ಗದಗ | ಮತಗಟ್ಟೆ ಮಟ್ಟದ ಚುನಾವಣಾ ಭಾಗದ ಕೆಲಸ ನೀಡದಂತೆ ಅಂಗನವಾಡಿ ನೌಕರರು ಜಿಲ್ಲಾಧಿಕಾರಿಗೆ ಮನವಿ

Date:

“ನಮ್ಮ ಇಲಾಖೆಯ ಕೆಲಸವನ್ನು ಹೊರತುಪಡಿಸಿ ಬೇರೆ ಇಲಾಖೆಯ ಕೆಲಸ ಮಾಡಬಾರದೆಂದು ಆದೇಶವಿದೆ. ನಮಗೆ ಅಂಗನವಾಡಿ ಕೆಲಸ ಹೆಚ್ಚೆ ಇದೆ. ಪೋಷಣೆ, ಎಫ್.ಆರ್‌.ಎಸ್, ಪಿ.ಎಂ.ಎ.ವಿ.ವಾಯ್, ಭಾಗ್ಯಲಕ್ಷ್ಮಿ , ಮಾತೃಪೂರ್ಣ ಯೋಜನೆ ಇಷ್ಟೆಲ್ಲಾ ಕೆಲಸಗಳನ್ನು ಮಾಡುತ್ತಿದ್ದೇವೆ. ಹೆಚ್ಚುವರಿಯಾಗಿ ಅಂಗನವಾಡಿ ನೌಕರರಿಗೆ ಬಿ.ಎಲ್.ಓ. ಕೆಲಸವನ್ನು ನೀಡಬಾರದು” ಎಂದು ಸಿಐಟಿಯು ಮುಖಂಡ ಮಹೇಶ ಹಿರೇಮಠ ಒತ್ತಾಯಿಸಿದರು.

- Advertisement -

“ಗದಗ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿ ವತಿಯಿಂದ ಮತಗಟ್ಟೆ ಮಟ್ಟದ (ಬಿ.ಎಲ್.ಓ) ಚುನಾವಣಾ ಭಾಗದ ಕೆಲಸ ನೀಡದಂತೆ ಜಿಲ್ಲಾ ಪಂಚಾಯತ ಸಿಇಒ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಈ ಎಲ್ಲ ಕೆಲಸದ ಮಧ್ಯೆ ಅಂಗನವಾಡಿ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ೧೦.೦೦ ರಿಂದ ೧.೩೦ ರವರೆಗೆ ಕೆಲಸವಿದೆ. ಇಷ್ಟೆಲ್ಲಾ ಕೆಲಸವಿದ್ದರೂ ಬಿ.ಎಲ್.ಓ. ಕೆಲಸ ಮಾಡಲು ಹೋದರೆ ನಮ್ಮ ಅಂಗನವಾಡಿ ಮಕ್ಕಳ ಶಾಲಾ ಪೂರ್ವ ಶಿಕ್ಷಣ ಕುಂಠಿತಗೊಳ್ಳುತ್ತದೆ. ಆದ ಕಾರಣ ನಮ್ಮ ಇಲಾಖೆಯ ಕೆಲಸ ಹೊರತುಪಡಿಸಿ ಬೇರೆ ಕೆಲಸಗಳನ್ನು ಮಾಡಲು ಆಗುವುದಿಲ್ಲ” ಎಂದು ವಿನಂತಿಸಿಕೊಂಡರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಪುಸ್ತಕಗಳು ನಮ್ಮ ವ್ಯಕ್ತಿತ್ವ ನಿರ್ಮಾಣದ ಶಿಲ್ಪಿಗಳು: ಡಾ.ವಿಜಯಮಹಾಂತೇಶ ದಾನಮ್ಮನವರ

ಈ ಸಂದರ್ಭದಲ್ಲಿ ಮಾರುತಿ ಚಿಟಗಿ, ಪೀರು ರಾಠೋಡ, ಅಧ್ಯಕ್ಷರಾದ ಸಾವಿತ್ರಿ ಸಬ್ನಿಸ್, ಶಾರದಾ ರೋಣದ, ಗಂಗಮ್ಮ ದೇವರಡ್ಡಿ, ಸುಶೀಲಾ ಚಲವಾದಿ, ಗಿರಿಜಾ ಮಾಚಕ್ಕನವರ, ಕವಿತಾ ಬಡಿಗೇರ, ನೀಲಮ್ಮ ಹಿರೇಮಠ, ಅನ್ನಪೂರ್ಣ ಸಾಲಿಮಠ, ಶಾರದಾ ಹಳೇಮನಿ, ಮಂಗಲಾ ಪಟ್ಟಣಶೆಟ್ಟಿ, ಕಮಲಾಕ್ಷಿ ಬೀಳಗಿ, ಗಂಗಮ್ಮ ಮಾದರ, ಜ್ಯೋತಿ, ಶರಣಮ್ಮ ವಾಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...