ಗದಗ | ವಾಯು ಮಾಲಿನ್ಯ ಮುಕ್ತ ಪರಿಸರ ನಿರ್ಮಾಣ ಆಗಬೇಕು: ರಮೇಶ ಮಡಿವಾಳರ

Date:

Advertisements

“ವಾಯು ಮಾಲಿನ್ಯ ಮುಕ್ತ ಪರಿಸರ ನಿರ್ಮಾಣ ಆಗಬೇಕು. ಆಗ ಮಾತ್ರ ಈ ವಿಶ್ವ ಪರಿಸರ ದಿನಾಚರಣೆಗೆ ಒಂದು ಅರ್ಥ ಬರುತ್ತದೆ” ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ರಮೇಶ ಮಡಿವಾಳರ ಹೇಳಿದರು.

ಗದಗ ಪಟ್ಟಣದ ಪ್ರಧಾನ ಅಂಚೆ ಕಚೇರಿ ಹಾಗೂ ವಿಭಾಗೀಯ ಕಚೇರಿ ಆಶ್ರಯದಲ್ಲಿ  ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಟ್ಟು ಉದ್ಘಾಟಿಸಿ ಮಾತನಾಡಿದರು.

“ಪ್ರತಿಯೊಬ್ಬ ನಾಗರಿಕರು ಮನೆಗೊಂದು ಗಿಡ ನೆಟ್ಟು ಅದನ್ನು ಪೋಷಿಸಿ,  ಅದನ್ನು ಬೆಳೆಸಿದಾಗ ಮಾತ್ರ ನಮ್ಮ ಪರಿಸರ ಸ್ವಚ್ಛವಾಗಿ ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ಕೊಡಲಿಕ್ಕೆ ಸಾಧ್ಯವಾಗಲಿದೆ” ಎಂದು ಹೇಳಿದರು.

Advertisements

“ಪರಿಸರವನ್ನು ಹಸಿರು ಮತ್ತು ಉತ್ತಮಗೊಳಿಸಲು ತಳಮಟ್ಟದಲ್ಲಿ ಕೆಲಸ ಮಾಡುವ ದಿಸೆಯಲ್ಲಿ ಪ್ರತಿಯೊಬ್ಬರು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅಷ್ಟೇ, ಅಲ್ಲದೆ, ಪ್ರತಿಯೊಬ್ಬ ನೌಕರರು ನಿಮ್ಮ ಕಚೇರಿ ಹಾಗೂ ಸುತ್ತಮುತ್ತ ಪರಿಸರವನ್ನು ಸ್ವಚ್ಛ ಮತ್ತು ಸುಂದರವಾಗಿ ಇರಿಸುವ ಸಲುವಾಗಿ  ಪ್ರತಿ ವಾರಕ್ಕೆ ಎರಡು ದಿನ ಶ್ರಮದಾನ‌ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮಾವ, ಅಳಿಯನ ಗಲಾಟೆ ಕೊಲೆಯಲ್ಲಿ ಅಂತ್ಯ

ಗದಗ ಉಪ ವಿಭಾಗದ ಸಹಾಯಕ ಅಂಚೆ ಅಧೀಕ್ಷಕ ಶ್ರೀಕಾಂತ ಜಾದವ, ವಿಭಾಗೀಯ ಸಹಾಯಕ ಅಂಚೆ ಅಧೀಕ್ಷಕ ವಿ.ಸುನೀಲ‌ಕುಮಾರ, ರೋಣ ಉಪ ಅಂಚೆ ನಿರೀಕ್ಷಕ ವೆಂಕಟೇಶರಡ್ಡಿ ಕೊಳ್ಳಿ,  ಪ್ರಧಾನ ಅಂಚೆ ಪಾಲಕರಾದ ಮಂಜುಳಾ ದೇಗಿನಾಳ, ಸಹಾಯಕ ಪ್ರಧಾನ ಅಂಚೆ ಪಾಲಕರಾದ ದೊಡ್ಡಪ್ಪ ಇಟಗಿ, ಶ್ರೀಕಾಂತ ತೆರದಾಳ, ಡಿ.ಜಿ.ಮ್ಯಾಗೇರಿ, ಶರಣಪ್ಪ ನಾಯ್ಕರ, ವೆಂಕಟೇಶ ಆಕಳವಾಡಿ, ಮನೋಹರ ಕಡಿಯವರ, ಸಿದ್ಧಲಿಂಗೇಶ ಯಂಡಿಗೇರಿ, ಉಮೇಶ ಸಂದಿಮನಿ, ವೆಂಕಪ್ಪ ಗುಗ್ಗರಿ  ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

Download Eedina App Android / iOS

X