ಗದಗ | ಸಿರಿಧಾನ್ಯದಲ್ಲಿ ಮೂಡಿದ ಚಿತ್ತಾಕರ್ಷಕ ರಂಗೋಲಿ

Date:

Advertisements

ಗದಗ ತಾಲೂಕಿನ ಹುಲಕೋಟಿಯ ಶ್ರೀ ಕೈಲಾಸ ಆಶ್ರಮದ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಸಿರಿಧಾನ್ಯ ಮೇಳ ಹಾಗೂ ಕೃಷಿ ತಂತ್ರಜ್ಞಾನ ಪ್ರದರ್ಶನ ಮೇಳವು ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ಸಿರಿಧಾನ್ಯದಲ್ಲಿ ಮೂಡಿದ ಚಿತ್ತಾಕರ್ಷಕ ರಂಗೋಲಿಯು ಅಪಾರ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು. ಸಿರಿಧಾನ್ಯ ಪ್ರತಿಯೊಬ್ಬರ ಆರೋಗ್ಯ ರಕ್ಷಣೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂಬ ಸಂದೇಶವನ್ನು ಸಾರುವಲ್ಲಿ ಚಿತ್ತಾಕರ್ಷಕ ರಂಗೋಲಿ ಸಫಲವಾಯಿತು. ಅಂತಾರಾಷ್ಟ್ರಿಯ ಮಟ್ಟದಲ್ಲಿ ಸಿರಿಧಾನ್ಯಗಳ ಪ್ರಾಮುಖ್ಯತೆಯನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ಸಿರಿಧಾನ್ಯಗಳಿಂದ ರಂಗೋಲಿ ಬಿಡಿಸಲಾಗಿತ್ತು. ಅದರ ಜೊತೆಗೆ ಸಿರಿಧಾನ್ಯಗಳಾದ ಸಾಮೆ, ಕೊರಲೆ, ಬರಗು, ಹಾರಕ, ಊದಲು, ರಾಗಿ, ನವಣೆ, ಸಜ್ಜೆ ಮುಂತಾದ ಧಾನ್ಯಗಳಿಂದ ಕೂಡಿದ ರಂಗೋಲಿಯನ್ನು ಅಂದವಾಗಿ ಬಿಡಿಸಲಾಗಿತ್ತು.

ಸ್ತ್ರೀ ಶಕ್ತಿ ಸ್ವ- ಸಹಾಯ ಸಂಘಗಳು ಉತ್ಪಾದಿಸಿದ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ಸಹ ಇಲ್ಲಿ ನಡೆಯಿತು. ಸ್ವದೇಶಿ ವಸ್ತುಗಳನ್ನು ಬಳಸಿ ಮಾರಾಟ ಮಾಡುವ ಉದ್ದೇಶ ಇದರಿಂದ ಜನರನ್ನು ಜಾಗೃತರನ್ನಾಗಿ ಮಾಡುವ ಸದುದ್ದೇಶ ಇಲ್ಲಿ ಸಾಕಾರವಾಯಿತು.

Advertisements

ಆಧುನಿಕ ಕೃಷಿ ಯಲ್ಲಿ ತಂತ್ರಜ್ಞಾನ ಬಳಕೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಕೃಷಿ ಯಂತ್ರಗಳ ಪ್ರದರ್ಶನವು ಆಗಮಿಸಿದ ರೈತರಲ್ಲಿ ಹುರುಪು ತಂದಿತ್ತು. ವಿವಿಧ ಕೃಷಿ ಉಪಕರಣಗಳಾದ ಮಿನಿ ಟ್ರ್ಯಾಕ್ಟರ್ ಸೇರಿದಂತೆ ಹಲವಾರು ಯಂತ್ರಗಳ ಪ್ರದರ್ಶನ ಸಹ ನಡೆಯಿತು.

ಕೃಷಿ, ತೋಟಗಾರಿಕೆ ತಂತ್ರಜ್ಞಾನ, ಬೆಳೆಗಳ ತಂತ್ರಜ್ಞಾನ, ನೈಸರ್ಗಿಕ ಕೃಷಿ, ಪಶು ಸಂಗೋಪನೆ ತಂತ್ರಜ್ಞಾನ, ಸಿರಿದಾನ್ಯ ಮೌಲ್ಯವರ್ದನೆ, ಆಧುನಿಕ ಕೃಷಿ ಉಪಕರಣಗಳ ಬಗ್ಗೆ ಪ್ರದರ್ಶನದಲ್ಲಿ ಜಾಗೃತಿ ಮೂಡಿಸಿದರು.

ರಾಜ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಕೆ. ಪಾಟೀಲ ಅವರು ಈ ಆಕರ್ಷಕ ಸಿರಿಧಾನ್ಯ ಮೇಳ, ಕೃಷಿ ತಂತ್ರಜ್ಞಾನ ಪ್ರದರ್ಶನಕ್ಕೆ ಚಾಲನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ತಪ್ಪಿತಸ್ಥನ ವಿರುದ್ಧ ಕೂನೂನು ಕ್ರಮಕ್ಕೆ ಒತ್ತಾಯ

ಈ ಸಂದರ್ಭದಲ್ಲಿ ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮೀಜಿ, ಹರಿ ಹರಪುರ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀ ನರಸಿಂಹ ಪೀಠದ ಸ್ವಯಂಪ್ರಕಾಶ ಸಚ್ಚಿದಾನಂದ ಸ್ವಾಮೀಜಿ, ಗದುಗಿನ ಶಿವಾನಂದ ಮಠದ ಅಭಿನವ ಶಿವಾನಂದ ಸ್ವಾಮೀಜಿ, ಶಿರಹಟ್ಟಿ ಫಕೀರೇಶ್ವರ ಮಹಾ ಸಂಸ್ಥಾನ ಮಠದ ಫಕೀರೇಶ್ವರ ಸ್ವಾಮೀಜಿ, ಗದಗ ವಿಜಯಪುರ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ, ಬೆಳಗಾವಿಯ ನಿಡಸೋಸಿ ದುರುದುಂಡೇಶ್ವರ ಸಿದ್ಧ ಸಂಸ್ಥಾನ ಮಠದ ನಿಜಲಿಂಗೇಶ್ವರ ಸ್ವಾಮೀಜಿ, ಬೆಂಗಳೂರಿನ ರಾಮೋಹಳ್ಳಿ ರಾಮಕೃಷ್ಣ ಯೋಗಾಶ್ರಮದ ಅಧ್ಯಕ್ಷ ಸ್ವಾಮಿ ಯೋಗೇಶ್ವರಾನಂದಜೀ, ಮಾಜಿ ಶಾಸಕ ಡಿ ಆರ್ ಪಾಟೀಲ್‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X