಪ್ರಸ್ತುತ ಬೇಸಿಗೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಸಾಮಾನ್ಯ ಪ್ರವೇಶ ಪರೀಕ್ಷೆ, ಪೂರ್ವಸಿದ್ಧತಾ ಸಭೆ :ಪರೀಕ್ಷೆಗಳು ಸುವ್ಯವಸ್ಥಿತವಾಗಿ ಜರುಗಿಸಲು ಕ್ರಮ ವಹಿಸಿ : ಜಿಲ್ಲಾಧಿಕಾರಿ ಸೂಚನೆ

ಸಭೆಗೆ ಆಗಮಿಸುವಾಗ ಅದಿಕಾರಿಗಳು ತಮ್ಮ ಇಲಾಖೆಗಳಿಗೆ ಸಂಬಂಧಪಟ್ಟಂತೆ ನಿಖರವಾದ ಮಾಹಿತಿ ಒದಗಿಸಬೇಕು. ಕಾಮಗಾರಿಗಳ ಅನುಷ್ಠಾನದಲ್ಲಿ ನಿಷ್ಕಾಳಜಿ ಮಾಡಬಾರದೆಂದು ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ , ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ‌ ಎಸ್ ನೇಮಗೌಡ ಅಪರ ಜಿಲ್ಲಾದಿಕಾರಿ ಅನ್ನಪೂರ್ಣ ಎಂ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣುಗೋಗೇರಿ, ಭೂ ದಾಖಲೆಗಳ ಇಲಾಖೆ ಅಧಿಕಾರಿ ರುದ್ರಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್ ಎಸ್ ನೀಲಗುಂದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X