ಗದಗ | ಅಭಿವೃದ್ಧಿ ಕಾಣದ ಗ್ರಾಮ; ಗ್ರಾ.ಪಂ ಅಧ್ಯಕ್ಷೆ ವಿರುದ್ಧ ದುರಾಡಳಿತದ ಆರೋಪ

Date:

ಗದಗ ಜಿಲ್ಲೆ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಬೇಸಿಗೆ ಆರಂಭದ ಹಿನ್ನೆಲೆಯಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು, ಕಳೆದ 25 ದಿನಗಳಿಂದ ಕುಡಿಯುವ ನೀರಿಲ್ಲದೆ ಹಾಗೂ ಗ್ರಾಮದಲ್ಲಿ ಸ್ವಚ್ಚತೆಯನ್ನೇ ಕಾಣದೆ ಗಬ್ಬೆದ್ದು ನಾರುತ್ತಿರುವ ಚರಂಡಿಗಳಿಂದ ಗ್ರಾಮಸ್ಥರು ಸಿಟ್ಟಿಗೆದ್ದಿದ್ದು, ಗ್ರಾಮ ಪಂಚಾಯತಿಗೆ ಜಾನುವಾರುಗಳನ್ನು ಕಟ್ಟಿ ಮುತ್ತಿಗೆ ಹಾಕಿದ ಘಟನೆ ನಡೆದಿದೆ.

- Advertisement -

ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನ ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ. ಆದರೆ, ಅಧಿಕಾರಿಗಳು ಹಾಗೂ ಜನಪ್ರತಿನಿದಿಗಳು ಬೇಜವಾಬ್ದಾರಿ ಆಡಳಿತ ಎದ್ದುಕಾಣುತ್ತಿದ್ದರೂ, ಯಾವ ಒಬ್ಬ ಅಧಿಕಾರಿಯೂ ಕೂಡ ಜನರ ಗೋಳು ಕೇಳುತ್ತಿಲ್ಲ. ಅಧಿಕಾರಿಗಳು ಹಾಗೂ ಪ್ರತಿನಿಧಿಗಳು ಜನರ ಜೀವನದ ಜೊತೆ ಚಲ್ಲಾಟ ಆಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗ್ರಾಮ ಪಂಚಾಯತ ಅಧ್ಯಕ್ಷೆ ಗಂಗಮ್ಮ ಜಂಗಣ್ಣವರ ಅವರು, ಗ್ರಾಮದ ಅಭಿವೃದ್ಧಿ ಕೆಲಸ ಮಾಡಲು ಸಿಬ್ಬಂದಿ ಹಿಂದೇಟು ಹಾಕುತ್ತಿದ್ದು, ಗ್ರಾ.ಪಂ ಅಧ್ಯಕ್ಷರ ಮಾತು ಯಾರು ಯಾವ ಸಿಬ್ಬಂದಿಯೂ ಮಾತು ಕೇಳುವುದಿಲ್ಲ ಎಂದು ಉಡಾಫೆ ಉತ್ತರ ನೀಡುತ್ತಾರೆ ಹಾಗೂ ಗ್ರಾಮದ ಜನರ ಜೀವನದ ಜೊತೆ ಚೆಲ್ಲಾಟ ಆಡುತ್ತಿದ ಅಧ್ಯಕ್ಷರು ಹಾಗೂ ಸದಸ್ಯರು ರಾಜೀನಾಮೆ ನೀಡಬೇಕು ಎಂದು ಸಾರ್ವಜನಿಕರು ಪಟ್ಟು ಹಿಡಿದರು.

ಗ್ರಾಮದಲ್ಲಿ ಚುನಾಯಿತ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಖಾಸಗಿ ವಿಂಡ್ ಕಂಪನಿಯಲ್ಲಿ ಭ್ರಷ್ಟಾಚಾರಕ್ಕೆ ಕೈ ಹಾಕಿದ್ದೇವೆ.ಎನ್.ಓ.ಸಿ. ಕೊಟ್ಟಿಲ್ಲ 13 ಜನ ಜನಪ್ರತಿನಿದಿಗಳು ತಲಾ 25 ಸಾವಿರ ರೂ. ತಗೆದುಕೊಂಡಿದ್ದೇವೆ. ಗ್ರಾಮವನ್ನು ಬೇಕಾಬಿಟ್ಟಿ ಆಟವಾಡಿಸಿ ದುಡ್ಡು ಮಾಡಿದ  ಲಂಚಕೋರರು. 2 ದಿನದ  ಹಿಂದೆ 1 ಲಕ್ಷ ರೂ. ಎಲೆಕ್ಟ್ರಿಕಲ್ ಸಾಮಗ್ರಿಗಳನ್ನು ತಂದಿದ್ದೇನೆ ಎಂದು ಬಿಲ್ ಹಾಕಿದ್ದಾರೆ. ಪಂಚಾಯಿತಿಯಲ್ಲಿ ನಯ ಪೈಸೆ ಸಾಮಗ್ರಿ ಇಲ್ಲ. ಅಧ್ಯಕ್ಷೆಗೆ ಬೇಕಾಗಿರುವದು ದುಡ್ಡು. ನಾನು ಗ್ರಾ.ಪಂ ದುರಾಡಳಿತದಿಂದ ಬೇಸತ್ತು ರಾಜೀನಾಮೆ ನೀಡಲು ತಿರ್ಮಾನಿಸಿದ್ದೇನೆ ಎನ್ನುತ್ತಾರೆ ಗ್ರಾ.ಪಂ ಸದಸ್ಯೆ ನಿರ್ಮಲಾ ಆದಿ.

ಗ್ರಾಮ ಪಂಚಾಯತ ಅಧ್ಯಕ್ಷರ ಮಾತು ಯಾವೊಬ್ಬ ಸದಸ್ಯರು ಮಾತು ಕೇಳುವುದಿಲ್ಲ.ನನ್ನ ಅಧ್ಯಕ್ಷ ಅವಧಿಯಲ್ಲಿ ನನ್ನ ಮನೆಯ ಮುಂದೆ ಸಿ.ಸಿ‌.ರಸ್ತೆ ಮಾಡಿಸಿದಿನಿ.ಹಾಗೂ ಸಂತೋಷ ಕೋರಿ ಅವರ ಮನೆಯ ಹತ್ತಿರ ಸಿ.ಸಿ.ರಸ್ತೆಯ ಕಾಮಗಾರಿ ಮಾಡಿಸಿದ್ದೇನೆ ಎಂದು ಒಪ್ಪಿಕೊಂಡ ಅಧ್ಯಕ್ಷರು  ಎನ್ನುತ್ತಾರೆ ಗ್ರಾ.ಪಂ ಅಧ್ಯಕ್ಷೆ ಗಂಗವ್ವ ಜಂಗಣ್ಣವರ.

ಇನ್ನು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ಯಾಮ್ ಸುಂದರ್ ಇನಾಮದಾರ ಅವರು, ಗ್ರಾಮದ ಸಮಸ್ಯೆಯನ್ನು ಪರಿಗಣಿಸಿ 2 ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುವೆ. ಗ್ರಾ‌.ಪಂ ಸಮಸ್ಯೆಗಳ ಕುರಿತು ಸಿಇಒ ಅವರ ಗಮನಕ್ಕೆ ತಂದು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಮುಂದಾಗುತ್ತೇನೆ ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಶೇಕಣ್ಣ ಮಾರನಬಸರಿ, ಕುಬೇರಪ್ಪ ಪಲ್ಲೆದ, ಮಲ್ಲಪ್ಪ ಪಲ್ಲೆದ, ಅಶೋಕ ಭಜಂತ್ರಿ, ವೀರಪ್ಪ ಕೋಣಪುರು, ಅನಿಲ್ ತಳವಾರ, ಮಂಜುನಾಥ್ ಭಜಂತ್ರಿ ಸೇರಿದಂತೆ ಗ್ರಾಮಸ್ಥರು ಹಾಗೂ ಮಹಿಳೆಯರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...