ಹೊಸ ತಲೆಮಾರಿನ ವಚನ ಸಾಹಿತ್ಯ ಅಧ್ಯಯನಕಾರರಿಗೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಜಂಟಿಯಾಗಿ ನೀಡುವ ‘ರಮಣಶ್ರೀ ಶರಣ ಉತ್ತೇಜನ ಪ್ರಶಸ್ತಿ’ ಘೋಷಣೆಯಾಗಿದ್ದು, ಗದಗ ಜಿಲ್ಲೆಯ ರೋಣ ತಾಲೂಕಿನ ಡ.ಸ.ಹಡಗಲಿ ಗ್ರಾಮದ ಡಾ. ಅಂದಯ್ಯ ಅರವಟಗಿಮಠ ಅವರು 2024ನೇ ಸಾಲಿನ ‘ರಮಣಶ್ರೀ ಶರಣ ಉತ್ತೇಜನ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹20 ಸಾವಿರ ನಗದು ಮತ್ತು ಫಲಕ ಒಳಗೊಂಡಿದ್ದು, ನ.18ರಂದು ಬೆಂಗಳೂರಿನ ರಮಣಶ್ರೀ ಹೋಟೆಲ್‌ನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಈ ಸುದ್ದಿ ಓದದ್ದೀರಾ? ಕೊಪ್ಪಳ | ಶಿಷ್ಟಾಚಾರ ಉಲ್ಲಂಘನೆ: ಶಾಸಕ ಜನಾರ್ದನ ರೆಡ್ಡಿ ಚಾಲಕನ ವಿರುದ್ಧ ಎಫ್‌ಐಆರ್
ಪ್ರಶಸ್ತಿಗೆ ಆಯ್ಕೆಯಾಗಿರುವ ಅಂದಯ್ಯ ಅರವಟಗಿಮಠ ಅವರಿಗೆ ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲರು, ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.